Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್‌ನಲ್ಲಿ ಕೆಟ್ಟ ದಾಖಲೆ ಬರೆದ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ

IPL 2021: CSK Captain MS Dhoni ducks records in IPL

ಮುಂಬೈ: ಮುಂಬೈಯ ವಾಂಖೆಡೆ ಸ್ಟೇಡಿಯಂನಲ್ಲಿ ಶನಿವಾರ (ಏಪ್ರಿಲ್ 10) ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) ದ್ವಿತೀಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 7 ವಿಕೆಟ್ ಸುಲಭ ಜಯ ಗಳಿಸಿದೆ. ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ಶಿಖರ್ ಧವನ್ ಮತ್ತು ಪೃಥ್ವಿ ಶಾ ಸ್ಫೋಟಕ ಅರ್ಧ ಶತಕದೊಂದಿಗೆ ಡೆಲ್ಲಿ ತಂಡ ಟೂರ್ನಿಯಲ್ಲಿ ಶುಭಾರಂಭ ಕಂಡಿದೆ.

ಐಪಿಎಲ್ 2021: ಸುದ್ದಿ, ವಿಶ್ಲೇಷಣೆ, ಅಂಕಿ ಅಂಶಗಳುಳ್ಳ ವಿಶೇಷ ಪುಟದ ಲಿಂಕ್

ಅನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದ ತಂಡ ಚೆನ್ನೈ ಸೂಪರ್ ಕಿಂಗ್ಸ್‌ನ ನಾಯಕತ್ವ ವಹಿಸಿಕೊಂಡಿದ್ದ ನಾಯಕ ಎಂಎಸ್ ಧೋನಿ 2 ಎಸೆತಗಳಲ್ಲಿ 0 ರನ್‌ಗೆ ವಿಕೆಟ್ ಒಪ್ಪಿಸಿದ್ದರು. ಧೋನಿ ನೀರಸ ಬ್ಯಾಟಿಂಗ್‌ನಿಂದ ಅವರ ಹೆಸರಿನಲ್ಲಿ ಕೆಟ್ಟ ದಾಖಲೆ ಸೇರ್ಪಡೆಯಾಗಿದೆ.

ಕೂಲ್ ಕ್ಯಾಪ್ಟನ್ ಖ್ಯಾತಿಯ ಧೋನಿ ಐಪಿಎಲ್‌ನಲ್ಲಿ ಬೇರೆ ಬೇರೆ ತಂಡಗಳ ವಿರುದ್ಧ ಸೊನ್ನೆಗೆ ಔಟಾಗಿರುವ ಕೆಟ್ಟ ದಾಖಲೆ ನಿರ್ಮಿಸಿದ್ದಾರೆ. ಇದರಲ್ಲಿ ಧೋನಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಇದು ಮೂರನೇ ಬಾರಿಗೆ ಸೊನ್ನೆಗೆ ಔಟಾದಂತಾಗಿದೆ. ಈ ಹಿಂದೆ 2010ರಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ (ಈಗಿನ ಡೆಲ್ಲಿ ಕ್ಯಾಪಿಟಲ್ಸ್) ವಿರುದ್ಧ 2 ಬಾರಿ ಸೊನ್ನೆಗೆ ಔಟ್ ಆಗಿದ್ದರು.

ಎಂಎಸ್ ಧೋನಿ ಐಪಿಎಲ್‌ನಲ್ಲಿ ಸೊನ್ನೆಗೆ ಔಟಾದ ದಾಖಲೆಗಳು
* 0 (1) v ರಾಜಸ್ಥಾನ್ ರಾಯಲ್ಸ್ ವಿರುದ್ಧ, ಚೆನ್ನೈ, 2010
* 0 (2) v ಡೆಲ್ಲಿ ಡೇರ್ ಡೆವಿಲ್ಸ್, ಚೆನ್ನೈ, 2010
* 0 (1) v ಮುಂಬೈ ಇಂಡಿಯನ್ಸ್, ಮುಂಬೈ, 2015
* 0 (2) v ಡೆಲ್ಲಿ ಕ್ಯಾಪಿಟಲ್ಸ್, ಮುಂಬೈ, 2021 *

Story first published: Sunday, April 11, 2021, 23:34 [IST]
Other articles published on Apr 11, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+