ಡೆಲ್ಲಿ ವಿರುದ್ಧ ಸಿಎಸ್‌ಕೆ ಸೋಲಿಗೆ ಕಾರಣ ಮತ್ತು ಧೋನಿ ಕಳಪೆ ಬ್ಯಾಟಿಂಗ್ ಕುರಿತು ತುಟಿ ಬಿಚ್ಚಿದ ಹೆಡ್ ಕೋಚ್

ಕಳೆದ ವರ್ಷ ಇದೇ ಯುಎಇಯಲ್ಲಿ ನಡೆದಿದ್ದ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ತೀರಾ ಕಳಪೆ ಪ್ರದರ್ಶನವನ್ನು ನೀಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡು ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿತ್ತು.

ಹೀಗೆ ಕಳೆದ ಬಾರಿ ನೆಲಕಚ್ಚಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸಾಲು ಸಾಲು ಪಂದ್ಯಗಳಲ್ಲಿ ಗೆಲ್ಲುವುದರ ಮೂಲಕ ಕಮ್ ಬ್ಯಾಕ್ ಮಾಡಿದೆ. ಹೌದು, ಪ್ರಸ್ತುತ ನಡೆಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸಾಲು ಸಾಲು ಪಂದ್ಯಗಳಲ್ಲಿ ಗೆಲುವು ಸಾಧಿಸುವುದರ ಮೂಲಕ ಈ ಟೂರ್ನಿಯಲ್ಲಿ ಪ್ಲೇ ಆಫ್ ಹಂತವನ್ನು ಪ್ರವೇಶಿಸಿದ ಚೊಚ್ಚಲ ತಂಡ ಎಂಬ ಹೆಗ್ಗಳಿಕೆಗೂ ಪಾತ್ರವಾಯಿತು.

ಐಪಿಎಲ್: ಆಡಿದ ಮೊದಲ ಪಂದ್ಯದಲ್ಲಿಯೇ ದಾಖಲೆ ಬರೆದ ಸನ್ ರೈಸರ್ಸ್ ಹೈದರಾಬಾದ್‌ನ ಉಮ್ರಾನ್ ಮಲಿಕ್ಐಪಿಎಲ್: ಆಡಿದ ಮೊದಲ ಪಂದ್ಯದಲ್ಲಿಯೇ ದಾಖಲೆ ಬರೆದ ಸನ್ ರೈಸರ್ಸ್ ಹೈದರಾಬಾದ್‌ನ ಉಮ್ರಾನ್ ಮಲಿಕ್

ಚೆನ್ನೈ ಸೂಪರ್ ಕಿಂಗ್ಸ್ ಜೊತೆಗೆ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸಾಲು ಸಾಲು ಪಂದ್ಯಗಳನ್ನು ಗೆಲ್ಲುವುದರ ಮೂಲಕ ಟೂರ್ನಿ ಆರಂಭವಾದಾಗಿನಿಂದಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಅಂಕ ಪಟ್ಟಿಯಲ್ಲಿ ಪೈಪೋಟಿಯನ್ನು ನೀಡುತ್ತಾ ಬಂದಿದೆ. ಅಷ್ಟೇ ಅಲ್ಲದೆ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಜೊತೆ ಕಣಕ್ಕಿಳಿದಿರುವ ಎರಡೂ ಪಂದ್ಯಗಳಲ್ಲಿಯೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಧೋನಿ ಬಳಗವನ್ನು ಬಗ್ಗು ಬಡಿದಿದೆ. ಹೀಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮೇಲೆ ಟೂರ್ನಿಯಲ್ಲಿ ಹಿಡಿತವನ್ನು ಸಾಧಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸದ್ಯ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಇನ್ನು ಸೋಮವಾರ ( ಅಕ್ಟೋಬರ್ 4 ) ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಟೂರ್ನಿಯ ಲೀಗ್ ಹಂತದ ಪಂದ್ಯಗಳಲ್ಲಿ ಎರಡನೇ ಬಾರಿ ಮುಖಾಮುಖಿಯಾದವು. ಈ ಹಣಾಹಣಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 3 ವಿಕೆಟ್‍ಗಳ ರೋಚಕ ಗೆಲುವನ್ನು ಸಾಧಿಸುವುದರ ಮೂಲಕ ಟೂರ್ನಿಯಲ್ಲಿ ತನ್ನ ಹತ್ತನೇ ಗೆಲುವನ್ನು ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ದ್ವಿತೀಯ ಸ್ಥಾನಕ್ಕೆ ತಳ್ಳಿತು.

ಮುಂಬೈ ಗೆಲುವಿನಾಸೆಗೆ ಮುಳುವಾದ ಅಶ್ವಿನ್, ಶ್ರೇಯಸ್; ಮುಂಬೈ ಇಂಡಿಯನ್ಸ್‌‌ ಪ್ಲೇಆಫ್ ಕಥೆಯೇನು?ಮುಂಬೈ ಗೆಲುವಿನಾಸೆಗೆ ಮುಳುವಾದ ಅಶ್ವಿನ್, ಶ್ರೇಯಸ್; ಮುಂಬೈ ಇಂಡಿಯನ್ಸ್‌‌ ಪ್ಲೇಆಫ್ ಕಥೆಯೇನು?

ಹಾಗೂ ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಹೆಚ್ಚು ಹೊತ್ತು ಮೈದಾನದಲ್ಲಿದ್ದರೂ ರನ್ ಗಳಿಸಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು ಪಂದ್ಯ ಮುಗಿದ ನಂತರ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಹೆಡ್ ಕೋಚ್ ಸ್ಟೀಫನ್ ಫ್ಲೆಮಿಂಗ್ ಮಾತನಾಡಿದ್ದು ಈ ಕೆಳಕಂಡಂತೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಧೋನಿ ಮಾತ್ರವಲ್ಲ ಎಲ್ಲಾ ಆಟಗಾರರು ರನ್ ಗಳಿಸಲು ಪರದಾಡಿದರು

ಧೋನಿ ಮಾತ್ರವಲ್ಲ ಎಲ್ಲಾ ಆಟಗಾರರು ರನ್ ಗಳಿಸಲು ಪರದಾಡಿದರು

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಎಂಎಸ್ ಧೋನಿ ರನ್ ಗಳಿಸಲು ಆಗದೇ ಪರದಾಡಿದರು ಎಂಬ ವಿಚಾರದ ಕುರಿತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಹೆಡ್ ಕೋಚ್ ಸ್ಟೀಫನ್ ಫ್ಲೆಮಿಂಗ್ ಮಾತನಾಡಿದ್ದು 'ಎಂ ಎಸ್ ಧೋನಿ ಮಾತ್ರವಲ್ಲ ಎರಡೂ ತಂಡಗಳ ಆಟಗಾರರು ಕೂಡ ಈ ಪಂದ್ಯದಲ್ಲಿ ರನ್ ಗಳಿಸಲು ಪರದಾಡಿದರು. ಪಿಚ್ ರನ್ ಗಳಿಸಲು ಸಹಕಾರಿಯಾಗಿರಲಿಲ್ಲ, ಹೀಗಾಗಿ ಎರಡೂ ತಂಡಗಳು ಕೂಡ ಅಲ್ಪ ಮೊತ್ತವನ್ನು ಕಲೆಹಾಕಿದವು' ಎಂದು ಎಂ ಎಸ್ ಧೋನಿ ನಿಧಾನಗತಿಯ ಬ್ಯಾಟಿಂಗ್‌ನ್ನು ಚೆನ್ನೈ ತಂಡದ ಹೆಡ್ ಕೋಚ್ ಸ್ಟೀಫನ್ ಫ್ಲೆಮಿಂಗ್ ಸಮರ್ಥಿಸಿಕೊಂಡರು.

9ನೇ ಓವರ್‌ಗೆ ಕಣಕ್ಕಿಳಿದ ಧೋನಿ ಕೊನೆಯ ಓವರ್‌ವರೆಗೂ ಕಣದಲ್ಲಿದ್ದರೂ ಯಾವುದೇ ಬೌಂಡರಿ ಬಾರಿಸಲಿಲ್ಲ!

9ನೇ ಓವರ್‌ಗೆ ಕಣಕ್ಕಿಳಿದ ಧೋನಿ ಕೊನೆಯ ಓವರ್‌ವರೆಗೂ ಕಣದಲ್ಲಿದ್ದರೂ ಯಾವುದೇ ಬೌಂಡರಿ ಬಾರಿಸಲಿಲ್ಲ!

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ರಾಬಿನ್ ಉತ್ತಪ್ಪ ಔಟ್ ಆದ ಬಳಿಕ ಪಂದ್ಯದ 9ನೇ ಓವರ್‌ನಲ್ಲಿ ಎಂಎಸ್ ಧೋನಿ ಕಣಕ್ಕಿಳಿದರು. ಹೀಗೆ ಹಿಂದಿನ ಪಂದ್ಯಗಳಿಗಿಂತ ಬೇಗನೆ ಕಣಕ್ಕಿಳಿದ ಎಂಎಸ್ ಧೋನಿ ಕಡೆಯಿಂದ ಭರ್ಜರಿ ಬ್ಯಾಟಿಂಗ್ ಪ್ರದರ್ಶನವನ್ನು ನಿರೀಕ್ಷೆ ಮಾಡಲಾಗಿತ್ತು. ಆದರೆ ಪಂದ್ಯದ ಕೊನೆಯ ಓವರ್‌ನವರೆಗೂ ಕಣದಲ್ಲಿದ್ದ ಎಂಎಸ್ ಧೋನಿ ಒಂದೇ ಒಂದೂ ಬೌಂಡರಿಯನ್ನು ಕೂಡ ಬಾರಿಸಲಾಗಲಿಲ್ಲ. 27 ಎಸೆತಗಳನ್ನು ಎದುರಿಸಿದ ಎಂಎಸ್ ಧೋನಿ 18 ರನ್ ಬಾರಿಸಿ ಪಂದ್ಯದ ಅಂತಿಮ ಓವರ್‌ನಲ್ಲಿ ವಿಕೆಟ್ ಒಪ್ಪಿಸಿ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು.

Dhoni ಆಟದ ಬಗ್ಗೆ ಪಂದ್ಯ ಮುಗಿದ ನಂತರ Fleming ಹೇಳಿದ್ದೇನು | Oneindia Kannada
ಪಂದ್ಯದ ಸೋಲಿಗೆ ಕಾರಣ ತಿಳಿಸಿದ ಸ್ಟೀಫನ್ ಫ್ಲೆಮಿಂಗ್

ಪಂದ್ಯದ ಸೋಲಿಗೆ ಕಾರಣ ತಿಳಿಸಿದ ಸ್ಟೀಫನ್ ಫ್ಲೆಮಿಂಗ್

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಹೆಚ್ಚಿನ ರನ್ ಗಳಿಸಲು ಪಿಚ್ ಸಹಕಾರಿಯಾಗಿರಲಿಲ್ಲ ಎಂದು ಹೇಳಿಕೆ ನೀಡಿದ ಸ್ಟೀಫನ್ ಫ್ಲೆಮಿಂಗ್ 10-15 ರನ್ ಕಡಿಮೆ ಗಳಿಸಿದ್ದೇ ಸೋಲಿಗೆ ಕಾರಣವಾಯಿತು ಎಂದು ಹೇಳಿಕೆ ನೀಡಿದ್ದಾರೆ. ತಮ್ಮ ತಂಡ ಗಳಿಸಿದ ರನ್‌ಗಿಂತ 10-15 ಅಧಿಕ ರನ್‌ಗಳನ್ನು ಕಲೆ ಹಾಕಿದ್ದರೆ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾಗುತ್ತಿತ್ತು ಎಂದು ಸ್ಟೀಫನ್ ಫ್ಲೆಮಿಂಗ್ ಅಭಿಪ್ರಾಯಪಟ್ಟಿದ್ದಾರೆ.

For Quick Alerts
ALLOW NOTIFICATIONS
For Daily Alerts
Story first published: Tuesday, October 5, 2021, 10:09 [IST]
Other articles published on Oct 5, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X