ಐಪಿಎಲ್ 2021: ಕ್ವಾಲಿಫೈರ್ 1ರಲ್ಲಿ ಡೆಲ್ಲಿ vs ಚೆನ್ನೈ ಮುಖಾಮುಖಿ

ದುಬೈ: ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಅಕ್ಟೋಬರ್ 10ರಂದು ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ವಾಲಿಫೈಯರ್ 1 ಪಂದ್ಯದಲ್ಲಿ ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಹಿಂದಿನ ಸೀಸನ್‌ನ ಫೈನಲ್ ಸ್ಪರ್ಧಿ ಡೆಲ್ಲಿ ಕ್ಯಾಪಿಟಲ್ಸ್ ಕಾದಾಡಲಿವೆ. ಅನುಭವಿ ಆಟಗಾರ ಎಂಎಸ್ ಧೋನಿ ಕ್ಯಾಪ್ಟನ್ಸಿಯ ಚೆನ್ನೈ ಮತ್ತು ಯುವ ಬ್ಯಾಟ್ಸ್‌ಮನ್ ರಿಷಭ್ ಪಂತ್ ನಾಯಕತ್ವ ತಂಡಗಳ ಮುಖಾಮುಖಿ ಕುತೂಹಲ ಮಾಡಿಸಿದೆ.
ಲೀಗ್ ಹಂತದಲ್ಲಿ ಆಡಿರುವ 14 ಪಂದ್ಯಗಳಲ್ಲಿ 10 ಪಂದ್ಯಗಳನ್ನು ಗೆದ್ದು ಡೆಲ್ಲಿ ಕ್ಯಾಪಿಟಲ್ಸ್ 20 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿ ಸ್ಪರ್ಧೆ ಮುಗಿಸಿದರೆ, ಲೀಗ್‌ನಲ್ಲಿ 14 ಪಂದ್ಯಗಳಲ್ಲಿ 9 ಪಂದ್ಯ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ಕ್ವಾಲಿಫೈಯರ್ ಒಂದರಲ್ಲಿ ಆಡುತ್ತಿದೆ. ಎರಡೂ ತಂಡಗಳೂ ಬಲಿಷ್ಠವಾಗಿದ್ದು ಕದನ ಕುತೂಹಲ ಮೂಡಿಸಿದೆ. 7.30 PMಗೆ ಪಂದ್ಯ ಶುರುವಾಗಲಿದೆ.
ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ತಂಡ
ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ರಿಪಾಲ್ ಪಟೇಲ್/ಮಾರ್ಕಸ್ ಸ್ಟೋಯಿನಿಸ್, ಶಿಮ್ರನ್ ಹೆಟ್ಮೈರ್, ಅಕ್ಸರ್ ಪಟೇಲ್, ಆರ್ ಅಶ್ವಿನ್, ಕಗಿಸೊ ರಬಾಡಾ, ಅನ್ರಿಚ್ ನಾರ್ಟ್ಜೆ, ಆವೇಶ್ ಖಾನ್.
ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ತಂಡ
ಫಾಫ್ ಡು ಪ್ಲೆಸಿಸ್, ಋತುರಾಜ್ ಗಾಯಕವಾಡ್, ಮೊಯೀನ್ ಅಲಿ, ಅಂಬಟಿ ರಾಯುಡು, ರಾಬಿನ್ ಉತ್ತಪ್ಪ/ಸುರೇಶ್ ರೈನಾ, ಎಂಎಸ್ ಧೋನಿ, ಡ್ವೇನ್ ಬ್ರಾವೋ, ರವೀಂದ್ರ ಜಡೇಜಾ, ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ಜೋಶ್ ಹೇಝಲ್ವುಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications