For Quick Alerts
ALLOW NOTIFICATIONS  
For Daily Alerts
 

ಒಂದೇ ಪಂದ್ಯದಲ್ಲಿ ರೋಹಿತ್ ಮತ್ತು ವಾರ್ನರ್‌ ದಾಖಲೆಯನ್ನು ಸರಿಗಟ್ಟಿದ ಧವನ್

IPL 2021, CSK vs DC : Shikhar Dhawan overtook David Warner and Rohit Sharma in IPL most runs

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಎರಡನೇ ಪಂದ್ಯ ಶನಿವಾರ ( ಏಪ್ರಿಲ್ 10) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ನಡೆಯಿತು. ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 7 ವಿಕೆಟ್ ನಷ್ಟಕ್ಕೆ 20 ಓವರ್‌ಗಳಲ್ಲಿ 188 ರನ್ ಗಳಿಸಿತು. ಡೆಲ್ಲಿ ಕ್ಯಾಪಿಟಲ್ಸ್ ತಂಡ 18.4 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಿ ಚೆನ್ನೈ ವಿರುದ್ಧ ಭರ್ಜರಿ ಗೆಲುವನ್ನು ದಾಖಲಿಸಿತು.

ಚೆನ್ನೈ ವಿರುದ್ಧದ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್ ಮಾಡಿದರು. 54 ಎಸೆತಗಳಲ್ಲಿ 85 ರನ್ ಗಳಿಸಿದ ಧವನ್ 10 ಬೌಂಡರಿ ಮತ್ತು 2 ಸಿಕ್ಸರ್ ಚಚ್ಚಿದರು. ಈ ಮೂಲಕ ಶಿಖರ್ ಧವನ್ ಡೇವಿಡ್ ವಾರ್ನರ್ ಮತ್ತು ರೋಹಿತ್ ಶರ್ಮಾ ಅವರನ್ನು ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಸರಿಗಟ್ಟಿದ್ದಾರೆ.

ಈ ಪಂದ್ಯ ಆರಂಭಕ್ಕೂ ಮುನ್ನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಶಿಖರ್ ಧವನ್ ಐದನೇ ಸ್ಥಾನದಲ್ಲಿದ್ದರು ಆದರೆ ಪಂದ್ಯ ಮುಗಿಯುವ ವೇಳೆಗೆ ಧವನ್ ಮೂರನೇ ಸ್ಥಾನಕ್ಕೇರಿದ್ದಾರೆ. 176 ಐಪಿಎಲ್ ಇನ್ನಿಂಗ್ಸ್‌ಗಳಲ್ಲಿ ಆಡಿರುವ ಧವನ್ ಒಟ್ಟು 5282 ರನ್ ದಾಖಲಿಸಿದ್ದಾರೆ. ಈ ಮೂಲಕ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದ್ದ ವಾರ್ನರ್ ಮತ್ತು ರೋಹಿತ್ ಶರ್ಮಾ ಅವರನ್ನು ನಾಲ್ಕು ಮತ್ತು ಐದನೇ ಸ್ಥಾನಕ್ಕೆ ಧವನ್ ತಳ್ಳಿದ್ದಾರೆ. ಡೇವಿಡ್ ವಾರ್ನರ್ ಒಟ್ಟು 5254 ರನ್ ಮತ್ತು ರೋಹಿತ್ ಶರ್ಮಾ ಒಟ್ಟು 5249 ರನ್ ಗಳಿಸಿದ್ದಾರೆ. ಈ ಮೂವರು ಆಟಗಾರರ ನಡುವೆ ಅತೀ ಕಡಿಮೆ ರನ್‌ಗಳ ಅಂತರವಿದ್ದು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಮೂವರ ನಡುವೆ ರನ್ ರೇಸ್ ನಡೆಯುವುದು ಪಕ್ಕಾ.

Story first published: Sunday, April 11, 2021, 11:56 [IST]
Other articles published on Apr 11, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+