For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಚೆನ್ನೈ vs ಕೊಲ್ಕತ್ತಾ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ?

IPL 2021 : CSK vs KKR Head-to-head record, highest run-getters, top wicket-takers

ಮುಂಬೈ : 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 15ನೇ ಪಂದ್ಯ ಕೊಲ್ಕತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಬುಧವಾರ ( ಏಪ್ರಿಲ್ 21 ) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಪ್ರಸ್ತುತ ಟೂರ್ನಿಯಲ್ಲಿ 3 ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ 2 ಪಂದ್ಯಗಳಲ್ಲಿ ಜಯಗಳಿಸಿದ್ದರೆ, 3 ಪಂದ್ಯಗಳನ್ನಾಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 3 ಪಂದ್ಯಗಳನ್ನಾಡಿ ಕೇವಲ 1 ಪಂದ್ಯದಲ್ಲಿ ಜಯ ಸಾಧಿಸಿದೆ.

ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಇದುವರೆಗೂ ಐಪಿಎಲ್ ಇತಿಹಾಸದಲ್ಲಿ ಒಟ್ಟು 24 ಬಾರಿ ಮುಖಾಮುಖಿಯಾಗಿದ್ದು ಕೊಲ್ಕತ್ತಾ ನೈಟ್ ರೈಡರ್ಸ್ 9 ಪಂದ್ಯಗಳಲ್ಲಿ ಜಯಗಳಿಸಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡ 15 ಪಂದ್ಯಗಳಲ್ಲಿ ಜಯ ಗಳಿಸಿದೆ. ಐಪಿಎಲ್ ಇತಿಹಾಸದ ಮುಖಾಮುಖಿಯಲ್ಲಿ ಚೆನ್ನೈ ಮೇಲುಗೈ ಸಾಧಿಸಿದೆ.

ಕಳೆದ ಆವೃತ್ತಿಯ ಫಲಿತಾಂಶ

2020ರ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಲೀಗ್ ಹಂತದಲ್ಲಿ 2 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ 2 ಪಂದ್ಯಗಳ ಪೈಕಿ ಒಂದು ಪಂದ್ಯದಲ್ಲಿ ಚೆನ್ನೈ ಗೆಲುವು ಸಾಧಿಸಿದ್ದರೆ ಮತ್ತೊಂದು ಪಂದ್ಯದಲ್ಲಿ ಕೊಲ್ಕತ್ತಾ ಗೆಲುವು ಸಾಧಿಸಿದೆ.

ಚೆನ್ನೈ - ಕೊಲ್ಕತ್ತಾ ಮುಖಾಮುಖಿ ಪಂದ್ಯಗಳಲ್ಲಿ ಸುರೇಶ್ ರೈನಾ ಮತ್ತು ಎಂಎಸ್ ಧೋನಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಹಾಗೂ ರವಿಚಂದ್ರನ್ ಅಶ್ವಿನ್, ಸುನೀಲ್ ನರೇನ್ ಮತ್ತು ರವೀಂದ್ರ ಜಡೇಜಾ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರಾಗಿದ್ದಾರೆ.

ಕಳೆದ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ್ದ ಎರಡೂ ತಂಡಗಳ ಆಟಗಾರರು : ಫಾಫ್ ಡುಪ್ಲೆಸಿಸ್ 449 ರನ್, ಶುಬ್ಮನ್ ಗಿಲ್ 440 ರನ್ ಹಾಗೂ ಇಯಾನ್ ಮಾರ್ಗನ್ 418 ರನ್.

ಕಳೆದ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದಿದ್ದ ಎರಡೂ ತಂಡಗಳ ಆಟಗಾರರು : ವರುಣ್ ಚಕ್ರವರ್ತಿ 17 ವಿಕೆಟ್, ಸ್ಯಾಮ್ ಕರನ್ 13 ವಿಕೆಟ್ ಹಾಗೂ ದೀಪಕ್ ಚಹರ್ 12 ವಿಕೆಟ್

Story first published: Wednesday, April 21, 2021, 17:58 [IST]
Other articles published on Apr 21, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+