ಐಪಿಎಲ್ 2021: ರೋಚಕ ಕಾದಾಟದಲ್ಲಿ ಕೊಲ್ಕತ್ತಾ ವಿರುದ್ಧ ಗೆದ್ದು ಬೀಗಿದ ಚೆನ್ನೈ

ಐಪಿಎಲ್‌ನಲ್ಲಿ ಭಾನುವಾರ ನಡೆದ ಮೊದಲ ಪಂದ್ಯ ಅತ್ಯಂತ ರೋಚಕ ಕಾದಾಟಕ್ಕೆ ಸಾಕ್ಷಿಯಾಯ್ತು. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಸೆಣೆಸಾಟದಲ್ಲಿ ಕೊನೆಯ ಎರಡು ಓವರ್‌ಗಳು ಪ್ರೇಕ್ಷಕರ ಎದೆಬಡಿತವನ್ನು ಅಕ್ಷರಶಃ ಹೆಚ್ಚಿಸಿತ್ತು. ಅಂತಿಮ ಎಸೆತದಲ್ಲಿ ಚೆನ್ನೈ ತಂಡ ಒಂದು ರನ್ ಪಡೆಯುವ ಮೂಲಕ ಗೆದ್ದು ಬೀಗಿದೆ. ಈ ಮೂಲಕ 2 ವಿಕೆಟ್‌ಗಳ ರೋಮಾಂಚನಕಾರಿ ಗೆಲವು ಸಾಧಿಸಿದೆ.

ಮೊದಲಿಗೆ ಬ್ಯಾಟಿಂಗ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 171 ರನ್‌ಗಳ ಸವಾಲನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಂದಿಟ್ಟಿತ್ತು. ರಾಹುಲ್ ತ್ರಿಪಾಠಿ ಹಾಗೂ ನಿತೀಶ್ ರಾಣಾ ಕೆಕೆಆರ್ ಪರವಾಗಿ ಉತ್ತಮ ಪ್ರದರ್ಶನ ನೀಡಿದರು. ಅಂತಿಮ ಹಂತದಲ್ಲಿ ಅನುಭವಿ ದಿನೇಶ್ ಕಾರ್ತಿಕ್ ಸ್ಪೋಟಕ ಆಟವನ್ನು ಪ್ರದರ್ಶಿಸಿದರು. ಕೇವಲ 11 ಎಸೆತಗಳನ್ನು ಎದುರಿಸಿದ ಕಾರ್ತಿಕ್ 26 ರನ್‌ಗಳನ್ನು ಗಳಿಸಿದರು. ಈ ಮೂಲಕ ಕೆಕೆಆರ್ 171 ರನ್‌ಗಳನ್ನು ಗಳಿಸಿತು.

ಇದನ್ನು ಬೆನ್ನಟ್ಟಿದ ಕೆಕೆಆರ್‌ಗೆ ಅದ್ಭುತ ಆರಂಬ ದೊರೆತಿತ್ತು. ಋತುರಾಜ್ ಹಾಗೂ ಡು ಪ್ಲೆಸಿಸ್ ಜೋಡಿ ಮೊದಲ ವಿಕೆಟ್‌ಗೆ 74 ರನ್‌ಗಳ ಕೊಡುಗೆ ನೀಡಿದರು. ನಂತರ ಮೊಯೋನ್ ಅಲಿ ಕೂಡ 32 ರನ್‌ಗಳನ್ನು ಗಳಿಸಿದರು. ಆದರೆ ಮಧ್ಯಮ ಕ್ರಮಾಂಕ ಕುಸಿಯಲು ಆರಂಭಿಸಿತ್ತು. ಅಂಬಾಟಿ ರಾಯುಡು, ಸುರತೇಶ್ ರೈನಾ, ಎಂಎಸ್ ಧೋನಿ ಒಬ್ಬರ ಹಿಂದೊಬ್ಬರಂತೆ ಫೆವಿಲಿಯನ್ ಸೇರಿಕೊಂಡಿದ್ದರು. ಈ ಮೂಲಕ ಸಿಎಸ್‌ಕೆ ಸೋಲಿನತ್ತ ಮುಖ ಮಾಡಿತ್ತು.

ಆದರೆ ಅಂತಿಮ ಹಂತದಲ್ಲಿ ರವೀಂದ್ರ ಜಡೇಜಾ ಪಂದ್ಯವನ್ನು ಸಿಎಸ್‌ಕೆಯತ್ತ ಮತ್ತೆ ತಿರುಗಿಸಿದರು. ಅದ್ಭುತ ಆಟವಾಡಿದ ಜಡೇಜಾ 8 ಎಸೆತಗಳಲ್ಲಿ 22 ರನ್‌ಗಳಿಸಿದ್ದರು. ಅಂತಿಮ ಎರಡು ಎಸೆತಗಳಿರುವಾಗ ರವೀಂದ್ರ ಜಡೇಜಾ ವಿಕೆಟ್ ಕಳೆದುಕೊಳ್ಳುವ ಮೂಲಕ ಸಿಎಸ್‌ಕೆ ಆತಂಕ ಮೂಡಿತ್ತು. ಅಂತಿಮ ಓವರ್‌ನಲ್ಲಿ ಸುನಿಲ್ ನರೈನ್ ಅದ್ಭುತವಾಗಿ ರನ್ ನಿಯಂತ್ರಣ ಮಾಡಿದ್ದರು. ಆದರೂ ಕೆಕೆಆರ್‌ಗೆ ಗೆಲುವು ಸಾಧ್ಯವಾಗಲಿಲ್ಲ. ಸಿಎಸ್‌ಕೆ ಪಂದ್ಯವನ್ನು ಗೆದ್ದಿದ್ದಲ್ಲದೆ ಅಂಕಪಟ್ಟಿಯಲ್ಲಿ ಮತ್ತೆ ಮೊದಲ ಸ್ಥಾನಕ್ಕೇರಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇಯಿಂಗ್ XI ಶುಬ್ಮನ್ ಗಿಲ್, ವೆಂಕಟೇಶ್ ಅಯ್ಯರ್, ರಾಹುಲ್ ತ್ರಿಪಾಠಿ, ಇಯೋನ್ ಮಾರ್ಗನ್ (ಸಿ), ನಿತೀಶ್ ರಾಣಾ, ದಿನೇಶ್ ಕಾರ್ತಿಕ್ (ಡಬ್ಲ್ಯೂ), ಆ್ಯಂಡ್ರೆ ರಸೆಲ್, ಸುನಿಲ್ ನರೈನ್, ಲಾಕಿ ಫರ್ಗುಸನ್, ವರುಣ್ ಚಕ್ರವರ್ತಿ, ಪ್ರಸಿದ್ ಕೃಷ್ಣ.
ಬೆಂಚ್: ಹರ್ಭಜನ್ ಸಿಂಗ್, ಶಕೀಬ್ ಅಲ್ ಹಸನ್, ಟಿಮ್ ಸೌಥಿ, ಬೆನ್ ಕಟ್ಟಿಂಗ್, ಕರುಣ್ ನಾಯರ್, ಪವನ್ ನೇಗಿ, ಕುಲದೀಪ್ ಯಾದವ್, ಗುರ್ಕೀರತ್ ಸಿಂಗ್ ಮಾನ್, ಶೆಲ್ಡನ್ ಜಾಕ್ಸನ್, ಸಂದೀಪ್ ವಾರಿಯರ್, ಟಿಮ್ ಸೀಫರ್ಟ್, ರಿಂಕು ಸಿಂಗ್, ಕಮಲೇಶ್ ನಾಗರಕೋಟಿ, ಶಿವಂ ಮಾವಿ, ವೈಭವ್ ಅರೋರಾ

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI ಋತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ಅಂಬಟಿ ರಾಯುಡು, ಸುರೇಶ್ ರೈನಾ, ಎಂಎಸ್ ಧೋನಿ (ಡಬ್ಲ್ಯೂ/ಸಿ), ರವೀಂದ್ರ ಜಡೇಜಾ, ಸ್ಯಾಮ್ ಕರನ್, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಜೋಶ್ ಹೇಜಲ್‌ವುಡ್.
ಬೆಂಚ್: ಡ್ವೇನ್ ಬ್ರಾವೋ, ರಾಬಿನ್ ಉತ್ತಪ್ಪ, ಚೇತೇಶ್ವರ ಪೂಜಾರ, ಕರ್ನ್ ಶರ್ಮಾ, ಇಮ್ರಾನ್ ತಾಹಿರ್, ಜೇಸನ್ ಬೆಹ್ರೆಂಡಾರ್ಫ್, ಕೃಷ್ಣಪ್ಪ ಗೌತಮ್, ಲುಂಗಿ ನ್ಗಿಡಿ, ಮಿಚೆಲ್ ಸ್ಯಾಂಟ್ನರ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಹರಿ ನಿಶಾಂತ್, ಎನ್ ಜಗದೀಶನ್, ಕೆಎಂ ಆಸಿಫ್, ಹರಿಶಂಕರ್ ರೆಡ್ಡಿ, ಭಗತ್ ವರಿಮ್.

For Quick Alerts
ALLOW NOTIFICATIONS
For Daily Alerts
Story first published: Sunday, September 26, 2021, 19:41 [IST]
Other articles published on Sep 26, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X