For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಬೆನ್ ಸ್ಟೋಕ್ಸ್ ಸ್ಥಾನ ತುಂಬಲು ಡೇವಿಡ್ ಮಿಲ್ಲರ್ ಸಜ್ಜು

IPL 2021: David Miller set to replace Ben Stokes void in RR’s playing XI

ಐಪಿಎಲ್ 14ನೇ ಆವೃತ್ತಿಯ ಮೊದಲ ಪಂದ್ಯದಲ್ಲಿಯೇ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಆಘಾತ ಉಂಟಾಯಿತು. ತಂಡದ ಪ್ರಮುಖ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಮೊದಲ ಪಂದ್ಯದ ಫೀಲ್ಡಿಂಗ್ ವೇಳೆ ಗಾಯಗೊಂಡಿದ್ದು ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಆ ಸ್ಥಾನವನ್ನು ತುಂಬಲು ದಕ್ಷಿಣ ಆಫ್ರಿಕಾದ ಅನುಭವಿ ಆಟಗಾರ ಡೇವಿಡ್ ಮಿಲ್ಲರ್ ಸಜ್ಜಾಗಿದ್ದಾರೆ.

ಐಪಿಎಲ್‌ನಲ್ಲಿ ಡೇವಿಡ್ ಮಿಲ್ಲರ್ ಕೆಲ ಆವೃತ್ತಿಗಳಲ್ಲಿ ಸತತವಾಗಿ ಕಿಂಗ್ಸ್ ಇಲೆವೆನ್ ಪಂಜಾಬ್(ಈಗ ಪಂಜಾಬ್ ಕಿಂಗ್ಸ್) ತಂಡದ ಪರವಾಗಿ ಆಡಿದ್ದರು. ಆದರೆ 2020 ಆವೃತ್ತಿಯ ಹರಾಜಿನಲ್ಲಿ ಮಿಲ್ಲರ್ ರಾಜಸ್ಥಾನ್ ರಾಯಲ್ಸ್ ತಂಡದ ಪಾಲಾದರು. ಆದರೆ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ವಿದೇಶಿ ಸ್ಟಾರ್ ಆಟಗಾರರೇ ತುಂಬಿದ್ದರಿಂದ ಕಳೆದ ಆವೃತ್ತಿಯಲ್ಲಿ ಒಂದು ಪಂದ್ಯವನ್ನಷ್ಟೇ ಆಡಿದ್ದರು.

ಆದರೆ ಡೇವಿಡ್ ಮಿಲ್ಲರ್ ಅವರ ಬ್ಯಾಟಿಂಗ್‌ನ ಸಾಮರ್ಥ್ಯದ ಕಾರಣಕ್ಕೆ ಅವರನ್ನು ತಂಡದಲ್ಲೇ ಉಳಿಸಿಕೊಂಡಿತ್ತು ರಾಜಸ್ಥಾನ್. ಈಗ ಬೆನ್ ಸ್ಟೋಕ್ಸ್ ಅಲಭ್ಯತೆಯಲ್ಲಿ ಆ ಸ್ಥಾನವನ್ನು ಸಮರ್ಥವಾಗಿ ತುಂಬಲು ಡೇವಿಡ್ ಮಿಲ್ಲರ್‌ಗೆ ಉತ್ತಮ ಅವಕಾಶ ದೊರೆತಿದೆ.

ಆರ್‌ಸಿಬಿ ವಿರುದ್ಧ 2013ರಲ್ಲಿ ಡೇವಿಡ್ ಮಿಲ್ಲರ್ ಕೇವಲ 38 ಎಸೆತಗಳಲ್ಲಿ ಶತಕವನ್ನು ಸಿಡಿಸಿದ್ದು ಇನ್ನು ಕೂಡ ಐಪಿಎಲ್ ಇತಿಹಾಸದ ಅತ್ಯುತ್ತಮ ಇನ್ನಿಂಗ್ಸ್‌ಗಳಲ್ಲಿ ಒಂದಾಗಿದೆ. ಅಲ್ಲದೆ ಐಪಿಎಲ್‌ನಲ್ಲಿ ಉತ್ತಮ ಅಂಕಿಅಂಶಗಳನ್ನು ಕೂಡ ಹೊಂದಿದ್ದಾರೆ ದಕ್ಷಿಣ ಆಫ್ರಿಕಾದ ಈ ಆಟಗಾರ.

ರಾಜಸ್ಥಾನ್ ರಾಯಲ್ಸ್ ಸಂಭಾವ್ಯ ತಂಡ:
ಮನನ್ ವೊಹ್ರಾ, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ / ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಶಿವಮ್ ದುಬೆ, ರಾಹುಲ್ ತೆವಾಟಿಯಾ, ರಿಯಾನ್ ಪರಾಗ್, ಕ್ರಿಸ್ ಮೋರಿಸ್, ಶ್ರೇಯಸ್ ಗೋಪಾಲ್, ಮುಸ್ತಫಿಜುರ್ ರಹಮಾನ್, ಚೇತನ್ ಸಕರಿಯಾ.

Story first published: Thursday, April 15, 2021, 14:32 [IST]
Other articles published on Apr 15, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+