Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021 : ಚೆನ್ನೈ ವಿರುದ್ಧದ ಪಂದ್ಯದಲ್ಲಿ 3 ವಿಶೇಷ ದಾಖಲೆ ಬರೆದ ಡೇವಿಡ್ ವಾರ್ನರ್

IPL 2021 : David warner creates 3 ipl records against CSK match

14ನೇ ಐಪಿಎಲ್ ಆವೃತ್ತಿಯ 23ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಕಾದಾಟ ನಡೆಸಿವೆ. ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡ ನಾಯಕ ಡೇವಿಡ್ ವಾರ್ನರ್ ಮತ್ತು ಕನ್ನಡಿಗ ಮನೀಷ್ ಪಾಂಡೆ ಅವರ ಉತ್ತಮ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿದೆ.

ಸನ್ ರೈಸರ್ಸ್ ಹೈದರಾಬಾದ್ ತಂಡದ ಪರ ಆರಂಭಿಕ ಆಟಗಾರನಾಗಿ ಬಂದ ನಾಯಕ ಡೇವಿಡ್ ವಾರ್ನರ್ 55 ಎಸೆತಗಳಲ್ಲಿ 57 ರನ್ ಬಾರಿಸಿ ಜವಾಬ್ದಾರಿಯುತ ಆಟವನ್ನಾಡಿದರು. ಡೇವಿಡ್ ವಾರ್ನರ್ ಈ ಇನ್ನಿಂಗ್ಸ್ ಮೂಲಕ ಟಿ ಟ್ವೆಂಟಿ ಕ್ರಿಕೆಟ್ ಇತಿಹಾಸದಲ್ಲಿ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ 3 ದಾಖಲೆಗಳನ್ನು ಬರೆದಿದ್ದಾರೆ. ಹೌದು ಟಿ ಟ್ವೆಂಟಿ ಕ್ರಿಕೆಟ್ ಇತಿಹಾಸದಲ್ಲಿ 10,000 ಪೂರೈಸಿದ ನಾಲ್ಕನೇ ಆಟಗಾರ ಎಂಬ ದಾಖಲೆಯನ್ನು ಡೇವಿಡ್ ವಾರ್ನರ್ ನಿರ್ಮಿಸಿದ್ದಾರೆ. ಕ್ರಿಸ್ ಗೇಲ್, ಕೀರನ್ ಪೊಲಾರ್ಡ್ ಹಾಗೂ ಶೋಯೆಬ್ ಮಲಿಕ್ ನಂತರ ವಾರ್ನರ್ ಟಿ ಟ್ವೆಂಟಿ ಕ್ರಿಕೆಟ್‍ನಲ್ಲಿ 10,000 ರನ್ ಪೂರೈಸಿದ ಆಟಗಾರನಾಗಿದ್ದಾರೆ.

ಐಪಿಎಲ್ ಇತಿಹಾಸದಲ್ಲಿ 200ಕ್ಕಿಂತ ಅಧಿಕ ಸಿಕ್ಸರ್ ಬಾರಿಸಿದ ಆಟಗಾರರ ಪಟ್ಟಿಯನ್ನು ಡೇವಿಡ್ ವಾರ್ನರ್ ಸೇರಿಕೊಳ್ಳುವುದರ ಮೂಲಕ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. ಐಪಿಎಲ್ ಇತಿಹಾಸದಲ್ಲಿ 200 ಸಿಕ್ಸರ್ ಸಿಡಿಸಿದ ಎಂಟನೇ ಆಟಗಾರ ಎಂಬ ದಾಖಲೆಯನ್ನು ಡೇವಿಡ್ ವಾರ್ನರ್ ನಿರ್ಮಿಸಿದ್ದಾರೆ.

ಐಪಿಎಲ್ ಇತಿಹಾಸದಲ್ಲಿ 500ಕ್ಕಿಂತ ಹೆಚ್ಚು ಬೌಂಡರಿ ಮತ್ತು 200ಕ್ಕಿಂತ ಹೆಚ್ಚು ಸಿಕ್ಸರ್ ಸಿಡಿಸಿದ ಎರಡನೇ ಆಟಗಾರ ಎಂಬ ದಾಖಲೆಗೆ ಡೇವಿಡ್ ವಾರ್ನರ್ ಪಾತ್ರರಾಗಿದ್ದಾರೆ. ವಿರಾಟ್ ಕೊಹ್ಲಿ ಹೊರತುಪಡಿಸಿದರೆ ಈ ದಾಖಲೆಯನ್ನು ನಿರ್ಮಿಸಿದ ಎರಡನೇ ಆಟಗಾರ ಡೇವಿಡ್ ವಾರ್ನರ್ ಆಗಿದ್ದಾರೆ.

Story first published: Wednesday, April 28, 2021, 22:04 [IST]
Other articles published on Apr 28, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+