ಕೆಕೆಆರ್ ತಂಡದಲ್ಲಿ ಕೊರೊನಾ ವೈರಸ್: ಕ್ವಾರಂಟೈನ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರರು

ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರರಾದ ವರುಣ್ ಚಕ್ರವರ್ತಿ ಹಾಗೂ ಸಂದೀಪ್ ವಾರಿಯರ್ ಕೊರೊನಾ ವೈರಸ್‌ಗೆ ತುತ್ತಾಗಿರುವ ಹಿನ್ನೆಲೆಯಲ್ಲಿ ಡೆಲ್ಲಿ ಕ್ಯಾಪಟಿಲಸ್ ತಂಡದ ಎಲ್ಲಾಆಟಗಾರರು ಕೂಡ ಈಗ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಕಳೆದ ಗುರುವಾರ ನಡೆದ ಪಂದ್ಯದಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಿದ್ದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ಈ ನಿರ್ಧಾರಕ್ಕೆ ಬಂದಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮೂಲಗಳು ಈ ಬಗ್ಗೆ ಎನ್‌ಐಗೆ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ. ಇಂದು ಮಧ್ಯಾಹ್ನದ ನಂತರ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಎಲ್ಲಾ ಆಟಗಾರರು ಹಾಗೂ ಸಿಬ್ಬಂದಿಗಳು ಕೂಡ ಸೆಲ್ಫ್ ಕ್ವಾರಂಟೈನ್‌ಗೆ ಒಳಗಾಗಿದ್ದೇವೆ ಎಂದು ಈ ಮಾಹಿತಿಯಲ್ಲಿ ತಿಳಿಸಲಾಗಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೊನೆಯ ಪಂದ್ಯವನ್ನು ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಭಾನುವಾರ ಆಡಿತ್ತು. ಅದಕ್ಕೂ ಮುನ್ನ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಕೆಕೆಆರ್ ತಂಡವನ್ನು ಎದುರಿಸಿತ್ತು. ಈ ಟೂರ್ನಿಯ ಎರಡನೇ ಮುಖಾಮುಖಿಯಲ್ಲಿ ಮೇ 8ರಂದು ಕೆಕೆಆರ್ ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಮತ್ತೊಮ್ಮೆ ಮುಖಾಮುಖಿಯಾಗಲಿದೆ.
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಸದ್ಯ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಶ್ರೇಷ್ಠ ಪ್ರದರ್ಶನವನ್ನು ನೀಡುತ್ತಿದೆ. ಸದ್ಯ ಅಂಕಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ಪಂದ್ಯಗಳನ್ನು ಆಡಿದ್ದು 6 ಗೆಲುವು ಸಾಧಿಸಿ ಅಗ್ರಸ್ಥಾನದಲ್ಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications