ಐಪಿಎಲ್ 2021: ಡೆಲ್ಲಿ vs ಪಂಜಾಬ್ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ?

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 11ನೇ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಭಾನುವಾರ ( ಏಪ್ರಿಲ್ 18 ) ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೆಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡಗಳ ನಡುವೆ ನಡೆಯಲಿದೆ. ಈ ಬಾರಿಯ ಟೂರ್ನಿಯಲ್ಲಿ ಈಗಾಗಲೇ ಡೆಲ್ಲಿ ಮತ್ತು ಪಂಜಾಬ್ ಎರಡೂ ತಂಡಗಳು ಸಹ 2 ಪಂದ್ಯಗಳನ್ನಾಡಿದ್ದು, ಈ ಎರಡೂ ತಂಡಗಳು ಒಂದು ಪಂದ್ಯದಲ್ಲಿ ಜಯ ಗಳಿಸಿವೆ.
ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ ಇತಿಹಾಸದಲ್ಲಿ ಒಟ್ಟು 26 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು ಡೆಲ್ಲಿ ಕ್ಯಾಪಿಟಲ್ಸ್ ತಂಡ 11 ಪಂದ್ಯಗಳಲ್ಲಿ ಜಯ ಗಳಿಸಿದ್ದರೆ, ಪಂಜಾಬ್ ಕಿಂಗ್ಸ್ ತಂಡ 15 ಪಂದ್ಯಗಳಲ್ಲಿ ಜಯ ಗಳಿಸುವುದರ ಮೂಲಕ ಮೇಲುಗೈ ಸಾಧಿಸಿದೆ.

ಡೆಲ್ಲಿ - ಪಂಜಾಬ್ ಮುಖಾಮುಖಿಯ ಕೊನೆಯ 5 ಪಂದ್ಯಗಳು
ಒಟ್ಟಾರೆ ಐಪಿಎಲ್ ಮುಖಾಮುಖಿಯಲ್ಲಿ ಪಂಜಾಬ್ ತಂಡ ಮೇಲುಗೈ ಸಾಧಿಸಿದ್ದರೆ, ಕಳೆದ 5 ಮುಖಾಮುಖಿ ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 3 ಪಂದ್ಯಗಳನ್ನು ಗೆಲ್ಲುವುದರ ಮೂಲಕ ಮೇಲುಗೈ ಸಾಧಿಸಿದೆ. ಇತ್ತ ಪಂಜಾಬ್ ಕಿಂಗ್ಸ್ ಕಳೆದ 5 ಮುಖಾಮುಖಿ ಪಂದ್ಯಗಳಲ್ಲಿ 2 ಪಂದ್ಯಗಳನ್ನು ಜಯಿಸಿದೆ.

ಕಳೆದ ಆವೃತ್ತಿಯ ಫಲಿತಾಂಶ
2020ರ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು 2 ಬಾರಿ ಮುಖಾಮುಖಿಯಾಗಿದ್ದವು. ಈ ಎರಡು ಪಂದ್ಯಗಳ ಪೈಕಿ ಡೆಲ್ಲಿ ಕ್ಯಾಪಿಟಲ್ಸ್ ಮೊದಲನೇ ಪಂದ್ಯದಲ್ಲಿ ಮತ್ತು ಪಂಜಾಬ್ ಕಿಂಗ್ಸ್ ಎರಡನೇ ಪಂದ್ಯದಲ್ಲಿ ಗೆಲುವು ಸಾಧಿಸಿದ್ದವು.

ಡೆಲ್ಲಿ - ಪಂಜಾಬ್ ಮುಖಾಮುಖಿ ಪಂದ್ಯಗಳಲ್ಲಿ ಟಾಪ್ ಸ್ಕೋರರ್ಸ್
ಡೆಲ್ಲಿ ಮತ್ತು ಪಂಜಾಬ್ ತಂಡಗಳ ಮುಖಾಮುಖಿ ಪಂದ್ಯಗಳಲ್ಲಿ ವೀರೇಂದ್ರ ಸೆಹ್ವಾಗ್ 330 ರನ್ ಗಳಿಸಿ ಅತಿಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಸೆಹ್ವಾಗ್ ಹೊರತುಪಡಿಸಿ ಡೇವಿಡ್ ಮಿಲ್ಲರ್ 322 ಮತ್ತು ಶ್ರೇಯಸ್ ಐಯ್ಯರ್ 298 ರನ್ ಗಳಿಸಿದ್ದಾರೆ.

ಡೆಲ್ಲಿ - ಪಂಜಾಬ್ ತಂಡಗಳ ಮುಖಾಮುಖಿ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರು
ಡೆಲ್ಲಿ ಮತ್ತು ಪಂಜಾಬ್ ತಂಡಗಳ ಮುಖಾಮುಖಿ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಸಂದೀಪ್ ಶರ್ಮಾ. ಸಂದೀಪ್ ಶರ್ಮಾ ಪಡೆದ ವಿಕೆಟ್‍ಗಳ ಸಂಖ್ಯೆ 14. ಸಂದೀಪ್ ಶರ್ಮಾ ಹೊರತುಪಡಿಸಿದಂತೆ ಇರ್ಫಾನ್ ಪಠಾಣ್ 14 ಮತ್ತು ಅಕ್ಷರ್ ಪಟೇಲ್ 13 ವಿಕೆಟ್‍ಗಳನ್ನು ಪಡೆದಿದ್ದಾರೆ.

ಕಳೆದ ಆವೃತ್ತಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಎರಡೂ ತಂಡಗಳ ಆಟಗಾರರ ಪಟ್ಟಿ
ಅತಿಹೆಚ್ಚು ರನ್ ಗಳಿಸಿದವರು :
1. ಕೆ ಎಲ್ ರಾಹುಲ್ - 670
2. ಶಿಖರ್ ಧವನ್ - 618
3. ಶ್ರೇಯಸ್ ಐಯ್ಯರ್ - 519
ಅತಿಹೆಚ್ಚು ವಿಕೆಟ್ ಪಡೆದವರು :
1. ಕಗಿಸೋ ರಬಾಡ - 30
2. ಅನ್ರಿಚ್ ನಾರ್ಕಿಯಾ - 22
3. ಮೊಹಮ್ಮದ್ ಶಮಿ - 20
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications