ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್: ಡೆಲ್ಲಿ vs ಪಂಜಾಬ್: ಸಂಭಾವ್ಯ ತಂಡ, ಹವಾಮಾನ, ಪಿಚ್ ರಿಪೋರ್ಟ್

IPL 2021, DC vs PBKS: Preview, probable XI, match prediction, live streaming, weather forecast, and pitch report

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 11ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಎರಡೂ ತಂಡಗಳು ಸಹ 2 ಪಂದ್ಯಗಳನ್ನಾಡಿದ್ದು ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿ ಮತ್ತೊಂದು ಪಂದ್ಯದಲ್ಲಿ ಸೋಲನ್ನು ಕಂಡಿವೆ.

ಪಂದ್ಯದ ಆರಂಭ: ಪಂದ್ಯ ಸಂಜೆ 7.30ಕ್ಕೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್ ವರ್ಕ್ ನಲ್ಲಿ ಪಂದ್ಯದ ನೇರಪ್ರಸಾರ ಲಭ್ಯವಿರಲಿದ್ದು ಡಿಸ್ನಿ + ಹಾಟ್‌ಸ್ಟಾರ್ VIP ಚಂದಾದಾರರು ಸಹ ಪಂದ್ಯವನ್ನು ವೀಕ್ಷಿಸಬಹುದು.

ಹವಾಮಾನ ವರದಿ: ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯಕ್ಕೆ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ. 28 ರಿಂದ 38° ಸೆಲ್ಸಿಯಸ್ ಉಷ್ಣಾಂಶವಿರಲಿದ್ದು, 60% ಆರ್ದ್ರತೆ ಇರಲಿದೆ.

ಪಿಚ್ ರಿಪೋರ್ಟ್:

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇತ್ತೀಚೆಗೆ ನಡೆದ ಪಂದ್ಯಗಳಲ್ಲಿ ಬ್ಯಾಟ್ಸ್‌ಮನ್‌ಗಳು ಉತ್ತಮ ರನ್ ಕಲೆ ಹಾಕಿದ್ದು, ಇಂದಿನ ಪಂದ್ಯದಲ್ಲಿಯೂ ಬ್ಯಾಟ್ಸ್‌ಮನ್‌ಗಳು ಹೆಚ್ಚು ರನ್ ಗಳಿಸುವ ಸಾಧ್ಯತೆಯಿದೆ.

ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ತಂಡ:

ಪೃಥ್ವಿ ಶಾ, ಶಿಖರ್ ಧವನ್, ರಿಷಭ್ ಪಂತ್ (ನಾಯಕ), ಅಜಿಂಕ್ಯ ರಹಾನೆ, ಮಾರ್ಕಸ್ ಸ್ಟಾಯಿನಿಸ್, ಕ್ರಿಸ್ ವೋಕ್ಸ್, ರವಿಚಂದ್ರನ್ ಅಶ್ವಿನ್, ಲಲಿತ್ ಯಾದವ್, ಕಗಿಸೊ ರಬಾಡ, ಅನ್ರಿಚ್ ನಾರ್ಕಿಯಾ ಹಾಗೂ ಅವೇಶ್ ಖಾನ್

ಪಂಜಾಬ್ ಕಿಂಗ್ಸ್ ಸಂಭಾವ್ಯ ತಂಡ:

ಕೆ ಎಲ್ ರಾಹುಲ್ (ನಾಯಕ), ಮಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಶಾರುಖ್ ಖಾನ್, ಜೇ ರಿಚರ್ಡ್ಸನ್, ಮುರುಗನ್ ಅಶ್ವಿನ್, ರಿಲೆ ಮೆರೆಡಿತ್, ಮೊಹಮ್ಮದ್ ಶಮಿ ಮತ್ತು ಅರ್ಷ್‌ದೀಪ್ ಸಿಂಗ್.

Story first published: Sunday, April 18, 2021, 18:47 [IST]
Other articles published on Apr 18, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X