ಐಪಿಎಲ್ 2021: ಡೆಲ್ಲಿ ತಂಡಕ್ಕೆ ಪದಾರ್ಪಣೆ ಮಾಡಿದ ಸ್ಟೀವ್ ಸ್ಮಿತ್

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಆಟಗಾರ ಸ್ಟೀವ್ ಸ್ಮಿತ್ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಡೆಲ್ಲಿ ತಂಡದ ಪಾಲಾಗಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸ್ಟೀವ್ ಸ್ಮಿತ್ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಪದಾರ್ಪಣೆಯನ್ನು ಮಾಡಿದ್ದಾರೆ.
ಈ ಹಿಂದಿನ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕನಾಗಿದ್ದ ಸ್ಟೀವ್ ಸ್ಮಿತ್ ಈ ಬಾರಿಯ ಆವೃತ್ತಿಗೂ ಮುನ್ನ ನಡೆದ ಹರಾಜಿಗಾಗಿ ರಾಜಸ್ಥಾನ್ ತಂಡದಿಂದ ಬಿಡುಗಡೆಗೊಳಿಸಿತ್ತು. ಬಳಿಕ ಡೆಲ್ಲಿ ತಂಡದ ಪಾಲಾಗಿದ್ದರು ಸ್ಟೀವ್ ಸ್ಮಿತ್. ಭಾನುವಾರ ನಡೆಯುವ ಪಂದ್ಯದಲ್ಲಿ ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರವಾಗಿ ಮೊದಲ ಬಾರಿಗೆ ಕಣಕ್ಕಿಳಿದಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ಆಡಿದ ಮೊದಲ ಎರಡು ಪಂದ್ಯಗಳಲ್ಲಿ ಸ್ಟೀವ್ ಸ್ಮಿತ್ ಆಡುವ ಅವಕಾಶವನ್ನು ಕಳೆದುಕೊಂಡಿದ್ದರು. ಆದರೆ ಮೂರನೇ ಪಂದ್ಯದಲ್ಲಿ ಆಸಿಸ್ ತಂಡದ ಮಾಜಿ ನಾಯಕನಿಗೆ ಆಡುವ ಅವಕಾಶ ದೊರೆತಿದೆ. ಈ ಹಿನ್ನೆಲೆಯಲ್ಲಿ ಪಂದ್ಯದ ಆರಂಭಕ್ಕೂ ಮುನ್ನ ಸ್ಟೀವ್ ಸ್ಮಿತ್ ಡೆಲ್ಲಿ ತಂಡದ ಕ್ಯಾಪ್‌ಅನ್ನು ನಾಯಕ ರಿಷಭ್ ಪಂತ್ ಅವರಿಂದ ಸ್ಟೀಕರಿಸಿದರು.
ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಎರಡು ಬದಲಾವಣೆಯನ್ನು ಮಾಡಿಕೊಂಡು ಕಣಕ್ಕಿಳಿಯಿತು. ಕಳೆದ ಎರಡು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಸ್ಯಾನ್ ಕರ್ರನ್ ಅವರನ್ನು ಇಂದಿನ ಪಮದ್ಯದಿಂದ ಹೊರಗಿಡಲಾಗಿದ್ದು ಸ್ಟೀವ್ ಸ್ಮಿತ್ ಅವರಿಗೆ ಅವಕಾಶವನ್ನು ಕಲ್ಪಸಲಾಗಿದೆ.
ಇನ್ನು ಎಡಗೈ ಮಧ್ಯಮ ವೇಗಿ ಲುಕ್‌ಮಾನ್ ಮರಿವಾಲ ಕೂಡ ಇಂದಿನ ಪಂದ್ಯದ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರವಾಗಿ ಮೊದಲ ಬಾರಿಗೆ ಕಣಕ್ಕಿಳಿದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications