ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್: ನಾಯಕ ಯಾರು ಎಂಬ ಗೊಂದಲಕ್ಕೆ ತೆರೆ ಎಳೆದ ಡೆಲ್ಲಿ ಕ್ಯಾಪಿಟಲ್ಸ್

IPL 2021: Delhi capitals announced Rishabh Pant as Delhi Capitals captain for the second leg

ಇದೇ ವರ್ಷದ ಏಪ್ರಿಲ್ 9ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲ 29 ಪಂದ್ಯಗಳು ಯಾವುದೇ ಅಡಚಣೆಗಳಿಲ್ಲದೆ ಸರಾಗವಾಗಿ ನಡೆದಿದ್ದವು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರಲ್ಲಿ ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಎಚ್ಚೆತ್ತ ಬಿಸಿಸಿಐ ಕೂಡಲೇ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ತೀರ್ಮಾನವನ್ನು ಕೈಗೊಂಡಿತ್ತು.

ಹೀಗೆ ಮಧ್ಯಂತರದಲ್ಲಿಯೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಯುಎಇಯಲ್ಲಿ ನಡೆಸಲು ಬಿಸಿಸಿಐ ನಿರ್ಧಾರವನ್ನು ಮಾಡಿತ್ತು. ಬಿಸಿಸಿಐ ನಿರ್ಧರಿಸಿದಂತೆಯೇ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಬಾಕಿ ಉಳಿದಿರುವ 31 ಪಂದ್ಯಗಳು ಇದೇ ಸೆಪ್ಟೆಂಬರ್ 19ರಿಂದ ಮುಂದುವರೆಯಲಿವೆ. ಹೀಗೆ ಯುಎಇಯಲ್ಲಿ ಮುಂದುವರಿಯಲಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸಲು ವಿವಿಧ ತಂಡಗಳ ಬಹುತೇಕ ಎಲ್ಲಾ ಆಟಗಾರರು ಯುಎಇ ತಲುಪಿದ್ದು ಕಠಿಣ ಅಭ್ಯಾಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲಾರ್ಧದಲ್ಲಿದ್ದ ತಂಡಗಳಿಗೂ ದ್ವಿತೀಯಾರ್ಧದಲ್ಲಿ ಕಣಕ್ಕಿಳಿಯುತ್ತಿರುವ ತಂಡಗಳಿಗೂ ಸಾಕಷ್ಟು ವ್ಯತ್ಯಾಸಗಳಿದ್ದು ಆಟಗಾರರಲ್ಲಿ ಕೆಲವೊಂದಷ್ಟು ಬದಲಾವಣೆಗಳಾಗಿವೆ. ಹೀಗೆ ಐಪಿಎಲ್ ದ್ವಿತೀಯಾರ್ಧ ಘೋಷಣೆಯಾಗುತ್ತಿದ್ದಂತೆಯೇ ಮೊದಲಾರ್ಧದಲ್ಲಿ ಭಾಗವಹಿಸಿದ್ದ ವಿವಿಧ ತಂಡಗಳ ಕೆಲ ಆಟಗಾರರು ದ್ವಿತೀಯಾರ್ಧದಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಹೇಳಿ ಟೂರ್ನಿಯಿಂದ ಹಿಂದೆ ಸರಿದರು. ಹೀಗಾಗಿ ವಿವಿಧ ಫ್ರಾಂಚೈಸಿಗಳು ತಮ್ಮ ತಂಡಗಳಿಂದ ಹಿಂದೆ ಸರಿದ ಆಟಗಾರರ ಸ್ಥಾನಕ್ಕೆ ಹೊಸ ಆಟಗಾರರನ್ನು ಆಯ್ಕೆ ಮಾಡಿಕೊಂಡಿವೆ.

ಹೀಗೆ ನೂತನ ಆಟಗಾರರು ವಿವಿಧ ಐಪಿಎಲ್ ತಂಡಗಳಿಗೆ ಆಯ್ಕೆಯಾಗಿದ್ದು ದ್ವಿತೀಯಾರ್ಧದ ಪಂದ್ಯಗಳಲ್ಲಿ ಕಣಕ್ಕಿಳಿಯಲಿದ್ದಾರೆ. ಇನ್ನು ಎಲ್ಲಾ ತಂಡಗಳಲ್ಲಿಯೂ ಆಟಗಾರರಲ್ಲಿ ಬದಲಾವಣೆಗಳುಂಟಾಗಿದ್ದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಮಾತ್ರ ಐಪಿಎಲ್ ಮೊದಲಾರ್ಧದಲ್ಲಿಯೇ ನಾಯಕನ ಬದಲಾವಣೆಯಾಗಿತ್ತು. ಹೌದು ಐಪಿಎಲ್ ಆರಂಭಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಐಯ್ಯರ್ ಗಾಯದ ಸಮಸ್ಯೆಗೆ ಒಳಗಾಗಿದ್ದ ಕಾರಣ ಶ್ರೇಯಸ್ ಐಯ್ಯರ್ ಬದಲಾಗಿ ರಿಷಭ್ ಪಂತ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ನಾಯಕನನ್ನಾಗಿ ನೇಮಿಸಲಾಗಿತ್ತು. ಐಪಿಎಲ್ ತಾತ್ಕಾಲಿಕವಾಗಿ ಸ್ಥಗಿತಗೊಂಡ ನಂತರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದ ಶ್ರೇಯಸ್ ಐಯ್ಯರ್ ಮುಂದುವರಿಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿ ಮುಂದುವರಿಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

ಇನ್ನೂ ಕೆಲವರು ರಿಷಬ್ ಪಂತ್ ಅವರೇ ಮುಂದುವರಿಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಯೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕತ್ವವನ್ನು ನಿಭಾಯಿಸಲಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದರು. ಹೀಗೆ ಮುಂದುವರಿಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಯಾರು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿರಲಿದ್ದಾರೆ ಎಂಬ ಗೊಂದಲಗಳು ಕ್ರಿಕೆಟ್ ಅಭಿಮಾನಿಗಳಲ್ಲಿ ಮೂಡಿತ್ತು. ಇದೀಗ ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮುಂದುವರಿಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಿಷಭ್ ಪಂತ್ ಅವರೇ ನಾಯಕನಾಗಿ ಮುಂದುವರಿಯಲಿದ್ದಾರೆ ಎಂಬುದನ್ನು ಖಚಿತಪಡಿಸಿದೆ.

ರಿಷಭ್ ಪಂತ್ ನಾಯಕತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮಿಂಚು

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲಾರ್ಧದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದ ರಿಷಭ್ ಪಂತ್ ಅತ್ಯದ್ಬುತವಾಗಿ ತನ್ನ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ. ರಿಷಭ್ ಪಂತ್ ನಾಯಕತ್ವದಡಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಐಪಿಎಲ್ ಮೊದಲಾರ್ಧದಲ್ಲಿ 8 ಪಂದ್ಯಗಳನ್ನಾಡಿದ್ದು 6 ಪಂದ್ಯಗಳಲ್ಲಿ ಜಯ ಗಳಿಸಿ, ಕೇವಲ 2 ಪಂದ್ಯಗಳಲ್ಲಿ ಮಾತ್ರ ಸೋಲುಂಡು 12 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಸದ್ಯ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

Story first published: Friday, September 17, 2021, 15:48 [IST]
Other articles published on Sep 17, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X