ಐಪಿಎಲ್ 2021: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕಳವಳವನ್ನು ವಿವರಿಸಿದ ಲಾರಾ

ಐಪಿಎಲ್ 14ನೇ ಆವೃತ್ತಿಯಲ್ಲಿ ಈಗ ಕೇವಲ ಎರಡು ಪಂದ್ಯಗಳು ಮಾತ್ರವೇ ಬಾಕಿಯಿದೆ. ಎರಡನೇ ಕ್ವಾಲಿಫೈಯರ್ ಹಾಗೂ ಫೈನಲ್ ಪಂದ್ಯಗಳು ನಡೆಯಲು ಬಾಕಿಯಿದ್ದು ಶುಕ್ರವಾರ ಈ ಬಾರಿಯ ಚಾಂಪಿಯನ್ ಯಾವ ತಂಡ ಎಂಬುದು ಬಹಿರಂಗವಾಗಲಿದೆ. ಅದಕ್ಕೂ ಮುನ್ನ ಬುಧವಾರ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದ್ದು ಫೈನಲ್ ಹಂತಕ್ಕೇರಲು ಪೈಪೋಟಿ ನಡೆಸಲಿದೆ.

ಈ ಕ್ವಾಲಿಫೈಯರ್ ಪಂದ್ಯಕ್ಕೆ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕಿರುವ ಕಳವಳವನ್ನು ದಿಗ್ಗಜ ಆಟಗಾರ ಬ್ರಿಯಾನ್ ಲಾರ ವಿವರಿಸಿದ್ದಾರೆ. ಟೂರ್ನಿಯುದ್ದಕ್ಕೂ ಅದ್ಭುತವಾದ ಪ್ರದರ್ಶನ ನೀಡಿಕೊಂಡು ಬಂದಿರುವ ಡೆಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಸೋಲು ಕಂಡಿತ್ತು. ಹೀಗಾಗಿ ತಂಡದ ಆತ್ಮವಿಶ್ವಾಸ ಈಗ ಸ್ವಲ್ಪ ಪ್ರಮಾಣದಲ್ಲಿ ಕುಸಿತ ಕಂಡಿದೆ. ಇಂತಾ ಸಂದರ್ಭದಲ್ಲಿ ತಂಡದ ಪ್ರಮುಖ ವೇಗದ ಅಸ್ತ್ರವಾಗಿರುವ ಕಗಿಸೋ ರಬಾಡ ಹೇಳುಕೊಳ್ಳುವಂತಾ ಫಾರ್ಮ್‌ನಲ್ಲಿಲ್ಲದಿರುವುದು ತಂಡದ ಈ ಕಳವಳಕ್ಕೆ ಕಾರಣ ಎಂದು ಬ್ರ್ಯಾನ್ ಲಾರಾ ವಿವರಿಸಿದ್ದಾರೆ.

ಐಪಿಎಲ್‌ನಲ್ಲಿ ಆರ್‌ಸಿಬಿ ನಾಯಕರಾಗಿ ವಿರಾಟ್ ಕೊಹ್ಲಿ ಅಂಕಿ-ಅಂಶಗಳು!ಐಪಿಎಲ್‌ನಲ್ಲಿ ಆರ್‌ಸಿಬಿ ನಾಯಕರಾಗಿ ವಿರಾಟ್ ಕೊಹ್ಲಿ ಅಂಕಿ-ಅಂಶಗಳು!

ಟೂರ್ನಿಯಲ್ಲಿ ಕಗಿಸೋ ರಬಾಡಾ ಉತ್ತಮ ಫಾರ್ಮ್‌ನಲ್ಲಿಲ್ಲ ಎಂಬುದುದನ್ನು ಅವರ ಅಂಕಿಅಂಶಗಳೇ ತಿಳಿಸುತ್ತವೆ. ಈ ಬಾರಿಯ ಐಪಿಎಲ್‌ನಲ್ಲಿ ಈವರೆಗೆ 14 ಪಂದ್ಯಗಳಲ್ಲಿ ಆಡಿರುವ ರಬಾಡ 13 ವಿಕೆಟ್‌ಗಳನ್ನು ಪಡೆಯಲಷ್ಟೇ ಶಕ್ತರಾಗಿದ್ದಾರೆ. 33.30 ಸರಾಸರಿ ಹಾಗೂ 8.32ರ ಸ್ಟ್ರೈಕ್‌ರೇಟ್‌ನಲ್ಲಿ ಬೌಲಿಂಗ್ ನಡೆಸಿದ್ದಾರೆ ಈ ಯುವ ವೇಗದ ಬೌಲರ್.

ಸ್ಟಾರ್‌ಸ್ಪೋರ್ಟ್ಸ್‌ನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಲಾರಾ ರಬಾಡ ಫಾರ್ಮ್‌ಗೆ ಮರಳುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ರಬಾಡ ಫಾರ್ಮ್‌ಗೆ ಮರಳಿದರೆ ಡೆಲ್ಲಿ ತಂಡಕ್ಕೆ ತುಂಬಾ ಸಂತಸವಾಗುತ್ತದೆ ಎಂದಿರುವ ಲಾರಾ, ಆತನೋರ್ವ ಅತ್ಯಂತ ವಿಶೇಷವಾದ ಪ್ರತಿಭೆಯನ್ನು ಹೊಂದಿರುವ ಆಟಗಾರ ಎಂದಿದ್ದಾರೆ. 2020ರ ಆವೃತ್ತಿಯಲ್ಲಿ ಡೆಲ್ಲಿ ತಂಡ ಫೈನಲ್‌ಗೆ ಪ್ರವೇಶ ಪಡೆಯುವಲ್ಲಿ ರಬಾಡ ಪ್ರದರ್ಶನ ಪ್ರಮುಖ ಪಾತ್ರವಹಿಸಿತ್ತು. ಸಾಕಷ್ಟು ವಿಕೆಟ್ ಸಂಪಾದಿಸಿದ್ದರು ರಬಾಡ. ಆದರೆ ಈ ಬಾರಿ ಆ ಪ್ರದರ್ಶನ ರಬಾಡ ಅವರಿಂದ ಬರಲಿಲ್ಲ ಎಂದಿದ್ದಾರೆ ಲಾರ.

ಪಂಜಾಬ್ ಕಿಂಗ್ಸ್‌ ಬಿಟ್ಟು ಹೊರಬರುವ ಕೆಎಲ್ ರಾಹುಲ್‌ಗೆ ನಾಯಕ ಸ್ಥಾನ ನೀಡಲು ಸಿದ್ಧವಾಗಿವೆ ಈ 3 ತಂಡಗಳು!ಪಂಜಾಬ್ ಕಿಂಗ್ಸ್‌ ಬಿಟ್ಟು ಹೊರಬರುವ ಕೆಎಲ್ ರಾಹುಲ್‌ಗೆ ನಾಯಕ ಸ್ಥಾನ ನೀಡಲು ಸಿದ್ಧವಾಗಿವೆ ಈ 3 ತಂಡಗಳು!

ಕಳೆದ ಬಾರಿಯ ಆವೃತ್ತಿಯಲ್ಲಿ ಕಗಿಸೋ ರಬಾಡ ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ಧರಿಸಿದ್ದರು. ಟೂರ್ನಿಯಲ್ಲಿ ಭರ್ತಿ 30 ವಿಕೆಟ್ ಪಡೆದು ಮಿಂಚಿದ್ದರು. ಈ ಮೂಲಕ ಡೆಲ್ಲಿ ತಂಡ ಚೊಚ್ಚಲ ಬಾರಿಗೆ ಐಪಿಎಲ್ ಫೈನಲ್‌ಗೆ ಪ್ರವೇಶಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ಗೆ ಡೆಲ್ಲಿ ಶರಣಾಗುವ ಮೂಲಕ ರನ್ನರ್‌ಅಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತ್ತು.

ಕೋಲ್ಕತ್ತಾ ನೈಟ್ ರೈಡರ್ಸ್ ಸಂಪೂರ್ಣ ಸ್ಕ್ವಾಡ್: ಶುಬ್ಮನ್ ಗಿಲ್, ವೆಂಕಟೇಶ್ ಅಯ್ಯರ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ಸುನಿಲ್ ನರೈನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಇಯಾನ್ ಮಾರ್ಗನ್ (ನಾಯಕ), ಶಕೀಬ್ ಅಲ್ ಹಸನ್, ಲಾಕಿ ಫರ್ಗ್ಯೂಸನ್, ಶಿವಂ ಮಾವಿ, ವರುಣ್ ಚಕ್ರವರ್ತಿ, ಹರ್ಭಜನ್ ಸಿಂಗ್, ಟಿಮ್ ಸೌಥಿ, ಆಂಡ್ರೆ ರಸೆಲ್, ಬೆನ್ ಕಟ್ಟಿಂಗ್, ಕರುಣ್ ನಾಯರ್, ಪವನ್ ನೇಗಿ, ಕುಲದೀಪ್ ಯಾದವ್, ಗುರ್ಕೀರತ್ ಸಿಂಗ್ ಮಾನ್, ಶೆಲ್ಡನ್ ಜಾಕ್ಸನ್, ಸಂದೀಪ್ ವಾರಿಯರ್, ಟಿಮ್ ಸೀಫೆರ್ಟ್, ಪ್ರಸಿದ್ ಕೃಷ್ಣ, ರಿಂಕು ಸಿಂಗ್, ಕಮಲೇಶ್ ನಾಗರಕೋಟಿ, ವೈಭವ್ ಅರೋರಾ

T20 World Cup 2021: ಅಭ್ಯಾಸ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿT20 World Cup 2021: ಅಭ್ಯಾಸ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ

T20 ವಿಶ್ವಕಪ್ ತಂಡ ಸೇರಲಿದ್ದಾರೆ Avesh Khan | Oneindia Kannada

ಡೆಲ್ಲಿ ಕ್ಯಾಪಿಟಲ್ಸ್ ಸಂಪೂರ್ಣ ಸ್ಕ್ವಾಡ್: ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಶಿಮ್ರಾನ್ ಹೆಟ್ಮೀರ್, ಟಾಮ್ ಕರನ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡಾ, ಅವೇಶ್ ಖಾನ್, ಅನ್ರಿಚ್ ನಾರ್ಟ್ಜೆ, ಇಶಾಂತ್ ಶರ್ಮಾ, ಅಜಿಂಕ್ಯ ರಹಾನೆ, ಅಮಿತ್ ಮಿಶ್ರಾ, ಉಮೇಶ್ ಯಾದವ್, ಸ್ಟೀವನ್ ಸ್ಮಿತ್, ಸ್ಯಾಮ್ ಬಿಲ್ಲಿಂಗ್ಸ್, ಮಾರ್ಕಸ್ ಸ್ಟೊಯಿನಿಸ್, ಲುಕ್ಮನ್ ಮೇರಿವಾಲಾ, ಬೆನ್ ದ್ವಾರಶೂಯಿಸ್, ಪ್ರವೀಣ್ ದುಬೆ, ವಿಷ್ಣು ವಿನೋದ್, ಕುಲ್ವಂತ್ ಖೇಜ್ರೋಲಿಯಾ, ಲಲಿತ್ ಯಾದವ್, ರಿಪಾಲ್ ಪಟೇಲ್

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 22 - October 28 2021, 07:30 PM
ಆಸ್ಟ್ರೇಲಿಯಾ
ಶ್ರೀಲಂಕಾ
Predict Now

For Quick Alerts
ALLOW NOTIFICATIONS
For Daily Alerts
Story first published: Tuesday, October 12, 2021, 23:40 [IST]
Other articles published on Oct 12, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X