ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಇಂಗ್ಲೆಂಡ್‌ನಿಂದ ದುಬೈಗೆ ಬಂದಿಳಿದ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರರು

Ipl 2021, Delhi Capitals cricketers from England arrive in Dubai for IPL games.

ಐಪಿಎಲ್ 14ನೇ ಆವೃತ್ತಿಯ ಉಳಿದ ಪಂದ್ಯಗಳ ಆರಂಭಕ್ಕೆ ಕೆಲವೇ ದಿನಗಳು ಮಾತ್ರವೇ ಬಾಕಿಯಿದೆ. ಈಗಾಗಲೇ ಬಹುತೇಕ ಆಟಗಾರರು ದುಬೈಗೆ ತಲುಪಿದ್ದು ಅಭ್ಯಾಸವನ್ನು ನಡೆಸುತ್ತಿದ್ದಾರೆ. ಇದೀಗ ಇಂಗ್ಲೆಂಡ್‌ ಹಾಗೂ ಭಾರತ ನಡುವಿನ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್‌ನಲ್ಲಿದ್ದ ಆಟಗಾರರು ಕೂಡ ದುಬೈಗೆ ತಲುಪಿದ್ದಾರೆ. ಐಪಿಎಲ್‌ನ ತಂಡಗಳಲ್ಲಿ ಒಂದಾಗಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರರು ಕೂಡ ಇಂಗ್ಲೆಂಡ್ ವಿರುದ್ಧದ ಸರಣಿಯನ್ನು ಮುಗಿಸಿ ದುಬೈಗೆ ಬಂದಿಳಿದಿದ್ದು ಟೂರ್ನಿಯಲ್ಲಿ ಪಾಲ್ಗೊಳ್ಳಲು ಸಜ್ಜಾಗಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಅಂತಿಮ ಹಂತದಲ್ಲಿ ಬಯೋಬಬಲ್‌ನ ಒಳಗೆ ಕೊರೊನಾವೈರಸ್ ಸ್ಪೋಟಗೊಂಡಿದೆ. ಅದರಲ್ಲೂ ಭಾರತೀಯ ತಂಡದ ಸಹಾಯಕ ಸಿಬ್ಬಂದಿಗಳು ಕೊರೊನಾವೈರಸ್‌ಗೆ ತುತ್ತಾಗಿರುವ ಹಿನ್ನೆಲೆಯಲ್ಲಿ ಸರಣಿಯನ್ನು ಮೊಟಕುಗೊಳಿಸಲಾಗಿದೆ. ಹೀಗಾಗಿ ಇಂಗ್ಲೆಂಡ್ ಪ್ರವಾಸದಲ್ಲಿ ಭಾಗಿಯಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರರಾದ ರಿಷಭ್ ಪಂತ್, ಆರ್ ಅಶ್ವಿನ್, ಅಜಿಂಕ್ಯಾ ರಹಾನೆ, ಇಶಾಂತ್ ಶರ್ಮಾ, ಅಕ್ಷರ್ ಪಟೇಲ್, ಪೃಥ್ವಿ ಶಾ ಹಾಗೂ ಉಮೇಶ್ ಯಾದವ್ ದುಬೈಗೆ ಆಗಮಿಸಿದ್ದಾರೆ.

ಟೆಸ್ಟ್ ರದ್ದಿಗೆ ಐಪಿಎಲ್ ದೂರಿದ ಮೈಕಲ್ ವಾನ್‌ಗೆ ಅಭಿಮಾನಿಗಳು ತರಾಟೆಟೆಸ್ಟ್ ರದ್ದಿಗೆ ಐಪಿಎಲ್ ದೂರಿದ ಮೈಕಲ್ ವಾನ್‌ಗೆ ಅಭಿಮಾನಿಗಳು ತರಾಟೆ

ಈಗ ಈ ಎಲ್ಲಾ ಆಟಗಾರರು ಕೂಡ ಆರು ದಿನಗಳ ಕಡ್ಡಾಯ ಕ್ವಾರಂಟೈನ್‌ನಲ್ಲಿ ಭಾಗಿಯಾಗಬೇಕಿದೆ. ಈ ಅವಧಿಯಲ್ಲಿ ಮೂರು ಬಾರಿ ಕೊರೊನಾವೈರಸ್ ಪರೀಕ್ಷೆಗೆ ಆಟಗಾರರು ಒಳಗಾಗಲಿದ್ದಾರೆ. ನೆಗೆಟಿವ್ ವರದಿ ಬಂದ ಬಳಿಕ ತಂಡದ ಬಯೋಬಬಲ್‌ಗೆ ಸೇರ್ಪಡೆಯಾಗಲಿದ್ದಾರೆ. ಇದಕ್ಕೂ ಮುನ್ನ ಇಂಗ್ಲೆಂಡ್ ಪ್ರವಾಸದಲ್ಲಿರುವ ಐಪಿಎಲ್‌ನಲ್ಲಿ ಭಾಗಿಯಾಗಲಿರುವ ಆಟಗಾರರು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಬಯೋಬಬಲ್‌ನಿಂದ ನೇರವಾಗಿ ಐಪಿಎಲ್ ಬಯೋಬಬಲ್‌ಗೆ ಸೇರ್ಪಡೆಯಾಗುವ ತೀರ್ಮಾನವಾಗಿತ್ತು.

ಇಂಗ್ಲೆಂಡ್ ಹಾಗೂ ಭಾರತ ನಡುವಿನ ಟೆಸ್ಟ್ ಸರಣಿ ಅಂತ್ಯದ ಬಳಿಕ ಭಾರತ ಹಾಗೂ ಇಂಗ್ಲೆಂಡ್‌ ಎರಡು ತಂಡಗಳ ಐಪಿಎಲ್‌ನಲ್ಲಿ ಭಾಗಿಯಾಗುವ ಆಟಗಾರರು ವಿಶೇಷ ವಿಮಾನದ ಮೂಲಕ ದುಬೈಗೆ ತೆರಳುವ ನಿರ್ಧಾರವಾಗಿತ್ತು. ಆದರೆ ಭಾರತೀಯ ತಂಡದ ಬಯೋಬಬಲ್‌ನಲ್ಲಿ ಕೊರೊನಾವೈರಸ್ ಪತ್ತೆಯಾದ ಕಾರಣ ಈಗ ಎಲ್ಲಾ ಆಟಗಾರರು ಕೂಡ ಕ್ವಾರಂಟೈನ್ ಪೂರೈಸಿದ ಬಳಿಕ ಐಪಿಎಲ್ ಬಯೋಬಬಲ್‌ಗೆ ಸೇರ್ಪಡೆಯಾಗಬೇಕಿದೆ.

ಸದ್ಯ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಉಳಿದ ಆಟಗಾರರು ದುಬೈಗೆ ತಲುಪಿದ್ದು ತಮ್ಮ ಕ್ವಾರಂಟೈನ್ ಪೂರೈಸಿದ್ದಾರೆ. ಈಗಾಗಲೇ ಬಹುತೇಕ ಆಟಗಾರರು ಕಠಿಣ ಅಭ್ಯಾಸವನ್ನು ನಡೆಸುತ್ತಿದ್ದು ಟೂರ್ನಿಗೆ ಸಜ್ಜಾಗುತ್ತಿದ್ದಾರೆ. ಮುಂದಿನ ಆರು ದಿನಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಉಳಿದ ಆಟಗಾರರು ಕೂಡ ಬಯೋಬಬಲ್‌ಗೆ ಸೇರ್ಪಡೆಯಾಗಲಿದ್ದಾರೆ.

ಈ ಹಿಂದಿನ ಐಪಿಎಲ್ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಮೋಘ ಪ್ರದರ್ಶನ ನೀಡುವ ಮೂಲಕ ಐಪಿಎಲ್ ಇತಿಹಾಸದಲ್ಲಿ ತನ್ನ ಅತ್ಯುತ್ತಮ ಸಾಧನೆ ಮಾಡಿತ್ತು. ಮೊದಲ ಬಾರಿಗೆ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ರನ್ನರ್‌ಅಪ್ ತಂಡವಾಗಿ ಹೊರಹೊಮ್ಮಿತ್ತು. ಶ್ರೇಯಸ್ ಐಯ್ಯರ್ ನೇತೃತ್ವದ ಡೆಲ್ಲಿ ಪಡೆ ಟೂರ್ನಿಯುದ್ದಕ್ಕೂ ಅಮೋಘ ಪ್ರದರ್ಶನ ನೀಡಿತ್ತು.

ಟಿ20 ವಿಶ್ವಕಪ್‌ಗೆ ಪ್ರಕಟವಾಗಿರುವ ಕೊಹ್ಲಿ ಪಡೆ ವಿರುದ್ಧ ಇದೆಂಥಾ ಆರೋಪ!ಟಿ20 ವಿಶ್ವಕಪ್‌ಗೆ ಪ್ರಕಟವಾಗಿರುವ ಕೊಹ್ಲಿ ಪಡೆ ವಿರುದ್ಧ ಇದೆಂಥಾ ಆರೋಪ!

ಇನ್ನು ಈ ಬಾರಿಯ ಐಪಿಎಲ್‌ನ ಮೊದಲಾರ್ಧದ ಪಂದ್ಯಗಳಲ್ಲಿ ಕೂಡ ಡೆಲ್ಲಿ ಅಮೋಘ ಪ್ರದರ್ಶನವನ್ನು ಮುಂದುವರಿಸಿದೆ. ಗೆಲುವಿನ ಮೇಲೆ ಗೆಲುವು ಸಾಧಿಸುತ್ತಾ ಮುನ್ನುಗ್ಗಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲಾರ್ಧದ ಅಂತ್ಯದಲಲ್ಇ ಅಂಕಪಟ್ಟಿಯಲ್ಲಿಯೂ ಅತ್ಯುನ್ನತ ಸಾಧನೆ ಮಾಡಿದೆ. ಸದ್ಯ ಈವರೆಗಿನ ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲ ಸ್ಥಾನವನ್ನು ಪಡೆದುಕೊಂಡಿದೆ.

ಇನ್ನು ಈ ಬಾರಿಯ ಐಪಿಎಲ್‌ನ ಮೊದಲಾರ್ಧದ ಪಂದ್ಯಗಳ ಆರಂಭಕ್ಕೆ ಕೆಲವೇ ದಿನಗಳ ಮುನ್ನ ಶ್ರೇಯಸ್ ಐಯ್ಯರ್ ಗಾಯಗೊಂಡಿದ್ದರು. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಖಾಯಂ ನಾಯಕನಾಗಿನಾಗಿದ್ದ ಶ್ರೇಯಸ್ ಐಯ್ಯರ್ ಐಪಿಎಲ್‌ನ ಮೊದಲಾರ್ಧದ ಪಂದ್ಯಗಳಿಂದ ಹೊರಗುಳಿದಿದ್ದರು. ಈ ಸಂದರ್ಭದಲ್ಲಿ ರಿಷಭ್ ತಂಡವನ್ನು ಮುನ್ನಡೆಸಿದ್ದಾರೆ. ಸಿಕ್ಕ ಜವಾಬ್ಧಾರಿಯನ್ನು ಅದ್ಭುತವಾಗಿ ನಿರ್ವಹಿಸಿದ್ದ ಪಂತ್ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಈಗ ಎರಡನೇ ಚರಣದ ಪಂದ್ಯಕ್ಕಾಗುವ ವೇಳೆ ಶ್ರೇಯಸ್ ಐಯ್ಯರ್ ಐಪಿಎಲ್‌ನ ಉಳಿದ ಪಂದ್ಯಗಳಿಗೆ ಲಭ್ಯವಾಗಲಿದ್ದಾರೆ. ಹಾಗಿದ್ದರೂ ರಿಷಭ್ ಪಂತ್ ಈ ಬಾರಿಯ ಐಪಿಎಲ್ ಅವೃತ್ತಿಯಲ್ಲಿ ನಾಯಕನಾಗಿಯೇ ಮುಂದುವರಿಯುವ ಸಾಧ್ಯತೆ ದಟ್ಟವಾಗಿದೆ. ಶ್ರೇಯಸ್ ಐಯ್ಯರ್ ಆಟಗಾರನಾಗಿ ತಂಡದಲ್ಲಿ ಸ್ಥಾನವನ್ನು ನಿರ್ವಹಿಸಲಿದ್ದಾರೆ.

Story first published: Sunday, September 12, 2021, 14:28 [IST]
Other articles published on Sep 12, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X