For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಕೊರೊನಾ ವೈರಸ್ ದೃಢಪಟ್ಟ ನಂತರ ಚಿಕಿತ್ಸೆಗೆ ತೆರಳಿದ ಅಮಿತ್ ಮಿಶ್ರಾ

IPL 2021: Delhi Capitals leg-spinner Amit Mishra moved to designated medical facility

ಸೋಮವಾರ ಎರಡು ಕೊರೊನಾ ವೈರಸ್ ಪ್ರಕರಣಗಳ ನಂತರ ಮಂಗಳವಾರ ಡೆಲ್ಲಿ ಕ್ಯಾಪಿಟಲ್ಸ್‌ನ ಅಮಿತ್ ಮಿಶ್ರಾ ಹಾಗೂ ಸನ್‌ರೈಸರ್ಸ್ ಹೈದರಾಬಾದ್‌ನ ವೃದ್ಧಿಮಾನ್ ಸಾಹಾ ಕೊರೊನಾ ವೈರಸ್‌ಗೆ ತುತ್ತಾಗಿರುವುದು ದೃಢಪಟ್ಟಿತು. ಈ ಬೆಳವಣಿಗೆಯ ನಂತರ ಇಡೀ ಟೂರ್ನಿಯನ್ನು ಮುಂದೂಡುವ ನಿರ್ಧಾರವನ್ನು ಬಿಸಿಸಿಐ ಕೈಗೊಂಡಿದೆ.

ಈಗ ಕೊರೊನಾ ವೈರಸ್ ದೃಢಪಟ್ಟಿರುವ ಅಮಿತ್ ಮಿಶ್ರಾ ಚಿಕಿತ್ಸೆಗಾಗಿ ತೆರಳಿದ್ದಾರೆ. ಐಪಿಎಲ್ ಆಟಗಾರರಿಗಾಗಿ ಗೊತ್ತುಪಡಿಸಲಾಗಿರುವ ವೈದ್ಯಕೀಯ ಕೇಂದ್ರಕ್ಕೆ ಅಮಿತ್ ಮಿಶ್ರಾ ತೆರಳಿದ್ದು ಚಿಕಿತ್ಸೆಯನ್ನು ಪಡೆದುಕೊಳ್ಳಲಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ವೈದ್ಯಕೀಯ ತಂಡ ಅಮಿತ್ ಮಿಶ್ರಾ ಅವರೊಂದಿಗೆ ಸಂಪರ್ಕದಲ್ಲಿದ್ದು ಅವರ ಸುರಕ್ಷತೆಯ ಬಗ್ಗೆ ನಿಗಾ ವಹಿಸುತ್ತಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಅನುಭವಿ ಸ್ಪಿನ್ನರ್ ಮಿಶ್ರಾ ಅವರು ಶೀಘ್ರವಾಗಿ ಚೇತರಿಕೆ ಕಾಣಲು ಹಾರೈಸಿದೆ.

"ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅನುಭವಿ ಸ್ಪಿನ್ನರ್ ಅಮಿತ್ ಮಿಶ್ರಾ ಕೊರೊನಾ ವೈರಸ್‌ಗೆ ತುತ್ತಾಗಿದ್ದಾರೆ. ಬಿಸಿಸಿಐ ಹಾಗೂ ಐಪಿಎಲ್ ಮಾರ್ಗಸೂಚಿಯಂತೆ ಈಗ ಅವರು ಗೊತ್ತುಪಡಿಸಿರುವ ವೈದ್ಯಕೀಯ ಸೌಲಭ್ಯ ಕೇಂದ್ರಕ್ಕೆ ತೆರಳಿದ್ದಾರೆ" ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡ ಟ್ವಿಟ್ಟರ್‌ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದೆ.

"ಡೆಲ್ಲಿ ಕ್ಯಾಪಿಟಲ್ಸ್ ತಂಡದ ವೈದ್ಯಕೀಯ ತಂಡ ಅಮಿತ್ ಮಿಶ್ರಾ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅವರ ಆರೋಗ್ಯ ಹಾಗೂ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುತ್ತಿದೆ. ಶೀಘ್ರವಾಗಿ ಚೇತರಿಕೆ ಕಾಣಲು ನಾವು ಶುಭಹಾರೈಸುತ್ತಿದ್ದೇವೆ" ಎಂದು ಡೆಲ್ಲಿ ಕ್ಯಾಪಿಟಲ್ಸ್ ಟ್ವೀಟ್‌ನಲ್ಲಿ ತಿಳಿಸಿದೆ.

Story first published: Tuesday, May 4, 2021, 23:11 [IST]
Other articles published on May 4, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+