Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ಮತ್ತೊಂದು ಗೆಲುವಿನ ಮೇಲೆ ಕಣ್ಣಿಟ್ಟ ಡೆಲ್ಲಿ, ಶಾಕ್ ನೀಡಲು ಸಂಜು ಪಡೆ ಸಜ್ಜು

IPL 2021: Delhi Capitals looks to seal playoff berth, RR eyes another victory

ಐಪಿಎಲ್‌ನಲ್ಲಿ ಶನಿವಾರ ಎರಡು ಪಂದ್ಯಗಳು ನಡೆಯಲಿದ್ದು ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಪ್ಲೇಆಪ್ ಸ್ಥಾನ ಖಚಿತಪಡಿಸಿಕೊಳ್ಳಲು ಡೆಲ್ಲಿ ಕ್ಯಾಪಟಿಲ್ಸ್‌ಗೆ ಕೇವಲ ಒಂದು ಗೆಲುವು ಮಾತ್ರವೇ ಅಗತ್ಯವಿದ್ದು ಶನಿವಾರವೇ ತನ್ನ ಸ್ಥಾನ ಕಾಯ್ದಿರಿಸಲು ಪಂತ್ ಹುಡುಗರು ಸಜ್ಜಾಗಿದ್ದಾರೆ. ಮತ್ತೊಂದೆಡೆ ಪಂಜಾಬ್ ಕಿಂಗ್ಸ್ ವಿರುದ್ಧ ಅಂತಿಮ ಓವರ್‌ನಲ್ಲಿ ನಾಟಕೀಯ ರೀತಿಯಲ್ಲಿ ಗೆಲುವು ಸಾಧಿಸಿದ ರಾಜಸ್ಥಾನ್ ರಾಯಲ್ಸ್ ಟೂರ್ನಿಯಲ್ಲಿ ಜೀವಂತವಾಗಿರಲು ಈ ಗೆಲುವಿನ ಲಯವನ್ನು ಮುಂದುವರಿಸಲು ಬಯಸಿದೆ.

ಇನ್ನು ರಾಜಸ್ಥಾನ್ ರಾಯಲ್ಸ್ ಈ ಬಾರಿಯ ಐಪಿಎಲ್‌ನ ಮೊದಲ ಸುತ್ತಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿತ್ತು. ಈ ಪ್ರದರ್ಶನವನ್ನು ಎರಡನೇ ಸುತ್ತಿನಲ್ಲಿಯೂ ನೀಡುವ ವಿಶ್ವಾಸದಲ್ಲಿದೆ ರಾಜಸ್ಥಾನ್ ರಾಯಲ್ಸ್.

ಇನ್ನು ಈ ಬಾರಿಯ ಐಪಿಎಲ್‌ನಲ್ಲಿ ಅಮೋಗ ಪ್ರದರ್ಶನ ನಿಡುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಪಂದ್ಯದಲ್ಲಿಯೂ ಗೆಲುವಿನ ಫೇವರೀಟ್ ತಂಡ ಎನಿಸಿದೆ. ಭಾರತದ ಟಾಪ್ ಆರ್ಡರ್‌ ಬ್ಯಾಟ್ಸ್‌ಮನ್‌ಗಳ ಅಬ್ಬರ ಹಾಗೂ ದಕ್ಷಿಣ ಆಫ್ರಿಕಾದ ಇಬ್ಬರು ವೇಗಿಗಳ ಭರ್ಜರಿ ಪ್ರದರ್ಶನ ಡೆಲ್ಲಿ ತಂಡಕ್ಕೆ ಬಲವನ್ನು ಹೆಚ್ಚಿಸಿದೆ. ಈ ಮಧ್ಯೆ ಆಲ್‌ರೌಂಡರ್ ಮಾರ್ಸ್ ಸ್ಟೋಯ್ನಿಸ್ ಕಲಡದ ಪಂದ್ಯದಲ್ಲಿ ಗಾಯಗೊಂಡಿದ್ದು ಮುಂದಿನ ಪಂದ್ಯದಲ್ಲಿ ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ. ಆದರೆ ಇದು ತಂಡಕ್ಕೆ ಹೆಚ್ಚಿನ ಹಿನ್ನಡೆಯುಂಟು ಮಾಡುವ ಸಾಧ್ಯತೆಯಿಲ್ಲ. ಹೀಗಾಗಿ ತಂಡದ ನಾಯಕ ರಿಷಭ್ ಪಂತ್ ಆತ್ಮ ವಿಶ್ವಾಸ ಹೆಚ್ಚಲು ಕಾರಣವಾಗಿದೆ.

ಮತ್ತೊಂದೆಡೆ ರಾಜಸ್ಥಾನ್ ರಾಯಲ್ಸ್ ತಂಡ ಈ ಬಾರಿಯ ಟೂರ್ನಿಯಲ್ಲಿ ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್, ಜೋಫ್ರಾ ಆರ್ಚರ್ ಅವರಂತಾ ಪ್ರಮುಖ ಆಟಗಾರರ ಸೇವೆಯಿಂದ ವಂಚಿತವಾಗಿದೆ. ಈ ಆಟಗಾರರ ಸ್ಥಾನಕ್ಕೆ ಹೊಸ ಪ್ರತಿಭಾನ್ವಿತ ಆಟಗಾರರು ಸೇರಿಕೊಂಡಿದ್ದರೂ ತಂಡದವಾಗಿ ಪ್ರದರ್ಶನ ನೀಡುವುದು ಅಗತ್ಯವಾಗಿದೆ.

ರಾಜಸ್ಥಾನ ರಾಯಲ್ಸ್ ಸಂಪೂರ್ಣ ತಂಡ ಸಂಜು ಸ್ಯಾಮ್ಸನ್ (ನಾಯಕ), ಯಶಸ್ವಿ ಜೈಸ್ವಾಲ್, ಮನನ್ ವೋಹ್ರಾ, ಅನುಜ್ ರಾವತ್, ರಿಯಾನ್ ಪರಾಗ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಮಹಿಪಾಲ್ ಲೊಮರ್, ಶ್ರೇಯಸ್ ಗೋಪಾಲ್, ಮಯಾಂಕ್ ಮಾರ್ಕಂಡೆ, ಗ್ಲೆನ್ ಫಿಲಿಪ್ಸ್, ತಬ್ರೇಜ್ ಶಮ್ಸಿ, ಜಯದೇವ್ ಉನದ್ಕಟ್, ಕಾರ್ತಿಕ್ ತ್ಯಾಗಿ, ಶಿವಂ ದುಬೆ, ಕ್ರಿಸ್ ಮೋರಿಸ್, ಮುಸ್ತಫಿಜುರ್ ರೆಹಮಾನ್, ಚೇತನ್ ಸಕಾರಿಯಾ, ಕೆಸಿ ಕರಿಯಪ್ಪ, ಲಿಯಾಮ್ ಲಿವಿಂಗ್‌ಸ್ಟನ್, ಕುಲ್ದಿಪ್ ಯಾದವ್, ಆಕಾಶ್ ಸಿಂಗ್

ಡೆಲ್ಲಿ ಕ್ಯಾಪಿಟಲ್ಸ್ ಸಂಪೂರ್ಣ ತಂಡ ಶಿಖರ್ ಧವನ್, ಪೃಥ್ವಿ ಶಾ, ಅಜಿಂಕ್ಯ ರಹಾನೆ, ರಿಷಭ್ ಪಂತ್ (ನಾಯಕ), ಶ್ರೇಯಸ್ ಐಯ್ಯರ್, ಶಿಮ್ರಾನ್ ಹೇಟ್ಮೇರ್, ಮಾರ್ಕಸ್ ಸ್ಟೊಯಿನಿಸ್, ಕ್ರಿಸ್ ವೋಕ್ಸ್, ಆರ್ ಅಶ್ವಿನ್, ಅಕ್ಷರ್ ಪಟೇಲ್, ಅಮಿತ್ ಮಿಶ್ರಾ, ಲಲಿತ್ ಯಾದವ್, ಪ್ರವೀಣ್ ದುಬೆ, ಕಾಗಿಸೊ ರಬಾಡಾ, ಅನ್ರಿಕ್ ನಾರ್ಕಿಯಾ, ಇಶಾಂತ್ ಶರ್ಮಾ, ಅವೇಶ್ ಖಾನ್, ಸ್ಟೀವ್ ಸ್ಮಿತ್, ಉಮೇಶ್ ಯಾದವ್, ರಿಪಾಲ್ ಪಟೇಲ್, ವಿಷ್ಣು ವಿನೋದ್, ಲುಕ್ಮನ್ ಮೇರಿವಾಲಾ, ಎಂ ಸಿದ್ದಾರ್ಥ್, ಟಾಮ್ ಕರನ್, ಸ್ಯಾಮ್ ಬಿಲ್ಲಿಂಗ್ಸ್

Story first published: Friday, September 24, 2021, 20:47 [IST]
Other articles published on Sep 24, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+