ಡೆಲ್ಲಿ ಕ್ಯಾಪಿಟಲ್ಸ್ ನಾಯಕತ್ವ ವಹಿಸಿಕೊಳ್ಳುತ್ತಲೇ ಪಂತ್ ಹೆಸರಿಗೆ ದಾಖಲೆ

ನವದೆಹಲಿ: ಟೀಮ್ ಇಂಡಿಯಾದ ಯುವ ಬ್ಯಾಟ್ಸ್‌ಮನ್ ಕಮ್ ವಿಕೆಟ್ ಕೀಪರ್ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್‌ನ ನೂತನ ನಾಯಕರಾಗಿ ಹೆಸರಿಸಲ್ಪಟ್ಟಿದ್ದಾರೆ. ಶ್ರೇಯಸ್ ಐಯ್ಯರ್ ಬದಲಿಗೆ ಪಂತ್ ಡಿಸಿ ನಾಯಕತ್ವ ವಹಿಸಿಕೊಂಡಿದ್ದಾರೆ. ಡೆಲ್ಲಿ ಕ್ಯಾಪ್ಟನ್ಸಿ ವಹಿಸಿಕೊಳ್ಳುತ್ತಲೇ ಪಂತ್ ಹೆಸರಿನಲ್ಲಿ ದಾಖಲೆ ಸೃಷ್ಠಿಯಾಗಿದೆ.
ಭಾರತ-ಇಂಗ್ಲೆಂಡ್ ಏಕದಿನ ಸರಣಿಯ ವೇಳೆ ಡೆಲ್ಲಿ ಕ್ಯಾಪಿಟಲ್ಸ್‌ನ ಎಂದಿನ ನಾಯಕ ಶ್ರೇಯಸ್ ಐಯ್ಯರ್ ಭುಜದ ಗಾಯಕ್ಕೀಡಾಗಿ ಈ ಬಾರಿಯ ಐಪಿಎಲ್‌ನಿಂದ ಹೊರ ಬಿದ್ದಿದ್ದಾರೆ. ಹೀಗಾಗಿ ಐಯ್ಯರ್ ಜಾಗಕ್ಕೆ ಪಂತ್ ಬಂದಿದ್ದಾರೆ. ಇದರೊಂದಿಗೆ ಸದ್ಯ ಐಪಿಎಲ್‌ನಲ್ಲಿ ಅತೀ ಕಿರಿಯ ನಾಯಕನೆಂಬ ವಿಶಿಷ್ಠ ದಾಖಲೆಗೆ ಪಂತ್ ಕಾರಣರಾಗಿದ್ದಾರೆ.
23ರ ಹರೆಯದ ಪಂತ್ ಆಸ್ಟ್ರೇಲಿಯಾ ಪ್ರವಾಸ ಮತ್ತು ಭಾರತಕ್ಕೆ ಇಂಗ್ಲೆಂಡ್ ಪ್ರವಾಸ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಗಮನ ಸೆಳೆದಿದ್ದರು. ಪಂತ್ ನಾಯಕನಾಗಿ ಆಯ್ಕೆಯಾಗಿರುವ ವಿಚಾರವನ್ನು ಕಳೆದ ಸೀಸನ್‌ನ ರನ್ನರ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ಟ್ವೀಟ್ ಮೂಲಕ ತಿಳಿಸಿದೆ.
2021ರ ಐಪಿಎಲ್ ಸೀಸನ್‌ನಲ್ಲಿ ತಂಡಗಳ ನಾಯಕರ ವಯಸ್ಸು
* ಡೆಲ್ಲಿ ಕ್ಯಾಪಿಟಲ್ಸ್, ರಿಷಭ್ ಪಂತ್, 23 ವರ್ಷ
* ರಾಜಸ್ಥಾನ್ ರಾಯಲ್ಸ್, ಸಂಜು ಸ್ಯಾಮ್ಸನ್, 26 ವರ್ಷ
* ಪಂಜಾಬ್ ಕಿಂಗ್ಸ್, ಕೆಎಲ್ ರಾಹುಲ್, 28 ವರ್ಷ
* ರಾಯಲ್ ಚಾಲೆಂಜರ್ಸ್ ಬೆಂಗಳೂರು, ವಿರಾಟ್ ಕೊಹ್ಲಿ, 32 ವರ್ಷ
* ಮುಂಬೈ ಇಂಡಿಯನ್ಸ್, ರೋಹಿತ್ ಶರ್ಮಾ, 33 ವರ್ಷ
* ಸನ್ ರೈಸರ್ಸ್ ಹೈದರಾಬಾದ್, ಡೇವಿಡ್ ವಾರ್ನರ್, 34 ವರ್ಷ
* ಕೋಲ್ಕತ್ತಾ ನೈಟ್ ರೈಡರ್ಸ್, ಇಯಾನ್ ಮಾರ್ಗನ್, 34 ವರ್ಷ
* ಚೆನ್ನೈ ಸೂಪರ್ ಕಿಂಗ್ಸ್, ಎಂಎಸ್ ಧೋನಿ, 39 ವರ್ಷ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications