ವಿಶೇಷ ದಾಖಲೆ ಬರೆದ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್

ಅಹ್ಮದಾಬಾದ್: ಯುವ ಬ್ಯಾಟ್ಸ್‌ಮನ್ ಕಮ್ ವಿಕೆಟ್ ಕೀಪರ್ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ವಿಶೇಷ ದಾಖಲೆಗೆ ಕಾರಣವಾಗಿದೆ. ಮಂಗಳವಾರ (ಏಪ್ರಿಲ್ 27) ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 22ನೇ ಪಂದ್ಯದಲ್ಲಿ ಡೆಲ್ಲಿ ಐಪಿಎಲ್‌ನಲ್ಲಿ 200ನೇ ಪಂದ್ಯ ಆಡಿದ ಸಾಧನೆಗೆ ಕಾರಣವಾಗಿದೆ.
ಮಂಗಳವಾರ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದ್ದವು. ಈ ಪಂದ್ಯದೊಂದಿಗೆ ಡಿಸಿ 200ನೇ ಪಂದ್ಯಕ್ಕಾಗಿ ಮೈದಾನಕ್ಕಿಳಿದ ಮೈಲಿಗಲ್ಲು ಸ್ಥಾಪಿಸಿದೆ.
ಐಪಿಎಲ್ ಇತಿಹಾಸದಲ್ಲಿ ಟ್ರೋಫಿ ಗೆಲ್ಲದ ತಂಡಗಳ ಸಾಲಿನಲ್ಲಿ ಡೆಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳಿವೆ. ಕಳೆದ ಸೀಸನ್‌ನಲ್ಲಿ ಡೆಲ್ಲಿ ತಂಡ ಚೊಚ್ಚಲ ಬಾರಿ ಫೈನಲ್‌ಗೆ ಪ್ರವೇಶಿಸಿತ್ತು. ಆದರೆ ಫೈನಲ್‌ನಲ್ಲಿ ಮುಂಬೈ ಇಂಡಿಯನ್ಸ್ ಟ್ರೋಫಿ ಗೆದ್ದಿತ್ತು.
ಕಳೆದ ಸಾರಿ ತಂಡ ಮುನ್ನಡೆಸಿದ್ದ ಶ್ರೇಯಸ್ ಐಯ್ಯರ್ ಈ ಬಾರಿ ಗಾಯದಿಂದಾಗಿ ಟೂರ್ನಿಯಿಂದ ಹೊರ ಬಿದ್ದಿದ್ದಾರೆ. ಹೀಗಾಗಿ ನಾಯಕತ್ವ ಪಂತ್ ಹೆಗಲಿಗೆ ಬಿದ್ದಿದೆ. ಡೆಲ್ಲಿ ತಂಡವನ್ನು ವೀರೇಂದ್ರ ಸೆಹ್ವಾಗ್, ಗೌತಮ್ ಗಂಭೀರ್, ಡೇವಿಡ್ ವಾರ್ನರ್, ಕೆವಿನ್ ಪೀಟರ್ಸನ್, ದಿನೇಶ್ ಕಾರ್ತಿಕ್, ಮಹೇಲ ಜಯವರ್ದನೆ ಮೊದಲಾದವರು ಮುನ್ನಡೆಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications