Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಗಿಲ್-ರಸೆಲ್ ಬ್ಯಾಟಿಂಗ್ ಸೊಗಸು, ಡೆಲ್ಲಿ ಗೆಲುವಿಗೆ ಸಾಧಾರಣ ರನ್ ಗುರಿ

IPL 2021: Delhi Capitals vs Kolkata Knight Riders, 25th Match, Playing XI, 1st half update

ಅಹ್ಮದಾಬಾದ್: ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 25ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 155 ರನ್ ಗುರಿ ನೀಡಿದೆ. ಆ್ಯಂಡ್ರೆ ರಸೆಲ್ ಮತ್ತು ಶುಬ್ಮನ್ ಗಿಲ್ ಬ್ಯಾಟಿಂಗ್‌ ನೆರವಿನಿಂದ ಕೆಕೆಆರ್ ಉತ್ತಮ ರನ್ ಕಲೆ ಹಾಕಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಕೋಲ್ಕತ್ತಾ ನೈಟ್ ರೈಡರ್ಸ್, ನಿತೀಶ್ ರಾಣಾ 15, ಶುಬ್ಮನ್ ಗಿಲ್ 43 (38 ಎಸೆತ), ರಾಹುಲ್ ತ್ರಿಪಾಠಿ 19, ಆ್ಯಂಡ್ರೆ ರಸೆಲ್ 45 (27), ದಿನೇಶ್ ಕಾರ್ತಿಕ್ 14, ಪ್ಯಾಟ್ ಕಮಿನ್ಸ್ 11 ರನ್‌ನೊಂದಿಗೆ 20 ಓವರ್‌ಗೆ 6 ವಿಕೆಟ್ ಕಳೆದು 154 ರನ್ ಗಳಿಸಿದೆ.

1
50833

ಕೋಲ್ಕತ್ತಾ ಇನ್ನಿಂಗ್ಸ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ನ ಅಕ್ಷರ್ ಪಟೇಲ್ 2, ಆವೇಶ್ ಖಾನ್ 1, ಲಲಿತ್ ಯಾದವ್ 2, ಮಾರ್ಕಸ್ ಸ್ಟೋಯ್ನಿಸ್ 1 ವಿಕೆಟ್‌ ಪಡೆದರು. ಕೆಕೆಆರ್‌ ಆಲ್ ರೌಂಡರ್ ಆ್ಯಂದ್ರೆ ರಸೆಲ್ ಈ ದಿನ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡಿರುವ 6 ಪಂದ್ಯಗಳಲ್ಲಿ 4ರಲ್ಲಿ ಗೆದ್ದು ಸದ್ಯ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ, ಕೋಲ್ಕತ್ತಾ ನೈಟ್ ರೈಡರ್ಸ್ ಆಡಿರುವ 6 ಪಂದ್ಯಗಳಲ್ಲಿ 2 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಕೋಲ್ಕತ್ತಾ ಮೇಲೆ ಪಂದ್ಯ ಗೆಲ್ಲಬೇಕಾದ ಒತ್ತಡ ಹೆಚ್ಚಿದೆ.

Story first published: Thursday, April 29, 2021, 21:35 [IST]
Other articles published on Apr 29, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+