ಐಪಿಎಲ್ 2021: ಡೆಲ್ಲಿ vs ಮುಂಬೈ, ಪ್ಲೇಯಿಂಗ್ XI, ಅಪ್‌ಡೇಟ್ಸ್

ಐಪಿಎಲ್ 14ನೇ ಆವೃತ್ತಿಯ 13ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಈ ಆವೃತ್ತಿಯ ಆರಂಭಿಕ ಮೂರು ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಸಮನಾದ ಪ್ರದರ್ಶನ ತೋರಿವೆ. ಎರಡು ತಂಡಗಳು ಕೂಡ ಒಂದು ಪಂದ್ಯವನ್ನು ಸೋತಿದ್ದರೆ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಹೀಗಾಗಿ ಈ ಪಂದ್ಯದಲ್ಲಿ ಗೆದ್ದು ಮುನ್ನಡೆ ಪಡೆಯುವ ಉತ್ಸಾಹದಲ್ಲಿ ಎರಡು ತಂಡಗಳು ಇವೆ.
ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮೂವರು ವಿದೇಶಿ ಆಟಗಾರರನ್ನು ಮಾತ್ರವೇ ಕಣಕ್ಕಿಳಿಸುತ್ತಿದೆ. ಕಳೆದ ಪಂದ್ಯದಲ್ಲಿ ಆಡುವ ಬಳಗದಲ್ಲಿ ಅವಕಾಶ ಪಡೆದಿದ್ದ ಆಡಂ ಮಿಲ್ನೆ ಆಡುವ ಬಳಗದಿಂದ ಹೊರಗುಳಿದಿದ್ದು ಜಯಂತ್ ಯಾದವ್‌ಗೆ ಅವಕಾಶ ನೀಡಲಾಗಿದೆ.
ಮತ್ತೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಎರಡು ಬದಲಾವಣೆಗಳನ್ನು ಮಾಡಿಕೊಂಡು ಕಣಕ್ಕಿಳಿಯುತ್ತಿದೆ. ಮೆರಿವಾಲಾ ಹಾಗೂ ಕ್ರಿಸ್ ವೋಕ್ಸ್ ಇಂದಿನ ಪಂದ್ಯದಿಂದ ಹೊರಗುಳಿದಿದ್ದು ಶಿಮ್ರಾನ್ ಹೇಟ್ಮೇಯರ್ ಹಾಗೂ ಅಮಿತ್ ಮಿಶ್ರಾ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.
ಮುಂಬೈ ಇಂಡಿಯನ್ಸ್ ಆಡುವ ಬಳಗ:
ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕಿರಾನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ರಾಹುಲ್ ಚಹರ್, ಜಯಂತ್ ಯಾದವ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೋಲ್ಟ್
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ:
ಪೃಥ್ವಿ ಶಾ, ಶಿಖರ್ ಧವನ್, ಸ್ಟೀವನ್ ಸ್ಮಿತ್, ರಿಷಭ್ ಪಂತ್ (ವಿಕೆಟ್ ಕೀಪರ್/ನಾಯಕ), ಮಾರ್ಕಸ್ ಸ್ಟೋಯ್ನಿಸ್, ಶಿಮ್ರಾನ್ ಹೆಟ್ಮೇಯರ್, ಲಲಿತ್ ಯಾದವ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡ, ಅಮಿತ್ ಮಿಶ್ರಾ, ಅವೇಶ್ ಖಾನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications