ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್, ಸಂಭಾವ್ಯ XI

IPL 2021: Delhi Capitals vs Mumbai Indians, Probable XI, Preview

ಶಾರ್ಜಾ: ಅಕ್ಟೋಬರ್ 2ರಂದು ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್‌)ನಲ್ಲಿ ಡಬಲ್ ಹೆಡ್ಡರ್ ಪಂದ್ಯಗಳಿವೆ. ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಸೆಣಸಾಡಿದರೆ, ದ್ವಿತೀಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಕೋಲ್ಕತ್ತಾ ನೈಟ್ ರೈಡರ್ಸ್ vs ಪಂಜಾಬ್ ಕಿಂಗ್ಸ್, ಮೀಮ್ಸ್ ತಮಾಷೆ ನೋಡಿ!ಕೋಲ್ಕತ್ತಾ ನೈಟ್ ರೈಡರ್ಸ್ vs ಪಂಜಾಬ್ ಕಿಂಗ್ಸ್, ಮೀಮ್ಸ್ ತಮಾಷೆ ನೋಡಿ!

ಮೊದಲ ಪಂದ್ಯ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದರೆ, ಎರಡನೇ ಪಂದ್ಯ ಅಬುಧಾಬಿಯ ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ ನಡೆಯಲಿದೆ. ಎರಡೂ ಪಂದ್ಯಗಳೂ ಕುತೂಹಲ ಮೂಡಿಸಿವೆ. ಮುಖ್ಯವಾಗಿ ಕಳೆದ ಸೀಸನ್‌ನ ವಿನ್ನರ್ಸ್ ಮತ್ತು ರನ್ನರ್ಸ್ ತಂಡಗಳಾದ ಡೆಲ್ಲಿ ಮತ್ತು ಮುಂಬೈಯ ಕದನ ಕುತೂಹಲ ಮೂಡಿಸಿದೆ.

ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಹೆಚ್ಚು ಬಲಶಾಲಿ

ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಹೆಚ್ಚು ಬಲಶಾಲಿ

ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಕದನದಲ್ಲಿ ಈ ಬಾರಿ ಡೆಲ್ಲಿ ಹೆಚ್ಚು ಬಲಶಾಲಿ ತಂಡವಾಗಿ ಕಾಣಿಸಿದೆ. ರಿಷಭ್ ಪಂತ್ ನಾಯಕತ್ವದ ಡಿಸಿ ಈಗಾಗಲೇ ಪ್ಲೇ ಆಫ್ಸ್‌ಗೆ ಪ್ರವೇಶ ಪಡೆದುಕೊಂಡಿದೆ. ಚೆನ್ನೈ ಸೂಪರ್ ಕಿಂಗ್ಸ್‌ ಬಳಿಕ ಈ ಸೀಸನ್‌ನಲ್ಲಿ ಪ್ಲೇ ಆಫ್ಸ್‌ಗೆ ಪ್ರವೇಶಿಸಿದ ಎರಡನೇ ತಂಡ ಡೆಲ್ಲಿ. ಈವರೆಗೆ ಆಡಿರುವ 11 ಪಂದ್ಯಗಳಲ್ಲಿ ಡೆಲ್ಲಿ 8 ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 16 ಪಾಯಿಂಟ್ಸ್‌ ಗಳಿಸಿ ದ್ವಿತೀಯ ಸ್ಥಾನದಲ್ಲಿದೆ. ಚೆನ್ನೈ ಮೊದಲ ಸ್ಥಾನದಲ್ಲಿದೆ. ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಸದ್ಯ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. 11ರಲ್ಲಿ 5 ಪಂದ್ಯಗಳನ್ನಷ್ಟೇ ಮುಂಬೈ ಗೆದ್ದಿದೆ. ಆದರೆ ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಚಾಂಪಿಯನ್ಸ್ ಪಟ್ಟ ಗೆದ್ದಿರುವ ಬಲಿಷ್ಠ ತಂಡ ಮುಂಬೈ. ರೋಹಿತ್ ಶರ್ಮಾ ನಾಯಕತ್ವದ ಮುಂಬೈ 5 ಬಾರಿ ಕಪ್ ಗೆದ್ದಿದೆ.

ಮುಂಬೈ vs ಡೆಲ್ಲಿ ಮುಖಾಮುಖಿಯಲ್ಲಿ ಬಲಿಷ್ಠರಾರು?

ಮುಂಬೈ vs ಡೆಲ್ಲಿ ಮುಖಾಮುಖಿಯಲ್ಲಿ ಬಲಿಷ್ಠರಾರು?

ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳಲ್ಲಿ ಮುಂಬೈ ಕೊಂಚ ಬಲಿಷ್ಠ ತಂಡವಾಗಿ ಕಾಣಿಸಿದೆ. ಆದರೂ ಡೆಲ್ಲಿ ತಂಡ ಮುಂಬೈಗೆ ಉತ್ತಮ ಪೈಪೋಟಿ ನೀಡಿರುವುದು ಅಂಕಿ-ಅಂಶಗಳಲ್ಲಿ ಕಾಣಿಸುತ್ತಿದೆ. ಒಟ್ಟು 29 ಬಾರಿ ಮುಂಬೈ ಮತ್ತು ಡೆಲ್ಲಿ ತಂಡಗಳು ಮುಖಾಮುಖಿಯಾಗಿವೆ. ಇದರಲ್ಲಿ ಮುಂಬೈ 16 ಪಂದ್ಯಗಳನ್ನು ಗೆದ್ದಿದ್ದರೆ, ಡೆಲ್ಲಿ 13 ಪಂದ್ಯಗಳನ್ನು ಗೆದ್ದಿದೆ. ಈ ಬಾರಿ ಸೀಸನ್ ಆರಂಭದಿಂದಲೂ ಡೆಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಕಪ್‌ ಗೆಲ್ಲದ ತಂಡಗಳ ಸಾಲಿನಲ್ಲಿರುವ ಡೆಲ್ಲಿ ಈ ಬಾರಿ ಮತ್ತೆ ಫೈನಲ್‌ಗೆ ಪ್ರವೇಶಿಸಿ ಟ್ರೋಫಿ ಜಯಿಸುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಶನಿವಾರದ ಪಂದ್ಯದಲ್ಲಿ ಡೆಲ್ಲಿ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಆದರೆ ಪಂದ್ಯ ಜಿದ್ದಾಜಿದ್ದಿಯಿಂದ ಕೂಡಿರುವುದು ನಿರೀಕ್ಷಿತ.

ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ ಸಂಭಾವ್ಯ ತಂಡ

ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ ಸಂಭಾವ್ಯ ತಂಡ

ಮುಂಬೈ ಇಂಡಿಯನ್ಸ್ ಸಂಭಾವ್ಯ ಪ್ಲೇಯಿಂಗ್ XI
ರೋಹಿತ್ ಶರ್ಮಾ (ಸಿ), ಕ್ವಿಂಟನ್ ಡಿ ಕಾಕ್ (ವಿಕೆ), ಸೂರ್ಯಕುಮಾರ್ ಯಾದವ್/ಇಶಾನ್ ಕಿಶನ್, ಸೌರಭ್ ತಿವಾರಿ, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ನಾಥನ್ ಕೌಲ್ಟರ್-ನೈಲ್/ಜಯಂತ್ ಯಾದವ್, ರಾಹುಲ್ ಚಾಹರ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್.

ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ಪ್ಲೇಯಿಂಗ್ XI
ಸ್ಟೀವ್ ಸ್ಮಿತ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (c/wk), ಶಿಮ್ರನ್ ಹೆಟ್ಮೈರ್, ಲಲಿತ್ ಯಾದವ್, ಅಕ್ಸರ್ ಪಟೇಲ್, ಆರ್ ಅಶ್ವಿನ್, ಕಾಗಿಸೊ ರಬಾಡಾ, ಅನ್ರಿಚ್ ನಾರ್ಕಿಯಾ/ಅಮಿತ್ ಮಿಶ್ರಾ, ಆವೇಶ್ ಖಾನ್.

Story first published: Saturday, October 2, 2021, 10:54 [IST]
Other articles published on Oct 2, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X