ಅಬುಧಾಬಿ: ಅಬುಧಾಬಿಯ ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 36ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಿವೆ. ಮೊದಲು ಬ್ಯಾಟಿಂಗ್ ಮಾಡಿರುವ ಡೆಲ್ಲಿ ಎದುರಾಳಿಗೆ 155 ರನ್ ಗುರಿ ನೀಡಿದೆ.
ಈ ಕೆಲಸ ಮಾಡಿದ್ರೆ ಧೋನಿ ಕಳಪೆ ಫಾರ್ಮ್ನಿಂದ ಹೊರಬಂದು ಹೆಚ್ಚು ರನ್ ಗಳಿಸಬಹುದು: ಗಂಭೀರ್
ಟಾಸ್ ಸೋತು ಬ್ಯಾಟಿಂಗ್ಗೆ ಇಳಿಸಲ್ಪಟ್ಟ ಡೆಲ್ಲಿ ಕ್ಯಾಪಿಟಲ್ಸ್ ನಿಂದ ಪೃಥ್ವಿ ಶಾ 10, ಶಿಖರ್ ಧವನ್ 8, ಶ್ರೇಯಸ್ ಐಯ್ಯರ್ 43, ರಿಷಭ್ ಪಂತ್ 24, ಶಿಮ್ರನ್ ಹೆಟ್ಮೈರ್ 28, ಲಲಿತ್ ಯಾದವ್ 14, ಅಕ್ಷರ್ ಪಟೇಲ್ 12, ರವಿಚಂದ್ರನ್ ಅಶ್ವಿನ್ 6 ರನ್ ಸೇರಿಸಿದರು. ಡಿಸಿ 20 ಓವರ್ಗೆ 6 ವಿಕೆಟ್ ಕಳೆದು 154 ರನ್ ಗಳಿಸಿತು.
ಐಪಿಎಲ್: ಡೆಲ್ಲಿ ಕ್ಯಾಪಿಟಲ್ಸ್ vs ರಾಜಸ್ಥಾನ್ ರಾಯಲ್ಸ್, Live ಸ್ಕೋರ್
ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಎರಡೂ ಕೂಡ ದ್ವಿತೀಯ ಹಂತದ ಆರಂಭಿಕ ಪಂದ್ಯದಲ್ಲಿ ಗೆಲುವನ್ನಾಚರಿಸಿತ್ತು. ಡೆಲ್ಲಿ ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಜಯ ಗಳಿಸಿದ್ದರೆ, ರಾಜಸ್ಥಾನ್ ರಾಯಲ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ರೋಚಕ 2 ರನ್ ಜಯ ಗಳಿಸಿತ್ತು.
ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI
ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ಡಬ್ಲ್ಯೂ/ಸಿ), ಲಿಯಾಮ್ ಲಿವಿಂಗ್ಸ್ಟೋನ್, ಡೇವಿಡ್ ಮಿಲ್ಲರ್, ಮಹಿಪಾಲ್ ಲೊಮರ್, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಕಾರ್ತಿಕ್ ತ್ಯಾಗಿ, ಚೇತನ್ ಸಕಾರಿಯಾ, ಮುಸ್ತಫಿಜುರ್ ರಹಮಾನ್, ತಬ್ರೇಜ್ ಶಮ್ಸಿ
ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI
ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್, ನಾಯಕ), ಲಲಿತ್ ಯಾದವ್, ಶಿಮ್ರಾನ್ ಹೆಟ್ಮೈರ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡಾ, ಅನ್ರಿಚ್ ನಾರ್ತ್ಜೆ, ಅವೇಶ್ ಖಾನ್.