For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹೊಸ ಜರ್ಸಿ ಅನಾವರಣಕ್ಕೆ ಕ್ಷಣಗಣನೆ

IPL 2021: Delhi Capitals will unveil their New Jersey for IPL 14th Edition on Friday

ಐಪಿಎಲ್ 14ನೇ ಆವೃತ್ತಿಗೆ ಎಲ್ಲಾ ತಂಡಗಳು ಕೂಡ ಸಜ್ಜಾಗುತ್ತಿದೆ. ಭಾರತದಲ್ಲೇ ನಡೆಯಲಿರುವ ಈ ಬಾರಿಯ ಐಪಿಎಲ್ ಟೂರ್ನಿಗೆ ಸಕಲ ಸಿದ್ಧತೆಗಳು ನಡೆಯುತ್ತಿದೆ. ಇತ್ತ ತಂಡಗಳು ಕೂಡ ಟೂರ್ನಿಯ ಆರಂಭಕ್ಕೆ ಕಾದು ಕುಳಿತಿದೆ. ಕಳೆದ ಬಾರಿಯ ಆವೃತ್ತಿಯ ರನ್ನರ್ ಅಪ್ ಡೆಲ್ಲಿ ಕ್ಯಾಪಿಟಲ್ಸ್ ಈ ಬಾರಿಯ ಟೂರ್ನಿಗಾಗಿ ತನ್ನ ಜರ್ಸಿಯನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ.

ಈ ಬಾರಿಯ ಐಪಿಎಲ್‌ನಲ್ಲಿ ಧರಿಸುವ ಜರ್ಸಿಯನ್ನು ಡೆಲ್ಲಿ ತಂಡ ಮಾರ್ಚ್ 19ರಂದು ಶುಕ್ರವಾರ ಅನಾವರಣಗೊಳಿಸಲಿದೆ. ಈ ಮೂಲಕ 14ನೇ ಆವೃತ್ತಿಗೆ ಧರಿಸುವ ಹೊಸ ಜರ್ಸಿಯನ್ನು ಬಿಡುಗಡೆಗೊಳಿಸುವ ಮೊದಲ ಫ್ರಾಂಚೈಸಿ ಎನಿಸಲಿದೆ ಡೆಲ್ಲಿ ಕ್ಯಾಪಿಟಲ್ಸ್.

ಮೂಲಗಳ ಮಾಹಿತಿಯ ಪ್ರಕಾರ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಈ ಜರ್ಸಿಯಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ. ಸಣ್ಣಪುಟ್ಟ ಬದಲಾವಣೆಗಳೊಂದಿಗೆ ಹೊಸ ಜರ್ಸಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ಬಿಡುಗಡೆ ಮಾಡಲಿದೆ ಎನ್ನಲಾಗಿದೆ. ಶುಕ್ರವಾರ ಈ ಕುತೂಹಲಗಳಿಗೆ ಈ ತೆರೆಬೀಳಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ಕಳೆದ ಬಾರಿಯ ಆವೃತ್ತಿಯಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿತ್ತು. ಶ್ರೇಯಸ್ ಐಯ್ಯರ್ ನೇತೃತ್ವದಲ್ಲಿ ಯುವ ಪಡೆಯ ಸಹಾಯದೊಂದಿಗೆ ಡೆಲ್ಲಿ ಫೈನಲ್ ಪ್ರವೇಶವನ್ನು ಪಡೆದುಕೊಂಡಿತ್ತು. ಫೈನಲ್‌ನಲ್ಲಿ ಮುಂಬೈ ವಿರುದ್ಧ ಸೆಣೆಸಾಣಿ ರನ್ನರ್‌ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು.

ಈ ಬಾರಿ ಡೆಲ್ಲಿ ಕೆಲ ಬದಲಾವಣೆಗಳೊಂದಿಗೆ ಡೆಲ್ಲಿ ಮತ್ತಷ್ಟು ಬಲಿಷ್ಠವಾಗಿರುವಂತೆ ತೋರುತ್ತಿದೆ. ಹೀಗಾಗಿ ಐಪಿಎಲ್ 14ನೇ ಆವೃತ್ತಿಯಲ್ಲಿ ಶ್ರೇಯಸ್ ಪಡೆ ಯಾವ ರೀತಿಯ ಪ್ರದರ್ಶನ ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ. ಏಪ್ರಿಲ್ 9ರಿಂದ ಐಪಿಎಲ್ ಪಂದ್ಯಗಳು ಆರಂಭವಾಗಲಿದೆ.

Story first published: Thursday, March 18, 2021, 16:36 [IST]
Other articles published on Mar 18, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+