ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಮುಂಬೈ ಗೆಲುವಿನಾಸೆಗೆ ಮುಳುವಾದ ಅಶ್ವಿನ್, ಶ್ರೇಯಸ್; ಮುಂಬೈ ಇಂಡಿಯನ್ಸ್‌‌ ಪ್ಲೇಆಫ್ ಕಥೆಯೇನು?

IPL 2021: Delhi Capitals won against Mumbai Indians by 4 wickets

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ನಡೆದ 46ನೇ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಮತ್ತು ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಶಾರ್ಜಾ ಕ್ರೀಡಾಂಗಣದಲ್ಲಿ ಕಾದಾಟ ನಡೆಸಿದವು.

ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಯುಎಇ ಚರಣದಲ್ಲಿ ಹ್ಯಾಟ್ರಿಕ್ ಸೋಲನ್ನು ಕಂಡು ಕಂಗೆಟ್ಟಿದ್ದ ಮುಂಬೈ ಇಂಡಿಯನ್ಸ್ ಇತ್ತೀಚೆಗಷ್ಟೇ ಪಂಜಾಬ್ ಕಿಂಗ್ಸ್ ತಂಡದ ವಿರುದ್ದ ಗೆಲುವನ್ನು ಸಾಧಿಸುವುದರ ಮೂಲಕ ತನ್ನ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿತ್ತು. ಹೀಗೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಜಯ ಸಾಧಿಸಿದ ಹುಮ್ಮಸ್ಸಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ಹಿನ್ನಡೆಯುಂಟಾಗಿದೆ.

ಆತ ಕೆಟ್ಟ ಪ್ರದರ್ಶನ ನೀಡುತ್ತಿದ್ದಾನೆ ಎಂದು ಗೊತ್ತಿದ್ದರೂ ಧೋನಿ ಬೇರೆಯವರಿಗೆ ಅವಕಾಶ ನೀಡಲ್ಲ: ಸೆಹ್ವಾಗ್ಆತ ಕೆಟ್ಟ ಪ್ರದರ್ಶನ ನೀಡುತ್ತಿದ್ದಾನೆ ಎಂದು ಗೊತ್ತಿದ್ದರೂ ಧೋನಿ ಬೇರೆಯವರಿಗೆ ಅವಕಾಶ ನೀಡಲ್ಲ: ಸೆಹ್ವಾಗ್

ಈಗಾಗಲೇ ಅಧಿಕೃತವಾಗಿ ಪ್ಲೇ ಆಫ್ ಹಂತವನ್ನು ತಲುಪಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಇಂದಿನ (ಅಕ್ಟೋಬರ್ 2) ಪಂದ್ಯದಲ್ಲಿ 4 ವಿಕೆಟ್‍ಗಳ ರೋಚಕ ಗೆಲುವನ್ನು ಸಾಧಿಸುವುದರ ಮೂಲಕ ಟೂರ್ನಿಯಲ್ಲಿ ತನ್ನ 9ನೇ ಗೆಲುವನ್ನು ಕಂಡಿದೆ.

ಸೂರ್ಯಕುಮಾರ್ ಯಾದವ್ ಕೆಟ್ಟ ಫಾರ್ಮ್ ಬಗ್ಗೆ ಮೌನ ಮುರಿದ ಕೋಚ್ ಮಹೇಲಾ ಜಯವರ್ಧನೆಸೂರ್ಯಕುಮಾರ್ ಯಾದವ್ ಕೆಟ್ಟ ಫಾರ್ಮ್ ಬಗ್ಗೆ ಮೌನ ಮುರಿದ ಕೋಚ್ ಮಹೇಲಾ ಜಯವರ್ಧನೆ

ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ನೀಡಿ ಬೌಲಿಂಗ್ ಆಯ್ದುಕೊಂಡರು. ಹೀಗೆ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 129 ರನ್ ಗಳಿಸಿ, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲ್ಲಲು 130 ರನ್‌ಗಳ ಅಲ್ಪ ಮೊತ್ತದ ಗುರಿಯನ್ನು ನೀಡಿತ್ತು. ಅಲ್ಪ ಮೊತ್ತದ ಗುರಿಯನ್ನು ನೀಡಿದರೂ ಸಹ ಮುಂಬೈ ಇಂಡಿಯನ್ಸ್ ತಂಡ ಅಂತಿಮ ಓವರ್‌ವರೆಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬ್ಯಾಟ್ಸ್‌ಮನ್‌ಗಳನ್ನು ಕಾಡಿದರು. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳನ್ನು ಬಹುಬೇಗನೆ ಪೆವಿಲಿಯನ್ ಕಡೆ ಕಳುಹಿಸಿ ಗೆಲುವಿಗೆ ಹತ್ತಿರವಾಗುತ್ತಿದ್ದ ಮುಂಬೈ ಇಂಡಿಯನ್ಸ್ ತಂಡಕ್ಕೆ ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಶ್ರೇಯಸ್ ಐಯ್ಯರ್ ಮತ್ತು ರವಿಚಂದ್ರನ್ ಅಶ್ವಿನ್ ನೆಲಕಚ್ಚಿ ನಿಲ್ಲುವ ಮೂಲಕ ಮುಳುವಾದರು. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಆಟಗಾರರೆಲ್ಲಾ ಔಟ್ ಆದ ಬಳಿಕ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಶ್ರೇಯಸ್ ಐಯ್ಯರ್ ಅಜೇಯ 33 ಮತ್ತು ರವಿಚಂದ್ರನ್ ಅಶ್ವಿನ್ ಅಜೇಯ 20 ರನ್ ಕಲೆಹಾಕುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡ 19.1 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 132 ರನ್ ಬಾರಿಸಿ ರೋಚಕ ಗೆಲುವನ್ನು ಸಾಧಿಸಿತು.

ಡೆಲ್ಲಿ ಕ್ಯಾಪಿಟಲ್ಸ್ ಇನ್ನಿಂಗ್ಸ್

ಡೆಲ್ಲಿ ಕ್ಯಾಪಿಟಲ್ಸ್ ಇನ್ನಿಂಗ್ಸ್


ಮುಂಬೈ ಇಂಡಿಯನ್ಸ್ ತಂಡ ನೀಡಿದ್ದ 130 ರನ್‌ಗಳ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಪೃಥ್ವಿ ಶಾ ಮತ್ತು ಶಿಖರ್ ಧವನ್ ಹೇಳಿಕೊಳ್ಳುವಂತಹ ಆರಂಭವನ್ನೇನೋ ನೀಡಲಿಲ್ಲ. ಪೃಥ್ವಿ ಶಾ 6 ರನ್, ಶಿಖರ್ ಧವನ್ 8, ಸ್ಟೀವ್ ಸ್ಮಿತ್ 9, ರಿಷಭ್ ಪಂತ್ 26, ಅಕ್ಷರ್ ಪಟೇಲ್ 9, ಶಿಮ್ರಾನ್ ಹೆಟ್ಮಾಯೆರ್ 15 ರನ್ ಬಾರಿಸಿದರು. ಹೀಗೆ ಈ ಎಲ್ಲ ಆಟಗಾರರು ಔಟ್ ಆದಾಗ ಡೆಲ್ಲಿ ಕ್ಯಾಪಿಟಲ್ಸ್ ತಂಡ 13.1 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 93 ರನ್ ಗಳಿಸಿತ್ತು. ಈ ಸಂದರ್ಭದಲ್ಲಿ ಮುಂಬೈ ಇಂಡಿಯನ್ಸ್ ತಂಡ ಈ ಪಂದ್ಯವನ್ನು ಕೂಡ ಗೆಲ್ಲಲಿದೆ ಎಂಬ ನಿರೀಕ್ಷೆಗಳು ಹುಟ್ಟುಕೊಂಡಿತ್ತು. ಆದರೆ ಏಳನೇ ವಿಕೆಟ್‍ಗೆ ಒಂದಾದ ಶ್ರೇಯಸ್ ಐಯ್ಯರ್ ಮತ್ತು ರವಿಚಂದ್ರನ್ ಅಶ್ವಿನ್ ಮುಂಬೈ ಇಂಡಿಯನ್ಸ್ ತಂಡದ ಗೆಲುವಿನ ಕನಸಿಗೆ ಮುಳುವಾಗಿಬಿಟ್ಟರು. 39 ರನ್‌ಗಳ ಜತೆಯಾಟವಾಡಿದ ಈ ಜೋಡಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಗೆಲುವಿನ ದಡ ಸೇರಿಸಿತು. ಅಂತಿಮವಾಗಿ 6 ಎಸೆತಗಳಲ್ಲಿ 4 ರನ್ ಬೇಕಾಗಿದ್ದಾಗ ಕೃನಾಲ್ ಪಾಂಡ್ಯ ಎಸೆತಕ್ಕೆ ರವಿಚಂದ್ರನ್ ಅಶ್ವಿನ್ ಸಿಕ್ಸರ್ ಬಾರಿಸುವ ಮೂಲಕ ಇನ್ನೂ 5 ಎಸೆತಗಳು ಬಾಕಿಯಿರುವಾಗಲೇ ಪಂದ್ಯಕ್ಕೆ ಅಂತ್ಯ ಹಾಡಿದರು. ಶ್ರೇಯಸ್ ಐಯ್ಯರ್ 33 ಎಸೆತಗಳಲ್ಲಿ ಅಜೇಯ 33 ರನ್ ಗಳಿಸಿದರೆ ರವಿಚಂದ್ರನ್ ಅಶ್ವಿನ್ 21 ಎಸೆತಗಳಲ್ಲಿ ಅಜೇಯ 20 ರನ್ ಬಾರಿಸಿದರು.


ಮುಂಬೈ ಇಂಡಿಯನ್ಸ್ ತಂಡದ ಪರ ಟ್ರೆಂಟ್ ಬೌಲ್ಟ್, ಜಯಂತ್ ಯಾದವ್, ಕೃನಾಲ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ ಮತ್ತು ನಾಥನ್ ಕೌಲ್ಟರ್-ನೈಲ್ ತಲಾ ಒಂದೊಂದು ವಿಕೆಟ್ ಪಡೆದರು ಹಾಗೂ ಪೊಲಾರ್ಡ್ ಒಂದು ರನ್ ಔಟ್ ಮಾಡಿದರು.

ಮುಂಬೈ ಇಂಡಿಯನ್ಸ್ ಬ್ಯಾಟಿಂಗ್

ಮುಂಬೈ ಇಂಡಿಯನ್ಸ್ ಬ್ಯಾಟಿಂಗ್


ಮೊದಲು ಬ್ಯಾಟಿಂಗ್ ಆರಂಭಿಸಿದ ಮುಂಬೈ ಇಂಡಿಯನ್ಸ್ ತಂಡದ ಪರ ನಾಯಕ ರೋಹಿತ್ ಶರ್ಮಾ ಮತ್ತು ಕ್ವಿಂಟನ್ ಡಿಕಾಕ್ ಆರಂಭಿಕ ಆಟಗಾರರಾಗಿ ಕಣಕ್ಕಿಳಿದರು. ಆರಂಭಿಕರಾಗಿ ಕಣಕ್ಕಿಳಿದ ಈ ಜೋಡಿ ಹೇಳಿಕೊಳ್ಳುವಂತಹ ಆರಂಭವನ್ನೇನೂ ನೀಡಲಿಲ್ಲ, ರೋಹಿತ್ ಶರ್ಮಾ 7 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ಕ್ವಿಂಟನ್ ಡಿ ಕಾಕ್ 19 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಇನ್ನು ಯುಎಇ ಚರಣದಲ್ಲಿ ಆಡಿದ ಎಲ್ಲಾ ಪಂದ್ಯಗಳಲ್ಲಿಯೂ ಕಳಪೆ ಪ್ರದರ್ಶನ ನೀಡಿದ್ದ ಸೂರ್ಯಕುಮಾರ್ ಯಾದವ್ ಈ ಪಂದ್ಯದಲ್ಲಿ 33 ರನ್ ಕಲೆ ಹಾಕುವುದರ ಮೂಲಕ ಲಯ ಕಂಡುಕೊಂಡಿದ್ದಾರೆ. ಉಳಿದಂತೆ ಸೌರಭ್ ತಿವಾರಿ 15, ಕೀರನ್ ಪೊಲಾರ್ಡ್ 6, ಹಾರ್ದಿಕ್ ಪಾಂಡ್ಯ 17, ನಾಥನ್ ಕೌಲ್ಟರ್ ನೈಲ್ 1, ಜಯಂತ್ ಯಾದವ್ 11, ಕೃನಾಲ್ ಪಾಂಡ್ಯ ಅಜೇಯ 13 ಮತ್ತು ಜಸ್ಪ್ರೀತ್ ಬೂಮ್ರಾ ಅಜೇಯ 1 ರನ್ ಕಲೆ ಹಾಕುವುದರ ಮೂಲಕ ಮುಂಬೈ ಇಂಡಿಯನ್ಸ್ ತಂಡ 20 ಓವರ್‌ಗಳಲ್ಲಿ 129 ರನ್ ಕಲೆಹಾಕಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲ್ಲಲು 130 ರನ್‌ಗಳ ಗುರಿಯನ್ನು ನೀಡಿತು.


ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಅವೇಶ್ ಖಾನ್ ಮತ್ತು ಅಕ್ಷರ್ ಪಟೇಲ್ ತಲಾ 3 ವಿಕೆಟ್ ಪಡೆದುಕೊಳ್ಳುವುದರ ಮೂಲಕ ಮುಂಬೈ ಇಂಡಿಯನ್ಸ್ ಬ್ಯಾಟ್ಸ್‌ಮನ್‌ಗಳ ಮೇಲೆ ಹಿಡಿತವನ್ನು ಸಾಧಿಸಿದರು. ಉಳಿದಂತೆ ರವಿಚಂದ್ರನ್ ಅಶ್ವಿನ್ ಮತ್ತು ಆನ್ರಿಚ್ ನಾರ್ಕಿಯಾ ತಲಾ ಒಂದೊಂದು ವಿಕೆಟ್ ಪಡೆದರು.

ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಅಕ್ಷರ್ ಪಟೇಲ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

RCB ಪರವಾಗಿ ತೀರ್ಪು ನೀಡಿದ Umpire ಗೆ ಮಂಗಳಾರತಿ | Oneindia Kannada
ಪ್ಲೇ ಆಫ್ ಪ್ರವೇಶಿಸಬಹುದಾಮುಂಬೈ ಇಂಡಿಯನ್ಸ್?

ಪ್ಲೇ ಆಫ್ ಪ್ರವೇಶಿಸಬಹುದಾಮುಂಬೈ ಇಂಡಿಯನ್ಸ್?

ಹೀಗೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲುವುದರ ಮೂಲಕ ಪ್ಲೇ ಆಫ್ ಆಸೆಯಿಂದ ಮುಂಬೈ ಇಂಡಿಯನ್ಸ್ ತಂಡ ತುಸು ಹಿಂದೆ ಸರಿದಿದೆ. ಟೂರ್ನಿಯಲ್ಲಿ ಇದುವರೆಗೂ ಒಟ್ಟು 12 ಪಂದ್ಯಗಳನ್ನಾಡಿರುವ ಮುಂಬೈ ಇಂಡಿಯನ್ಸ್ 5 ಪಂದ್ಯಗಳಲ್ಲಿ ಮಾತ್ರ ಗೆದ್ದಿದ್ದು 10 ಅಂಕಗಳನ್ನು ಪಡೆದುಕೊಂಡಿದೆ. ಟೂರ್ನಿಯಲ್ಲಿ ಇನ್ನೂ 2 ಪಂದ್ಯಗಳನ್ನು ಆಡಲಿರುವ ಮುಂಬೈ ಇಂಡಿಯನ್ಸ್ ಪ್ಲೇ ಆಫ್ ಹಂತವನ್ನು ಪ್ರವೇಶಿಸಬೇಕೆಂದರೆ ಆ ಎರಡೂ ಪಂದ್ಯಗಳಲ್ಲಿ ಗೆಲ್ಲಲೇಬೇಕಾಗಿದೆ. ಅಷ್ಟೇ ಅಲ್ಲದೇ ಮುಂಬೈ ಇಂಡಿಯನ್ಸ್ ತಂಡದಷ್ಟೇ ಅಂಕಗಳನ್ನು ಹೊಂದಿರುವ ಕೋಲ್ಕತಾ ನೈಟ್ ರೈಡರ್ಸ್, ಪಂಜಾಬ್ ಕಿಂಗ್ಸ್ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ತಮ್ಮ ಮುಂದಿನ 2 ಪಂದ್ಯಗಳಲ್ಲಿ ಕನಿಷ್ಠ 1 ಪಂದ್ಯದಲ್ಲಾದರೂ ಸೋಲಬೇಕಿದೆ. ಈ ರೀತಿಯ ಫಲಿತಾಂಶಗಳು ಹೊರಬಂದರೆ ಮಾತ್ರ ಮುಂಬೈ ಇಂಡಿಯನ್ಸ್ ತಂಡ ಪ್ಲೇಆಫ್ ಸುತ್ತಿಗೆ ಪ್ರವೇಶ ಪಡೆಯಲಿದೆ ಇಲ್ಲವಾದರೆ ಪ್ಲೇಆಫ್ ಸುತ್ತನ್ನು ಪ್ರವೇಶಿಸುವಲ್ಲಿ ವಿಫಲವಾಗಲಿದೆ.

Story first published: Saturday, October 2, 2021, 23:42 [IST]
Other articles published on Oct 2, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X