ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ : ಕೊವಿಡ್ ನೆಗೆಟಿವ್ ಬೆನ್ನಲ್ಲೇ ಆರ್‌ಸಿಬಿ ಕ್ಯಾಂಪ್ ಸೇರಿದ ಪಡಿಕ್ಕಲ್

IPL 2021: Devdutt Padikkal joins the RCB camp after testing negative for COVID-19

ಏಪ್ರಿಲ್ 9ರಿಂದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾಗುತ್ತಿದೆ. ಇನ್ನೇನು ಐಪಿಎಲ್ ಆರಂಭವಾಗುವ ಸಮಯ ಹತ್ತಿರ ಬರುತ್ತಿದ್ದಂತೆಯೇ ಐಪಿಎಲ್ ಟೂರ್ನಿಯಲ್ಲಿ ಭಾಗವಹಿಸುವ ಹಲವಾರು ಆಟಗಾರರಲ್ಲಿ ಕೊವಿಡ್ ಸೋಂಕು ಕಾಣಿಸಿಕೊಂಡಿತ್ತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ ಅವರಿಗೂ ಸಹ ಕೊರೊನಾ ಸೋಂಕು ತಗುಲಿತ್ತು.

ಮಾರ್ಚ್ 22ರಂದು ದೇವದತ್ ಪಡಿಕ್ಕಲ್ ಅವರಿಗೆ ಕೊರೊನಾ ಸೊಂಕು ತಗುಲಿರುವುದು ದೃಢಪಟ್ಟಿತ್ತು. ಸೋಂಕು ದೃಢಪಟ್ಟ ಬೆನ್ನಲ್ಲೇ ದೇವದತ್ ಪಡಿಕ್ಕಲ್ ಹೋಮ್ ಕ್ವಾರಂಟೈನ್ ಗೆ ಒಳಗಾದರು. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದ್ದು ದೇವದತ್ ಪಡಿಕ್ಕಲ್ ಅವರಿಗೆ ಎರಡನೇ ಟೆಸ್ಟ್‌ನಲ್ಲಿ ಕೊವಿಡ್ 19 ವರದಿ ನೆಗೆಟಿವ್ ಬಂದಿರುವ ಕಾರಣ ಮತ್ತೆ ದೇವದತ್ ಪಡಿಕ್ಕಲ್ ಆರ್‌ಸಿಬಿ ಕ್ಯಾಂಪ್ ಸೇರಿಕೊಂಡಿದ್ದಾರೆ

ಈ ಸಂತಸದ ವಿಷಯವನ್ನು ದೇವದತ್ ಪಡಿಕ್ಕಲ್ ವಿಡಿಯೋ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಆರ್‌ಸಿಬಿ ಟ್ವಿಟರ್ ಖಾತೆಯಲ್ಲಿ ಪಡಿಕ್ಕಲ್ ಮಾತನಾಡಿರುವ ವಿಡಿಯೋವನ್ನು ಶೇರ್ ಮಾಡಲಾಗಿದೆ. ಪಡಿಕ್ಕಲ್ ಅವರಿಗೆ ಕೊರೊನಾ ವರದಿ ನೆಗೆಟಿವ್ ಬಂದಿದ್ದು ಮತ್ತೆ ಆರ್‌ಸಿಬಿ ಬಳಗವನ್ನು ಸೇರಿಕೊಳ್ಳುತ್ತಿದ್ದಾರೆ. ಪಡಿಕ್ಕಲ್ ಸ್ಥಿತಿ ಉತ್ತಮವಾಗಿದ್ದು ಆರೋಗ್ಯವಾಗಿದ್ದಾರೆ ಹಾಗೂ ಆಡಲು ಸಿದ್ಧವಾಗಿದ್ದಾರೆ ಎಂದು ಆರ್‌ಸಿಬಿ ಟ್ವೀಟ್ ಮಾಡಿದೆ.

ವಿಡಿಯೋದಲ್ಲಿ ಮಾತನಾಡಿರುವ ದೇವದತ್ ಪಡಿಕ್ಕಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ನಿಮ್ಮ ಹಾರೈಕೆ ಮತ್ತು ಪ್ರಾರ್ಥನೆಗಳಿಗೆ ಧನ್ಯವಾದಗಳು ಅವು ನನಗೆ ತುಂಬಾ ಪ್ರಮುಖವಾದವು ಎಂದು ಪಡಿಕ್ಕಲ್ ಹೇಳಿದರು. ಎರಡು ವಾರಗಳ ಹಿಂದೆ ಕೊವಿಡ್ ಪಾಸಿಟಿವ್ ವರದಿ ಬಂದಿತ್ತು ತದನಂತರ ಹೋಮ್ ಕ್ವಾರಂಟೈನ್ ಆಗಿದ್ದೆ ಇದೀಗ ಎರಡೂ ಟೆಸ್ಟ್ ಗಳಲ್ಲಿ ಕೊವಿಡ್ 19 ವರದಿ ನೆಗೆಟಿವ್ ಬಂದಿರುವ ಹಿನ್ನಲೆಯಲ್ಲಿ ತಂಡವನ್ನು ಸೇರಿಕೊಂಡಿದ್ದೇನೆ ಎಂದು ಪಡಿಕ್ಕಲ್ ಸಂತಸ ವ್ಯಕ್ತಪಡಿಸಿದರು.

Story first published: Wednesday, April 7, 2021, 16:52 [IST]
Other articles published on Apr 7, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X