ಬ್ಯಾಟ್ ಮತ್ತು ಗ್ಲೋವ್ಸ್ ಮೇಲೆ ಎಂಎಸ್ ಧೋನಿ ಸಹಿ ಪಡೆದ ಶೆಲ್ಡನ್ ಜಾಕ್ಸನ್

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 15ನೇ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಬುಧವಾರ ( ಏಪ್ರಿಲ್ 21 ) ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ನಡೆಯಿತು. ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೇವಲ 3 ವಿಕೆಟ್ ನಷ್ಟಕ್ಕೆ 20 ಓವರ್‌ಗಳಲ್ಲಿ 220 ರನ್‌ಗಳ ಬೃಹತ್ ಮೊತ್ತವನ್ನು ದಾಖಲಿಸಿತು. 221 ರನ್‌ಗಳ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೇಲಿನ ಕ್ರಮಾಂಕದ ಆಟಗಾರರು ಕಳಪೆ ಪ್ರದರ್ಶನ ನೀಡಿದರೂ ಸಹ ಮಧ್ಯಮ ಕ್ರಮಾಂಕದ ಆಟಗಾರರ ಭರ್ಜರಿ ಬ್ಯಾಟಿಂಗ್‌ನಿಂದಾಗಿ ಗೆಲುವಿನ ಸನಿಹಕ್ಕೆ ಬಂದಿತ್ತು. ತೀವ್ರ ಪೈಪೋಟಿ ನೀಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 19.1 ಓವರ್‌ಗಳಲ್ಲಿ 202 ರನ್‌ಗಳಿಗೆ ಆಲ್ಔಟ್ ಆಗುವ ಮೂಲಕ 18 ರನ್‌ಗಳಿಂದ ಸೋಲುಂಡಿತು.
ಇನ್ನು ಈ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ವಿಕೆಟ್ ಕೀಪರ್ ಆಗಿ ಹೊಸ ಮೈಲಿಗಲ್ಲನ್ನು ಸೃಷ್ಟಿಸಿದರು. ಹೌದು ಐಪಿಎಲ್ ಇತಿಹಾಸದಲ್ಲಿ ವಿಕೆಟ್ ಕೀಪರ್ ಆಗಿ 150 ಔಟ್ ಮಾಡಿದ ಮೊದಲ ಮತ್ತು ಏಕೈಕ ವಿಕೆಟ್ ಕೀಪರ್ ಎನಿಸಿಕೊಂಡರು. ಪಂದ್ಯದಲ್ಲಿ ಚೆನ್ನೈ ತಂಡ ಗೆಲುವು ಸಾಧಿಸಿದ ನಂತರ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಬೆಂಚ್ ಆಟಗಾರ ಶೆಲ್ಡನ್ ಜಾಕ್ಸನ್ ಮಹೇಂದ್ರ ಸಿಂಗ್ ಧೋನಿ ಅವರನ್ನು ಭೇಟಿ ಮಾಡಿ ಅವರಿಂದ ಬ್ಯಾಟ್ ಮತ್ತು ಗ್ಲೋವ್ಸ್ ಮೇಲೆ ಸಹಿ ಹಾಕಿಸಿಕೊಂಡಿದ್ದಾರೆ. ವಿಕೆಟ್ ಕೀಪರ್ ಆಗಿರುವ ಶೆಲ್ಡನ್ ಜಾಕ್ಸನ್ ತನ್ನ ನೆಚ್ಚಿನ ಆಟಗಾರನನ್ನು ಭೇಟಿಯಾದ ಫೋಟೋಗಳನ್ನು ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದು, ಈ ಸಂದರ್ಭವನ್ನು ನಾನು ಪದಗಳಲ್ಲಿ ಬಣ್ಣಿಸಲಾರೆ ಎಂದು ಬರೆದುಕೊಂಡಿದ್ದಾರೆ.
ಎಂಎಸ್ ಧೋನಿ ಅವರನ್ನು ಯುವ ಆಟಗಾರ ಶೆಲ್ಡಾನ್ ಜಾಕ್ಸನ್ ಭೇಟಿಯಾದ ರೀತಿಯಲ್ಲಿಯೇ ಇತ್ತೀಚೆಗೆ ರಾಜಸ್ಥಾನ್ ರಾಯಲ್ಸ್ ತಂಡದ ಯುವ ಪ್ರತಿಭೆ ಚೇತನ್ ಸಕಾರಿಯಾ ಕೂಡ ಧೋನಿಯನ್ನು ಭೇಟಿಯಾಗಿ ಫೋಟೋ ತೆಗೆದುಕೊಂಡು ಇನ್ಸ್ಟಾಗ್ರಾಂನಲ್ಲಿ ಹಾಕಿಕೊಂಡಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications