ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್‌ನಲ್ಲಿ ಭಾಗಿಯಾದ ಪ್ರತಿಯೊಬ್ಬರ ಸುರಕ್ಷತೆ ನಮ್ಮ ಆದ್ಯತೆ: ಜಯ್ ಶಾ

IPL 2021: Didn’t wish to compromise on safety of people involved in IPL : BCCI Secretary Jay Shah

ಕೊರೊನಾ ವೈರಸ್‌ನ ಎರಡನೇ ಅಲೆಯಲ್ಲಿ ದೇಶ ತತ್ತರಿಸಿದ್ದು ಈಗ ಐಪಿಎಲ್‌ಗೂ ಅದು ದೊಡ್ಡ ಮಟ್ಟದಲ್ಲಿ ಆಘಾತವನ್ನು ನೀಡಿದೆ. ಐಪಿಎಲ್ ಬಯೋಬಬಲ್‌ನಲ್ಲಿದ್ದರೂ ನಾಲ್ವರು ಆಟಗಾರರು ಕೊರೊನಾ ವೈರಸ್‌ಗೆ ತುತ್ತಾಗಿದ್ದಾರೆ. ಹೀಗಾಗಿ ಇಡೀ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಈ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಪ್ರತಿಕ್ರಿಯಿಸಿದ್ದು ಟೂರ್ನಿಯಲ್ಲಿ ಭಾಗಿಯಾದ ಪ್ರತಿಯೊಬ್ಬರ ಸುರಕ್ಷತೆ ನಮ್ಮ ಆದ್ಯತೆ ಎಂದಿದ್ದಾರೆ.

ಎನ್‌ಐ ಸುದ್ದಿ ಸಂಸ್ಥೆ ಜೊತೆಗೆ ಮಾತನಾಡಿದ ಜಯ್ ಶಾ, ದೇಶದಲ್ಲಿ ಕೊರೊನಾ ವೈರಸ್‌ನ ಪರಿಸ್ಥಿತಿಯ ಬಗ್ಗೆ ಬಿಸಿಸಿಐ ಹಾಗೂ ಐಪಿಎಲ್ ಆಡಳಿತ ಮಂಡಳಿ ನಿರಂತರವಾಗಿ ಗಮನವಿಟ್ಟಿದೆ. ಈಗ ಟೂರ್ನಿಯನ್ನು ಸಂಪೂರ್ಣವಾಗಿ ಮುಂದೂಡುವ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.

'ಐಪಿಎಲ್ 2021' ಮತ್ತೆ ನಡೆಯುತ್ತಾ?: ಇಲ್ಲಿದೆ ಸಂಪೂರ್ಣ ಮಾಹಿತಿ'ಐಪಿಎಲ್ 2021' ಮತ್ತೆ ನಡೆಯುತ್ತಾ?: ಇಲ್ಲಿದೆ ಸಂಪೂರ್ಣ ಮಾಹಿತಿ

"ಬಿಸಿಸಿಐ ಹಾಗೂ ಐಪಿಎಲ್ ಆಡಳಿತ ಮಂಡಳಿ ಅವಿರೋಧವಾಗಿ ಟೂರ್ನಿಯನ್ನು ಮುಂದಿನ ಸೂಚನೆಗಳು ಬರುವವರೆಗೆ ಮುಂದೂಡುವ ನಿರ್ಧಾರ ತೆಗೆದುಕೊಂಡಿದೆ. ನಾವು ಆಟಗಾರರು ಸೇರಿದಂತೆ ಸಿಬ್ಬಂದಿಗಳು, ಮೈದಾನದ ಸಿಬ್ಬಂದಿಗಳು, ಪಂದ್ಯದ ಅಧಿಕಾರಿಗಳು ಹಾಗೂ ಟೂರ್ನಿಯಲ್ಲಿ ಭಾಗಿಯಾದ ಉಳಿದ ಎಲ್ಲರ ಸುರಕ್ಷತೆಯಲ್ಲಿಯೂ ರಾಜಿ ಮಾಡಿಕೊಳ್ಳಲು ಬಯಸುವುದಿಲ್ಲ" ಎಂದು ಜಯ್ ಶಾ ಹೇಳಿಕೆಯನ್ನು ನೀಡಿದ್ದಾರೆ.

ಸೋಮವಾರ ಕೆಕೆಆರ್ ತಂಡದ ಇಬ್ಬರು ಆಟಗಾರರು ಕೊರೊನಾ ವೈರಸ್‌ಗೆ ತುತ್ತಾಗಿರುವುದು ಬೆಳಕಿಗೆ ಬಂದ ನಂತರ ಮಂಗಳವಾರ ಸನ್‌ರೈಸರ್ಸ್ ಹೈದರಾಬಾದ್ ತಂಡ ವೃದ್ಧಿಮಾನ್ ಸಾಹ ಕೂಡ ಕೊರೊನಾ ವೈರಸ್‌ಗೆ ತುತ್ತಾಗಿರುವುದು ದೃಢಪಟ್ಟಿದೆ.

ಕೊರೊನಾ ಕಂಟಕ, 2021ರ ಐಪಿಎಲ್ ರದ್ದುಗೊಳಿಸಿದ ಬಿಸಿಸಿಐ!ಕೊರೊನಾ ಕಂಟಕ, 2021ರ ಐಪಿಎಲ್ ರದ್ದುಗೊಳಿಸಿದ ಬಿಸಿಸಿಐ!

ಇದರ ಜೊತೆಗೆ ಡೆಲ್ಲಿ ಕ್ಯಾಪಿಟಲ್ಸ್‌ನ ಅಮಿತ್ ಮಿಶ್ರಾ ಕೂಡ ಕೊರೊನಾ ವೈರಸ್‌ಗೆ ತುತ್ತಾಗಿದ್ದಾರೆ. ಈ ಮೂಲಕ ಐಪಿಎಲ್ ಬಯೋಬಬಲ್‌ನಲ್ಲಿ ನಾಲ್ವರು ಆಟಗಾರರು ಕೊರೊನಾ ವೈರಸ್‌ಗೆ ತುತ್ತಾಗಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ತಕ್ಷಣವೇ ಟೂರ್ನಿಯನ್ನು ಮುಂದೂಡುವ ನಿರ್ಧಾರವನ್ನು ಬಿಸಿಸಿಐ ಹಾಗೂ ಐಪಿಎಲ್ ಆಡಳಿತ ಮಂಡಳಿ ಕೈಗೊಂಡಿದೆ.

Story first published: Tuesday, May 4, 2021, 15:05 [IST]
Other articles published on May 4, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X