ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್: ಮಹೇಂದ್ರ ಸಿಂಗ್ ಧೋನಿ ದಾಖಲೆ ಮುರಿದ ದಿನೇಶ್ ಕಾರ್ತಿಕ್

 IPL 2021: Dinesh Karthik surpassed MS Dhoni in Most IPL catches as wicket keeper record

ಸೆಪ್ಟೆಂಬರ್ 19ರ ಭಾನುವಾರದಿಂದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಎರಡನೇ ಭಾಗ ಯುಎಇಯಲ್ಲಿ ಆರಂಭವಾಗಿದೆ.

ಭಾರತ ನೆಲದಲ್ಲಿ ಆರಂಭವಾಗಿ ಕೊರೊನಾ ಕಾರಣದಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡು ಯುಎಇಗೆ ಸ್ಥಳಾಂತರಿಸಲ್ಪಟ್ಟು ಮುಂದುವರಿಯುತ್ತಿರುವ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 34ನೇ ಪಂದ್ಯ ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ನಡೆಯಿತು. ಇತ್ತೀಚಿಗಷ್ಟೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂದ್ಯವನ್ನು ಆಡಿದ್ದ ಮುಂಬೈ ಇಂಡಿಯನ್ಸ್ ತಂಡ ಸೋಲನ್ನುಂಡು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದಲ್ಲಿ ನೀರಸ ಆರಂಭವನ್ನು ಪಡೆದುಕೊಂಡಿತ್ತು. ಹೀಗೆ ಚೆನ್ನೈ ವಿರುದ್ಧ ಸೋಲನ್ನು ಕಂಡಿದ್ದ ಮುಂಬೈ ಇಂಡಿಯನ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆದ ಪಂದ್ಯದಲ್ಲಿಯೂ ಸೋಲುವುದರ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ಕುಸಿದಿದೆ. ಇತ್ತ ಈ ಬಾರಿಯ ಐಪಿಎಲ್ ಟೂರ್ನಿಯ ದ್ವಿತೀಯ ಭಾಗದ ತನ್ನ ಮೊದಲನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಮುಂಬೈ ತಂಡವನ್ನೂ ಸೋಲಿಸಿ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿದೆ.

ಸತ್ಯ ಸ್ವೀಕರಿಸಿ ಮುಂದೆ ಸಾಗಬೇಕು; ಕೊನೆಗೂ ಪಂತ್ ನಾಯಕತ್ವದ ಬಗ್ಗೆ ಮೌನ ಮುರಿದ ಶ್ರೇಯಸ್ ಐಯ್ಯರ್ಸತ್ಯ ಸ್ವೀಕರಿಸಿ ಮುಂದೆ ಸಾಗಬೇಕು; ಕೊನೆಗೂ ಪಂತ್ ನಾಯಕತ್ವದ ಬಗ್ಗೆ ಮೌನ ಮುರಿದ ಶ್ರೇಯಸ್ ಐಯ್ಯರ್

ಹೀಗೆ ಐಪಿಎಲ್ ಮೊದಲಾರ್ಧದಲ್ಲಿ ಕಳಪೆ ಪ್ರದರ್ಶನವನ್ನು ನೀಡಿ ಅಂಕಪಟ್ಟಿಯಲ್ಲಿ ಏಳನೇ ಸ್ಥಾನ ಪಡೆದುಕೊಂಡಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ದ್ವಿತೀಯ ಭಾಗದಲ್ಲಿ ಆಡಿರುವ ಮೊದಲ ಎರಡೂ ಪಂದ್ಯಗಳಲ್ಲಿಯೂ ಸತತವಾಗಿ ಗೆಲುವು ಸಾಧಿಸುವುದರ ಮೂಲಕ ಉತ್ತಮ ಪ್ರದರ್ಶನವನ್ನು ನೀಡುತ್ತಿದೆ. ಇನ್ನು ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ವಿಶೇಷವಾದ ದಾಖಲೆಯಲ್ಲಿ ಮಹೇಂದ್ರ ಸಿಂಗ್ ಧೋನಿ ಅವರನ್ನು ಹಿಂದಿಕ್ಕಿ ಈ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಮಹೇಂದ್ರ ಸಿಂಗ್ ಧೋನಿ ದಾಖಲೆಯನ್ನು ದಿನೇಶ್ ಕಾರ್ತಿಕ್ ಮುರಿದಿರುವುದರ ವಿವರ ಮುಂದೆ ಇದೆ ನೋಡಿ..

ಕ್ಯಾಚ್ ದಾಖಲೆಯಲ್ಲಿ ಧೋನಿಯನ್ನು ಹಿಂದಿಕ್ಕಿದ ದಿನೇಶ್ ಕಾರ್ತಿಕ್

ಕ್ಯಾಚ್ ದಾಖಲೆಯಲ್ಲಿ ಧೋನಿಯನ್ನು ಹಿಂದಿಕ್ಕಿದ ದಿನೇಶ್ ಕಾರ್ತಿಕ್

ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆದ ವಿಕೆಟ್ ಕೀಪರ್ ಎಂಬ ದಾಖಲೆಯನ್ನು ಮಹೇಂದ್ರ ಸಿಂಗ್ ಧೋನಿ ನಿರ್ಮಿಸಿದ್ದರು. ಇದೀಗ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ದಿನೇಶ್ ಕಾರ್ತಿಕ್ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದ್ದ ಈ ದಾಖಲೆಯನ್ನು ಮುರಿದು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಎಂಎಸ್ ಧೋನಿ 212 ಐಪಿಎಲ್ ಪಂದ್ಯಗಳಲ್ಲಿ ವಿಕೆಟ್ ಕೀಪರ್ ಆಗಿ 114 ಕ್ಯಾಚ್‌ಗಳನ್ನು ಪಡೆದು ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆದ ವಿಕೆಟ್ ಕೀಪರ್ ಎಂಬ ದಾಖಲೆಯನ್ನು ನಿರ್ಮಿಸಿದ್ದರು. ಇದೀಗ ಸೆಪ್ಟೆಂಬರ್ 23ರಂದು ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ 115ನೇ ಕ್ಯಾಚ್‌ನ್ನು ಪಡೆಯುವುದರ ಮೂಲಕ ಧೋನಿ ಮಾಡಿದ್ದ ಈ ದಾಖಲೆಯನ್ನು ಮುರಿದು ಹಾಕಿದ್ದಾರೆ. ಇನ್ನು ದಿನೇಶ್ ಕಾರ್ತಿಕ್ ಈ ಕ್ಯಾಚ್ ದಾಖಲೆಯನ್ನು 205 ಪಂದ್ಯಗಳಲ್ಲಿ ಮಾಡಿದ್ದಾರೆ.

ಅತಿಹೆಚ್ಚು ಕ್ಯಾಚ್ ಪಡೆದ ಟಾಪ್ 5 ಐಪಿಎಲ್ ವಿಕೆಟ್ ಕೀಪರ್‌ಗಳು

ಅತಿಹೆಚ್ಚು ಕ್ಯಾಚ್ ಪಡೆದ ಟಾಪ್ 5 ಐಪಿಎಲ್ ವಿಕೆಟ್ ಕೀಪರ್‌ಗಳು

1. ದಿನೇಶ್ ಕಾರ್ತಿಕ್ - 115 ಕ್ಯಾಚ್‌ಗಳು

2. ಎಂಎಸ್ ಧೋನಿ - 114 ಕ್ಯಾಚ್‌ಗಳು

3. ರಾಬಿನ್ ಉತ್ತಪ್ಪ - 90 ಕ್ಯಾಚ್‌ಗಳು

4. ಪಾರ್ಥಿವ್ ಪಟೇಲ್ - 81 ಕ್ಯಾಚ್‌ಗಳು

5. ವೃದ್ಧಿಮಾನ್ ಸಹಾ - 79 ಕ್ಯಾಚ್‌ಗಳು

ನಾನು ದೊಡ್ಡ Rajini ಅಭಿಮಾನಿ ಎಂದ Venkatesh Iyer | Oneindia kannada
ಮುಂಬೈ ವಿರುದ್ಧ ಗೆದ್ದು ಬೀಗಿದ ಕೆಕೆಆರ್

ಮುಂಬೈ ವಿರುದ್ಧ ಗೆದ್ದು ಬೀಗಿದ ಕೆಕೆಆರ್

ಇನ್ನು ಐಪಿಎಲ್ ಇತಿಹಾಸದಲ್ಲಿ ಕೆಕೆಆರ್ ವಿರುದ್ಧ ದೊಡ್ಡಮಟ್ಟದ ಮೇಲುಗೈ ಸಾಧಿಸಿದ್ದ ಮುಂಬೈ ಇಂಡಿಯನ್ಸ್ ತಂಡ ಗುರುವಾರ ನಡೆದ ಪಂದ್ಯದಲ್ಲಿಯೂ ಕೂಡ ಗೆಲುವು ಸಾಧಿಸಲಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಬ್ಯಾಟ್ಸ್‌ಮನ್‌ಗಳ ಅಬ್ಬರದ ಎದುರು ಮಂಕಾದ ಮುಂಬೈ ಇಂಡಿಯನ್ಸ್ ತಂಡ ಸೋಲುವುದರ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ಕುಸಿತ ಕಂಡಿದೆ. ಮುಂಬೈ ಇಂಡಿಯನ್ಸ್ ತಂಡ ನೀಡಿದ 156 ರನ್‌ಗಳ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 15.1 ಓವರ್‌ಗಳಲ್ಲಿ 159 ರನ್ ಬಾರಿಸಿ 7 ವಿಕೆಟ್‍ಗಳ ಭರ್ಜರಿ ಜಯವನ್ನು ಸಾಧಿಸಿದೆ ಹಾಗೂ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿದೆ.

Story first published: Friday, September 24, 2021, 12:39 [IST]
Other articles published on Sep 24, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X