ಐಪಿಎಲ್‌ನಲ್ಲಿ ಇಂದು ಡಬಲ್ ಹೆಡ್ಡರ್: ಕೊಲ್ಕತ್ತಾಗೆ ಡೆಲ್ಲಿ ಸವಾಲು, ಮುಂಬೈ ವಿರುದ್ಧ ಪಂಜಾಬ್ ಸೆಣೆಸಾಟ

ಐಪಿಎಲ್‌ನಲ್ಲಿ ವಾರಾಂತ್ಯದಲ್ಲಿ ಡಬಲ್ ಹೆಡ್ಡರ್ ಸಾಮಾನ್ಯ ಆದ್ರೆ ಇಂದು ಮಂಗಳವಾರವಾಗಿದ್ದರೂ ಎರಡು ಪಂದ್ಯಗಳು ನಡೆಯಲಿದೆ. ಮೊದಲ ಪಂದ್ಯ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದರೆ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

ಶಾರ್ಜಾದಲ್ಲಿ ನಡೆಯುವ ಇಂದಿನ ಮೊದಲ ಪಂದ್ಯ ಹೆಚ್ಚು ಕುತೂಹಲಕಾರಿಯಾಗಿದೆ. ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ತನ್ನ ಅದ್ಭುತ ಪ್ರದರ್ಶನವನ್ನು ಮುಂದುವರಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ಗೆಲುವಿನ ಮೇಲೆ ಗೆಲುವು ದಾಖಲಿಸಿ ಮುನ್ನುಗ್ಗುತ್ತಿದೆ. ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು ಮೊದಲ ಸ್ಥಾನಕ್ಕೇರಲು ಹವಣಿಸುತ್ತಿದೆ. ಈ ಮಧ್ಯೆ ಈ ಬಾರಿಯ ಐಪಿಎಲ್‌ನ ಭಾರತದಲ್ಲಿ ನಡೆದ ಮೊದಲ ಚರಣದಲ್ಇ ಹೀನಾಯ ಪ್ರದರ್ಶನ ನೀಡಿದ್ದ ಕೆಕೆಆರ್ ಯುಎಇನಲ್ಲಿ ಮೈಕೊಡವಿ ನಿಂತಿದೆ. ಸತತ ಗೆಲುವುಗಳನ್ನು ದಾಖಲಿಸುತ್ತಾ ಅಗ್ರ ನಾಲ್ಕಕ್ಕೆ ಬಂದು ತಲುಪಿದೆ. ಹೀಗಾಗಿ ತನ್ನ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳಲು ಕೆಕೆಆರ್ ತನ್ನ ಸರ್ವ ಪ್ರಯತ್ನವನ್ನು ಕೂಡ ನಡೆಸಲಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ : ಶುಬ್ಮನ್ ಗಿಲ್, ವೆಂಕಟೇಶ್ ಅಯ್ಯರ್, ರಾಹುಲ್ ತ್ರಿಪಾಠಿ, ಇಯಾನ್ ಮಾರ್ಗನ್ (ನಾಯಕ), ನಿತೀಶ್ ರಾಣಾ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುನಿಲ್ ನರೈನ್, ಲಾಕಿ ಫರ್ಗುಸನ್, ಟಿಮ್ ಸೌಥಿ, ವರುಣ್ ಚಕ್ರವರ್ತಿ, ಸಂದೀಪ್ ವಾರಿಯರ್ , ಹರ್ಭಜನ್ ಸಿಂಗ್, ಶಕೀಬ್ ಅಲ್ ಹಸನ್, ಬೆನ್ ಕಟಿಂಗ್, ಕರುಣ್ ನಾಯರ್, ಪವನ್ ನೇಗಿ, ಕುಲದೀಪ್ ಯಾದವ್, ಗುರ್ಕೀರತ್ ಸಿಂಗ್ ಮಾನ್, ಶೆಲ್ಡನ್ ಜಾಕ್ಸನ್, ಟಿಮ್ ಸೀಫರ್ಟ್, ರಿಂಕು ಸಿಂಗ್, ಕಮಲೇಶ್ ನಾಗರಕೋಟಿ, ಶಿವಂ ಮಾವಿ, ವೈಭವ್ ಅರೋರಾ, ಪ್ರಸಿದ್ ಕೃಷ್ಣ, ಆಂಡ್ರೆ ರಸೆಲ್

Ishan Kishan ಬೇಜಾರಾಗಿರೋದನ್ನು ನೋಡಿ Virat Kohli ಮಾಡಿದ್ದೇನು | Oneindia Kannada

ಡೆಲ್ಲಿ ಕ್ಯಾಪಿಟಲ್ಸ್ : ಶಿಖರ್ ಧವನ್, ಸ್ಟೀವನ್ ಸ್ಮಿತ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್/ ನಾಯಕ ), ಶಿಮ್ರಾನ್ ಹೆಟ್ಮೀರ್, ಲಲಿತ್ ಯಾದವ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡಾ, ಅನ್ರಿಚ್ ನಾರ್ಕಿಯಾ, ಆವೇಶ್ ಖಾನ್, ಇಶಾಂತ್ ಶರ್ಮಾ, ಅಜಿಂಕ್ಯ ರಹಾನೆ, ಅಮಿತ್ ಮಿಶ್ರಾ, ಉಮೇಶ್ ಯಾದವ್, ಸ್ಯಾಮ್ ಬಿಲ್ಲಿಂಗ್ಸ್, ಮಾರ್ಕಸ್ ಸ್ಟೋಯಿನಿಸ್, ಲುಕ್ಮಾನ್ ಮೇರಿವಾಲಾ, ಟಾಮ್ ಕುರ್ರನ್, ಬೆನ್ ದ್ವಾರಶುಯಿಸ್, ಪ್ರವೀಣ್ ದುಬೆ, ವಿಷ್ಣು ವಿನೋದ್, ಕುಲ್ವಂತ್ ಖೇಜ್ರೋಲಿಯಾ, ರಿಪಾಲ್ ಪಟೇಲ್, ಪೃಥ್ವಿ ಶಾ

ಮತ್ತೊಂದು ಮುಖಾಮುಖಿಯಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಅಬುದಾಭಿಯಲ್ಲಿ ನಡೆಯಲಿದೆ. ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಈ ಬಾರಿಯ ಆವೃತ್ತಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನಿಡುತ್ತಿದೆ. ಮುಂಬೈ ಇಂಡಿಯನ್ಸ್ ತಂಡದ ಪ್ರದರ್ಶನ ಅತ್ಯಂತ ನೀರಸವಾಗಿದ್ದು ಪ್ರಮುಖ ಆಟಗಾರರೆಲ್ಲರೂ ವೈಫಲ್ಯವನ್ನು ಅನುಭವಿಸುತ್ತಿದ್ದಾರೆ. ಇದು ಮುಂಬೈ ಪಾಲಿಗೆ ಆತಂಕಕಾರಿ ಬೆಳವಣಿಗೆ. ಸದ್ಯ ಅಂಕಪಟ್ಟಿಯಲ್ಲಿಯೂ ಮುಂಬೈ ಇಂಡಿಯನ್ಸ್ 7ನೇ ಸ್ಥಾನದಲ್ಲಿದ್ದು ಪ್ಲೇಆಫ್ ಹಂತಕ್ಕೇರುವುದು ಮುಂಬೈಗೆ ಕಠಿಣವಾಗಿದೆ.

ಇನ್ನು ಕೆಎಕ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡ ಈ ಬಾರಿಯ ಆವೃತ್ತಿಯಲ್ಲಿಯೂ ನೀರಸ ಪ್ರದರ್ಶನ ಮುಂದುವರಿಸಿದೆ. ಆದರೆ ಕೊನೆಯ ಪಂದ್ತದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗೆಲುವು ಸಾಧಿಸಿದ್ದು ಈ ಪಂದ್ಯದಲ್ಲಿ ಪಂಜಾಬ್ ಆತ್ಮವಿಶ್ವಾಸವನ್ನ ಹೆಚ್ಚಿಸಿದೆ. ಹೀಗಾಗಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಪ್ಲೇಆಫ್ ಹಂತಕ್ಕೇರುವ ಸ್ಪರ್ಧೆಯಲ್ಲಿ ಮತ್ತೊಂದು ಹೆಜ್ಜೆ ಮುಂದಿಡುವ ಪ್ರಯತ್ನ ನಡೆಸಲಿದೆ ಪಂಜಾಬ್ ಕಿಂಗ್ಸ್ ತಂಡ.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 5 - October 19 2021, 03:30 PM
ಸ್ಕಾಟ್ಲೆಂಡ್
ಪಪುವಾ ನ್ಯೂ ಗಿನಿವಾ
Predict Now

For Quick Alerts
ALLOW NOTIFICATIONS
For Daily Alerts
Story first published: Tuesday, September 28, 2021, 9:07 [IST]
Other articles published on Sep 28, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X