For Quick Alerts
ALLOW NOTIFICATIONS  
For Daily Alerts
 

ಐಪಿಎಲ್: ನರೈನ್ ಕಂಟಕ, ಈ ವರ್ಷವೂ ಇಲ್ಲ ಕಪ್; ಎಲಿಮಿನೇಟರ್‌ನಲ್ಲಿ ಕೆಕೆಆರ್‌ಗೆ ಶರಣಾದ ಆರ್‌ಸಿಬಿ

IPL 2021, eliminator: Kolkata Knight Riders won against Royal challengers Bangalore by 4 wickets

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಎಲಿಮಿನೇಟರ್ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವೆ ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು.

ಈ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ರೋಚಕ 4 ವಿಕೆಟ್‍ಗಳ ಗೆಲುವನ್ನು ಸಾಧಿಸಿದ. 19.4 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಿದ ಕೋಲ್ಕತಾ ನೈಟ್ ರೈಡರ್ಸ್ ತಂಡ ಈ ಎಲಿಮಿನೇಟರ್ ಪಂದ್ಯವನ್ನು ಗೆದ್ದು ಕ್ವಾಲಿಫೈಯರ್ 2 ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟೂರ್ನಿಯಿಂದ ಹೊರಬಿದ್ದಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 138 ರನ್ ಕಲೆಹಾಕಿತು. ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ 4 ಓವರ್ ಮಾಡಿದ ಸುನಿಲ್ ನರೈನ್ ಕೇವಲ 21 ರನ್ ನೀಡಿ 4 ವಿಕೆಟ್ ಪಡೆದರು. ಹೀಗೆ ಎಲಿಮಿನೇಟರ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 138 ರನ್ ಕಲೆಹಾಕುವ ಮೂಲಕ ಎದುರಾಳಿ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ ಗೆಲ್ಲಲು 139 ರನ್‌ಗಳ ಗುರಿಯನ್ನು ನೀಡಿತು.

ಹೀಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನೀಡಿದ ಸುಲಭ ಗುರಿಯನ್ನು ಬೆನ್ನತ್ತಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಶುಬ್ಮನ್ ಗಿಲ್ 29 ಮತ್ತು ವೆಂಕಟೇಶ್ ಐಯ್ಯರ್ 26 ರನ್ ಗಳಿಸಿ ಉತ್ತಮ ಆರಂಭವನ್ನು ನೀಡಿದ್ದರು. ನಂತರ ಬಂದ ರಾಹುಲ್ ತ್ರಿಪಾಠಿ 6 ಮತ್ತು ನಿತೀಶ್ ರಾಣಾ 23 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ನಂತರ ಬೌಲಿಂಗ್‌ನಲ್ಲಿ ಅಬ್ಬರಿಸಿದ್ದ ಸುನಿಲ್ ನರೈನ್ ಬ್ಯಾಟಿಂಗ್‌ನಲ್ಲಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕಂಟಕವಾದರು. ಕ್ರಿಸ್ಟಿಯನ್ ಮಾಡಿದ ಪಂದ್ಯದ 12ನೇ ಓವರ್‌ನಲ್ಲಿ 3 ಸಿಕ್ಸರ್ ಚಚ್ಚಿದ ಸುನಿಲ್ ನರೈನ್ 15 ಎಸೆತಗಳಲ್ಲಿ 26 ರನ್ ಬಾರಿಸಿದರು. ಇನ್ನುಳಿದಂತೆ ದಿನೇಶ್ ಕಾರ್ತಿಕ್ 10, ಇಯಾನ್ ಮಾರ್ಗನ್ ಅಜೇಯ 5 ಮತ್ತು ಶಕಿಬ್ ಅಲ್ ಹಸನ್ ಅಜೇಯ 5 ರನ್ ಬಾರಿಸಿದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್:

ಮೊದಲು ಬ್ಯಾಟಿಂಗ್ ಆರಂಭಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ದೇವದತ್ ಪಡಿಕ್ಕಲ್ ಮತ್ತು ವಿರಾಟ್ ಕೊಹ್ಲಿ ಅಬ್ಬರದ ಆರಂಭ ನೀಡುವಲ್ಲಿ ಎಡವಿದರು. ದೇವದತ್ ಪಡಿಕ್ಕಲ್ 21 ರನ್ ಗಳಿಸಿ ಔಟ್ ಆದರೆ, ವಿರಾಟ್ ಕೊಹ್ಲಿ 39 ರನ್ ಗಳಿಸಿದರು, ಕಳೆದ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ಮಾಡಿದ್ದ ಶ್ರೀಕರ್ ಭರತ್ ಈ ಪಂದ್ಯದಲ್ಲಿ ಕೇವಲ 9 ರನ್ ಕಲೆಹಾಕಿ ಪೆವಿಲಿಯನ್ ಸೇರಿಕೊಂಡರು. ನಂತರ ಬಂದ ಎಬಿ ಡಿವಿಲಿಯರ್ಸ್ ಈ ಪಂದ್ಯದಲ್ಲಿಯೂ ಹೇಳಿಕೊಳ್ಳುವಂತಹ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದು 11 ರನ್ ಗಳಿಸಿ ಔಟ್ ಆದರು. ಸಾಲುಸಾಲಾಗಿ ಅರ್ಧಶತಕ ಬಾರಿಸಿ ಮಿಂಚುತ್ತಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ಈ ಪಂದ್ಯದಲ್ಲಿ ಎಡವಿದ್ದು 15 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಇನ್ನುಳಿದಂತೆ ಶಹಬಾಜ್ ಅಹ್ಮದ್ 13, ಡೇನಿಯಲ್ ಕ್ರಿಸ್ಟಿಯನ್ 9, ಹರ್ಷಲ್ ಪಟೇಲ್ ಅಜೇಯ 8 ರನ್ ಕಲೆ ಹಾಕಿದರು.

Story first published: Tuesday, October 12, 2021, 9:46 [IST]
Other articles published on Oct 12, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+