ಎಲಿಮಿನೇಟರ್‌ನಲ್ಲಿ ಆರ್‌ಸಿಬಿ - ಕೆಕೆಆರ್ ಕಾದಾಟ: ಹೆಚ್ಚು ಪಂದ್ಯ ಗೆದ್ದಿರುವ ಬಲಿಷ್ಠ ತಂಡ ಯಾವುದು ಗೊತ್ತಾ?

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತ ಸಂಪೂರ್ಣವಾಗಿ ಮುಗಿದಿದ್ದು, ಕಳೆದ ಭಾನುವಾರದಿಂದ ಪ್ಲೇ ಆಫ್ ಸುತ್ತಿನ ಪಂದ್ಯಗಳು ಆರಂಭವಾಗಿವೆ. ಅಕ್ಟೋಬರ್ 10ರಂದು ದುಬೈ ಕ್ರೀಡಾಂಗಣದಲ್ಲಿ ನಡೆದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕಾದಾಟ ನಡೆಸಿದವು. ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 4 ವಿಕೆಟ್‍ಗಳ ಜಯ ಸಾಧಿಸುವ ಮೂಲಕ ನೇರವಾಗಿ ಫೈನಲ್‌ಗೆ ಪ್ರವೇಶವನ್ನು ಪಡೆದುಕೊಂಡಿತು. ಅತ್ತ ಮಹತ್ವದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಸೋತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಎಲಿಮಿನೇಟರ್ ಸುತ್ತಿನಲ್ಲಿ ಗೆದ್ದು ಬರುವ ತಂಡದ ಜೊತೆ ಕ್ವಾಲಿಫೈಯರ್ 2 ಪಂದ್ಯವನ್ನಾಡಲಿದೆ.
ಇತ್ತ ಅಂಕಪಟ್ಟಿಯಲ್ಲಿ ತೃತೀಯ ಮತ್ತು ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಅಕ್ಟೋಬರ್ 11ರ ಸೋಮವಾರದಂದು ಸಂಜೆ 7.30ಕ್ಕೆ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಸೆಣಸಾಟ ನಡೆಸಲಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಕ್ವಾಲಿಫೈಯರ್ 2 ಪಂದ್ಯಕ್ಕೆ ಅರ್ಹತೆಯನ್ನು ಪಡೆದುಕೊಳ್ಳಲಿದ್ದು, ಅಕ್ಟೋಬರ್ 13ರ ಬುಧವಾರದಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸಾಡಲಿದೆ ಹಾಗೂ ಸೋಲುವ ತಂಡ ಟೂರ್ನಿಯಿಂದ ಹೊರ ಬೀಳಲಿದೆ.
ಹೀಗಾಗಿ ಇಂದು ( ಅಕ್ಟೋಬರ್ 11 ) ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದು ಯಾವ ತಂಡ ಗೆದ್ದು ಮುಂದಿನ ಸುತ್ತಿಗೆ ಅರ್ಹತೆ ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ. ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಮುಖಾಮುಖಿ ಪಂದ್ಯಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ ಎಂಬುದರ ಮಾಹಿತಿ ಮುಂದೆ ಇದೆ ಓದಿ..

ಒಟ್ಟಾರೆ ಮುಖಾಮುಖಿಯಲ್ಲಿ ಬಲಿಷ್ಠ ತಂಡ ಯಾವುದು?
ಐಪಿಎಲ್ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಒಟ್ಟು 29 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪಂದ್ಯಗಳಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 16 ಪಂದ್ಯಗಳನ್ನು ಗೆದ್ದಿದೆ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 13 ಪಂದ್ಯಗಳಲ್ಲಿ ಗೆಲುವು ಪಡೆದುಕೊಂಡಿದೆ. ಈ ಮೂಲಕ ಒಟ್ಟಾರೆ ಐಪಿಎಲ್ ಮುಖಾಮುಖಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ ಸ್ಪಷ್ಟ ಮೇಲುಗೈ ಸಾಧಿಸಿದೆ.

ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಬ್ಬರ
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವಿನ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4 ಪಂದ್ಯಗಳಲ್ಲಿ ಜಯವನ್ನು ಸಾಧಿಸಿದೆ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡ ಕೇವಲ ಒಂದು ಪಂದ್ಯದಲ್ಲಿ ಮಾತ್ರ ಗೆದ್ದಿದೆ. ಹೀಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವಿನ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ದೊಡ್ಡಮಟ್ಟದ ಮೇಲುಗೈ ಸಾಧಿಸಿದೆ.

ಶಾರ್ಜಾ ಕ್ರೀಡಾಂಗಣದಲ್ಲಿ ಮತ್ತು ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ನಡೆದ ಪಂದ್ಯಗಳಲ್ಲಿ ಇತ್ತಂಡಗಳ ಸಮಬಲ
ಶಾರ್ಜಾ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳು 2 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಹಾಗೂ ಈ ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ತಲಾ ಒಂದೊಂದು ಪಂದ್ಯದಲ್ಲಿ ಗೆದ್ದು ಸಮಬಲ ಸಾಧಿಸಿವೆ.
ಇನ್ನು ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳು 2 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಎರಡೂ ತಂಡಗಳು ಸಹ ಸಮಬಲವನ್ನು ಸಾಧಿಸಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications