For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021 ಎಲಿಮಿನೇಟರ್: RCB vs KKR ಟಾಸ್ ವರದಿ, ಆಡುವ ಬಳಗ ಮತ್ತು ಲೈವ್ ಸ್ಕೋರ್

IPL 2021, Eliminator: RCB vs KKR, Toss Report, Live Score and playing XI

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತ ಸಂಪೂರ್ಣವಾಗಿ ಮುಗಿದಿದ್ದು, ಕಳೆದ ಭಾನುವಾರದಿಂದ ಪ್ಲೇ ಆಫ್ ಸುತ್ತಿನ ಪಂದ್ಯಗಳು ಆರಂಭವಾಗಿವೆ. ಅಕ್ಟೋಬರ್ 10ರಂದು ದುಬೈ ಕ್ರೀಡಾಂಗಣದಲ್ಲಿ ನಡೆದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕಾದಾಟ ನಡೆಸಿದವು. ಈ ಪಂದ್ಯದಲ್ಲಿ ಗೆಲುವು ಸಾಧಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನೇರವಾಗಿ ಫೈನಲ್ ಪ್ರವೇಶವನ್ನು ಪಡೆದುಕೊಂಡಿದೆ. ಈ ಪಂದ್ಯದಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ಮುಂದಿನ ಪಂದ್ಯವಾದ ಕ್ವಾಲಿಫೈಯರ್ 2ನಲ್ಲಿ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದು ಬರುವ ತಂಡವನ್ನು ಎದುರಿಸಲಿದೆ.

ಇನ್ನು ಅಂಕ ಪಟ್ಟಿಯಲ್ಲಿ ಕ್ರಮವಾಗಿ ತೃತೀಯ ಮತ್ತು ನಾಲ್ಕನೇ ಸ್ಥಾನಗಳನ್ನು ಪಡೆದುಕೊಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಇಂದು ( ಅಕ್ಟೋಬರ್ 11 ) ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಕ್ಟೋಬರ್ 13ರ ಬುಧವಾರದಂದು ನಡೆಯಲಿರುವ ಕ್ವಾಲಿಫೈಯರ್ 2 ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸಾಟ ನಡೆಸಲಿದೆ ಹಾಗೂ ಈ ಪಂದ್ಯದಲ್ಲಿ ಸೋಲುವ ತಂಡ ಅಧಿಕೃತವಾಗಿ ಟೂರ್ನಿಯಿಂದ ಹೊರ ಬೀಳಲಿದೆ. ಹೀಗೆ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವೆ ನಡೆಯಲಿರುವ ಈ ಪಂದ್ಯ ಮಹತ್ವದ್ದಾಗಿದ್ದು ಯಾವ ತಂಡ ಗೆದ್ದು ಮುಂದಿನ ಹಂತಕ್ಕೆ ಪ್ರವೇಶಿಸಲಿದೆ ಮತ್ತು ಯಾವ ತಂಡ ಸೋಲನುಭವಿಸಿ ಟೂರ್ನಿಯಿಂದ ಹೊರ ಬೀಳಲಿದೆ ಎಂಬ ಕಾತುರತೆ ಹೆಚ್ಚಾಗಿದೆ. ಇನ್ನು ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದ ಕುರಿತಾದ ಮಾಹಿತಿ ಮುಂದೆ ಇದೆ.

ಟಾಸ್ ವರದಿ: ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವಿನ ಎಲಿಮಿನೇಟರ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

1
50866

ಆಡುವ ಬಳಗಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಶ್ರೀಕರ್ ಭಾರತ್ (ವಿಕೆಟ್ ಕೀಪರ್‌), ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿವಿಲಿಯರ್ಸ್, ಡೇನಿಯಲ್ ಕ್ರಿಶ್ಚಿಯನ್, ಶಹಬಾಜ್ ಅಹ್ಮದ್, ಜಾರ್ಜ್ ಗಾರ್ಟನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್

ಕೋಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ಶುಬ್ಮನ್ ಗಿಲ್, ವೆಂಕಟೇಶ್ ಐಯ್ಯರ್, ನಿತೀಶ್ ರಾಣಾ, ರಾಹುಲ್ ತ್ರಿಪಾಠಿ, ಇಯಾನ್ ಮಾರ್ಗನ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಕೀಬ್ ಅಲ್ ಹಸನ್, ಸುನಿಲ್ ನರೈನ್, ಲಾಕಿ ಫರ್ಗುಸನ್, ಶಿವಂ ಮಾವಿ, ವರುಣ್ ಚಕ್ರವರ್ತಿ

ವಿರಾಟ್ ಎದೆಯಲ್ಲಿ ಎರಡು ನೋವು:ಕಣ್ಣೀರು ಹಾಕಿದ ವಿಡಿಯೋ ವೈರಲ್ | Oneindia Kannada

Story first published: Monday, October 11, 2021, 19:07 [IST]
Other articles published on Oct 11, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+