ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ನರೈನ್ ಬೌಲಿಂಗ್‌ಗೆ ತತ್ತರಿಸಿದ ಆರ್‌ಸಿಬಿ ಬ್ಯಾಟ್ಸ್‌ಮನ್ಸ್; ಕೆಕೆಆರ್‌ಗೆ ಗೆಲ್ಲಲು ಸುಲಭ ರನ್‌ಗಳ ಗುರಿ

IPL 2021, Eliminator: Royal Challengers Bangalore have given the target of 139 to Kolkata Knight Riders

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಎಲಿಮಿನೇಟರ್ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವೆ ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.

ಹೀಗೆ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 138 ರನ್ ಕಲೆಹಾಕಿತು. ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ 4 ಓವರ್ ಮಾಡಿದ ಸುನಿಲ್ ನರೈನ್ ಕೇವಲ 21 ರನ್ ನೀಡಿ 4 ವಿಕೆಟ್ ಪಡೆದರು.

ರವಿಶಾಸ್ತ್ರಿ ನಂತರ ಟೀಮ್ ಇಂಡಿಯಾ ಕೋಚ್ ಆಗಲಿದ್ದಾರಾ ಅಫ್ಘಾನಿಸ್ತಾನದ ಈ ಕ್ರಿಕೆಟ್ ಕೋಚ್?ರವಿಶಾಸ್ತ್ರಿ ನಂತರ ಟೀಮ್ ಇಂಡಿಯಾ ಕೋಚ್ ಆಗಲಿದ್ದಾರಾ ಅಫ್ಘಾನಿಸ್ತಾನದ ಈ ಕ್ರಿಕೆಟ್ ಕೋಚ್?

ಮೊದಲು ಬ್ಯಾಟಿಂಗ್ ಆರಂಭಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ದೇವದತ್ ಪಡಿಕ್ಕಲ್ ಮತ್ತು ವಿರಾಟ್ ಕೊಹ್ಲಿ ಅಬ್ಬರದ ಆರಂಭ ನೀಡುವಲ್ಲಿ ಎಡವಿದರು. ದೇವದತ್ ಪಡಿಕ್ಕಲ್ 21 ರನ್ ಗಳಿಸಿ ಔಟ್ ಆದರೆ, ವಿರಾಟ್ ಕೊಹ್ಲಿ 39 ರನ್ ಗಳಿಸಿದರು, ಕಳೆದ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ಮಾಡಿದ್ದ ಶ್ರೀಕರ್ ಭರತ್ ಈ ಪಂದ್ಯದಲ್ಲಿ ಕೇವಲ 9 ರನ್ ಕಲೆಹಾಕಿ ಪೆವಿಲಿಯನ್ ಸೇರಿಕೊಂಡರು. ನಂತರ ಬಂದ ಎಬಿ ಡಿವಿಲಿಯರ್ಸ್ ಈ ಪಂದ್ಯದಲ್ಲಿಯೂ ಹೇಳಿಕೊಳ್ಳುವಂತಹ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದು 11 ರನ್ ಗಳಿಸಿ ಔಟ್ ಆದರು. ಸಾಲುಸಾಲಾಗಿ ಅರ್ಧಶತಕ ಬಾರಿಸಿ ಮಿಂಚುತ್ತಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ಈ ಪಂದ್ಯದಲ್ಲಿ ಎಡವಿದ್ದು 15 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಇನ್ನುಳಿದಂತೆ ಶಹಬಾಜ್ ಅಹ್ಮದ್ 13, ಡೇನಿಯಲ್ ಕ್ರಿಸ್ಟಿಯನ್ 9, ಹರ್ಷಲ್ ಪಟೇಲ್ ಅಜೇಯ 8 ರನ್ ಕಲೆ ಹಾಕಿದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕಂಟಕವಾಗಿ ಕಾಡಿನ ಕೋಲ್ಕತಾ ನೈಟ್ ರೈಡರ್ಸ್ ತಂಡದ ಪ್ರಮುಖ ಬೌಲರ್ ಸುನಿಲ್ ನರೈನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಪೋಟಕ ಆಟಗಾರರಾದ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್, ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಶ್ರೀಕರ್ ಭರತ್ ಅವರ ವಿಕೆಟ್‍ಗಳನ್ನು ಪಡೆದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಲ್ಪ ಮೊತ್ತ ಕಲೆಹಾಕುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿದರು.

'ಕೊಹ್ಲಿ ಬಗ್ಗೆ ಟೀಕಿಸುವ ನಿಮಗೆ ಮುಂದೊಂದು ದಿನ ಆತನ ಬೆಲೆ ತಿಳಿಯುತ್ತದೆ'; ಕಿಡಿಕಾರಿದ ಮಾಜಿ ಕ್ರಿಕೆಟಿಗ'ಕೊಹ್ಲಿ ಬಗ್ಗೆ ಟೀಕಿಸುವ ನಿಮಗೆ ಮುಂದೊಂದು ದಿನ ಆತನ ಬೆಲೆ ತಿಳಿಯುತ್ತದೆ'; ಕಿಡಿಕಾರಿದ ಮಾಜಿ ಕ್ರಿಕೆಟಿಗ

ಹೀಗೆ ಎಲಿಮಿನೇಟರ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 138 ರನ್ ಕಲೆಹಾಕುವ ಮೂಲಕ ಎದುರಾಳಿ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ ಗೆಲ್ಲಲು 139 ರನ್‌ಗಳ ಗುರಿಯನ್ನು ನೀಡಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಕ್ವಾಲಿಫೈಯರ್ 2 ಪಂದ್ಯಕ್ಕೆ ಪ್ರವೇಶಿಸಲಿದ್ದು, ಸೋತ ತಂಡ ಟೂರ್ನಿಯಿಂದ ಹೊರ ಬೀಳಲಿದೆ.

ಆಡುವ ಬಳಗಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಶ್ರೀಕರ್ ಭಾರತ್ (ವಿಕೆಟ್ ಕೀಪರ್‌), ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿವಿಲಿಯರ್ಸ್, ಡೇನಿಯಲ್ ಕ್ರಿಶ್ಚಿಯನ್, ಶಹಬಾಜ್ ಅಹ್ಮದ್, ಜಾರ್ಜ್ ಗಾರ್ಟನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್

Dan Christian ಅವರ ಪತ್ನಿಗೆ ಹಿಂಸೆ ಕೊಡುತ್ತಿರುವ RCB ಅಭಿಮಾನಿಗಳು | Oneindia Kannada

ಕೋಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ಶುಬ್ಮನ್ ಗಿಲ್, ವೆಂಕಟೇಶ್ ಐಯ್ಯರ್, ನಿತೀಶ್ ರಾಣಾ, ರಾಹುಲ್ ತ್ರಿಪಾಠಿ, ಇಯಾನ್ ಮಾರ್ಗನ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಕೀಬ್ ಅಲ್ ಹಸನ್, ಸುನಿಲ್ ನರೈನ್, ಲಾಕಿ ಫರ್ಗುಸನ್, ಶಿವಂ ಮಾವಿ, ವರುಣ್ ಚಕ್ರವರ್ತಿ

Story first published: Monday, October 11, 2021, 21:24 [IST]
Other articles published on Oct 11, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X