ಐಪಿಎಲ್: ಮುಂಬೈ ವಿರುದ್ಧ ಗೆದ್ದು ಬೀಗಿದ ಕೊಲ್ಕತ್ತಾಗೆ 24 ಲಕ್ಷ ದಂಡ

ಭಾರತ ನೆಲದಲ್ಲಿ ಏಪ್ರಿಲ್ ತಿಂಗಳಿನಲ್ಲಿ ಆರಂಭವಾದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲಾರ್ಧದಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನವನ್ನೇನೂ ನೀಡದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 7 ಪಂದ್ಯಗಳನ್ನಾಡಿ ಕೇವಲ 2 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿ, 5 ಪಂದ್ಯಗಳಲ್ಲಿ ಸೋಲುವುದರ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನ ಪಡೆದುಕೊಂಡಿತ್ತು.

ಹೀಗೆ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲಾರ್ಧದಲ್ಲಿ ಕಳಪೆ ಪ್ರದರ್ಶನ ನೀಡಿದ ಕೋಲ್ಕತ್ತ ನೈಟ್ ರೈಡರ್ಸ್ ತಂಡ ಇದೀಗ ಯುಎಇಯಲ್ಲಿ ಮುಂದುವರಿಯುತ್ತಿರುವ ಎರಡನೇ ಭಾಗದ ತನ್ನ ಮೊದಲೆರಡು ಪಂದ್ಯಗಳಲ್ಲಿ ಸತತವಾಗಿ ಗೆಲುವು ಸಾಧಿಸುವುದರ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿದೆ. ಹೌದು, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಯುಎಇ ಚರಣದ ತನ್ನ ಮೊದಲನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಭರ್ಜರಿ ಜಯ ಸಾಧಿಸಿತ್ತು, ನಂತರ ಸೆಪ್ಟೆಂಬರ್ 23ರಂದು ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿಯೂ ಅಮೋಘ ಗೆಲುವನ್ನು ಸಾಧಿಸುವುದರ ಮೂಲಕ ಕೊಲ್ಕತ್ತಾ ತನ್ನ ಎರಡನೇ ಗೆಲುವನ್ನು ಪಡೆದುಕೊಂಡಿದೆ.

ಕೊಹ್ಲಿ, ಗೇಲ್, ಎಬಿಡಿಗಿಂತ ಈತ ಐಪಿಎಲ್‌ನಲ್ಲಿ ಡೇಂಜರಸ್ ಆಟಗಾರ ಎಂದ ಗೌತಮ್ ಗಂಭೀರ್ಕೊಹ್ಲಿ, ಗೇಲ್, ಎಬಿಡಿಗಿಂತ ಈತ ಐಪಿಎಲ್‌ನಲ್ಲಿ ಡೇಂಜರಸ್ ಆಟಗಾರ ಎಂದ ಗೌತಮ್ ಗಂಭೀರ್

ಸೆಪ್ಟೆಂಬರ್ 23ರ ಗುರುವಾರದಂದು ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ತಂಡ 20 ಓವರ್‌ಗಳಲ್ಲಿ 155 ರನ್ ಕಲೆಹಾಕಿ ಕೋಲ್ಕತ್ತ ನೈಟ್ ರೈಡರ್ಸ್ ತಂಡಕ್ಕೆ ಗೆಲ್ಲಲು 156 ರನ್‌ಗಳ ಗುರಿಯನ್ನು ನೀಡಿತು.

ಮುಂಬೈ ಇಂಡಿಯನ್ಸ್ ತಂಡ ನೀಡಿದ ಈ ಗುರಿಯನ್ನು ಲೀಲಾಜಾಲವಾಗಿ ಬೆನ್ನತ್ತಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 15.1 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 159 ರನ್ ಬಾರಿಸುವುದರ ಮೂಲಕ 7 ವಿಕೆಟ್‍ಗಳ ಭರ್ಜರಿ ಜಯವನ್ನು ಸಾಧಿಸಿತು. ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಬೌಲರ್ ಸುನಿಲ್ ನರೈನ್ ಈ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಹೀಗೆ ಮುಂದುವರಿದಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದಲ್ಲಿ ಸತತವಾಗಿ 2 ಗೆಲುವುಗಳನ್ನು ಸಾಧಿಸಿ ಖುಷಿಯಲ್ಲಿದ್ದ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ ಮುಂಬೈ ವಿರುದ್ಧದ ಪಂದ್ಯ ಮುಗಿದ ನಂತರ 24 ಲಕ್ಷ ದಂಡವನ್ನು ಬಿಸಿಸಿಐ ವಿಧಿಸಿದೆ. ಹೌದು ನಿಯಮದ ಪ್ರಕಾರ ನಿಗದಿತ ಸಮಯಕ್ಕಿಂತ ಹೆಚ್ಚು ಅವಧಿಯನ್ನು ತೆಗೆದುಕೊಂಡು ನಿಧಾನಗತಿಯ ಬೌಲಿಂಗ್ ಮಾಡಿದರೆ ತಂಡದ ನಾಯಕನಿಗೆ 12 ಲಕ್ಷ ದಂಡವನ್ನು ವಿಧಿಸಬಹುದು. ಹಾಗೂ ಇದೇ ರೀತಿ ಒಂದಕ್ಕಿಂತ ಹೆಚ್ಚು ಪಂದ್ಯಗಳಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದರೆ 24 ಲಕ್ಷ ದಂಡವನ್ನು ನಾಯಕ ಮತ್ತು ಆಟಗಾರರಿಗೆ ವಿಧಿಸಲಾಗುತ್ತದೆ. ಇನ್ನು ಈ ಹಿಂದೆ ನಡೆದ ಪಂದ್ಯವೊಂದರಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ್ದ ಕಾರಣ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಇಯಾನ್ ಮೊರ್ಗನ್ ಅವರಿಗೆ 12 ಲಕ್ಷ ದಂಡವನ್ನು ವಿಧಿಸಲಾಗಿತ್ತು. ಹೀಗಾಗಿ ನಿನ್ನೆ ( ಸೆಪ್ಟೆಂಬರ್ 23 ) ಮುಂಬೈ ವಿರುದ್ಧ ನಡೆದ ಪಂದ್ಯದಲ್ಲಿಯೂ ಕೊಲ್ಕತಾ ನೈಟ್ ರೈಡರ್ಸ್ ತಂಡ ನಿಧಾನಗತಿಯ ಬೌಲಿಂಗ್ ಮಾಡಿರುವ ಕಾರಣದಿಂದಾಗಿ ನಾಯಕ ಇಯಾನ್ ಮೊರ್ಗನ್ ಮತ್ತು ತಂಡದ ಆಟಗಾರರಿಗೂ ಸೇರಿಸಿ ಒಟ್ಟು 24 ಲಕ್ಷ ರೂಪಾಯಿ ದಂಡವನ್ನು ವಿಧಿಸಲಾಗಿದೆ.

ಐಪಿಎಲ್: ಮಹೇಂದ್ರ ಸಿಂಗ್ ಧೋನಿ ದಾಖಲೆ ಮುರಿದ ದಿನೇಶ್ ಕಾರ್ತಿಕ್ಐಪಿಎಲ್: ಮಹೇಂದ್ರ ಸಿಂಗ್ ಧೋನಿ ದಾಖಲೆ ಮುರಿದ ದಿನೇಶ್ ಕಾರ್ತಿಕ್

ನಾಯಕತ್ವದ ಬಗ್ಗೆ ಮೌನ ಮುರಿದ Shreyas Iyer | Oneindia Kannada

ಇನ್ನು ಇತ್ತೀಚೆಗಷ್ಟೇ ನಡೆದ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದಲ್ಲಿಯೂ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ತಾನ್ ರಾಯಲ್ಸ್ ತಂಡ ನಿಧಾನಗತಿಯ ಬೌಲಿಂಗ್ ಮಾಡಿತ್ತು, ಹೀಗಾಗಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅವರಿಗೆ 12 ಲಕ್ಷ ದಂಡವನ್ನು ಕೂಡ ವಿಧಿಸಲಾಗಿತ್ತು.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 22 - October 28 2021, 07:30 PM
ಆಸ್ಟ್ರೇಲಿಯಾ
ಶ್ರೀಲಂಕಾ
Predict Now

For Quick Alerts
ALLOW NOTIFICATIONS
For Daily Alerts
Story first published: Friday, September 24, 2021, 11:26 [IST]
Other articles published on Sep 24, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X