ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

'ಈತ ಮಾತನಾಡುವುದನ್ನು ಬಿಟ್ಟು ಬೇರೇನೂ ಮಾಡಿಲ್ಲ'; ಐಪಿಎಲ್ ಕಳಪೆ ನಾಯಕನ ವಿರುದ್ಧ ವ್ಯಂಗ್ಯವಾಡಿದ ಸೆಹ್ವಾಗ್

IPL 2021: Eoin Morgan hasnt done anything except talking says Virender Sehwag

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಕ್ತಾಯದ ಹಂತಕ್ಕೆ ಬಂದು ತಲುಪಿದ್ದು ಕ್ವಾಲಿಫೈಯರ್ 2 ಮತ್ತು ಫೈನಲ್ ಪಂದ್ಯಗಳು ಮಾತ್ರ ಬಾಕಿ ಉಳಿದುಕೊಂಡಿವೆ ಹಾಗೂ ಪ್ಲೇ ಆಫ್ ಹಂತದ ಕ್ವಾಲಿಫೈಯರ್ 1 ಮತ್ತು ಎಲಿಮಿನೇಟರ್ ಪಂದ್ಯಗಳು ಈಗಾಗಲೇ ಮುಕ್ತಾಯವಾಗಿವೆ. ಕ್ವಾಲಿಫೈಯರ್ 1 ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋಲುವುದರ ಮೂಲಕ ಕ್ವಾಲಿಫೈಯರ್ 2 ಪಂದ್ಯವನ್ನಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಇತ್ತ ನಿನ್ನೆ ( ಅಕ್ಟೋಬರ್ 11 ) ನಡೆದ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ತಂಡ ಜಯಗಳಿಸಿದ್ದು ಕ್ವಾಲಿಫೈಯರ್ 2 ಪಂದ್ಯಕ್ಕೆ ಅರ್ಹತೆಯನ್ನು ಪಡೆದುಕೊಂಡಿದೆ. ಈ ಮಹತ್ವದ ಪಂದ್ಯದಲ್ಲಿ ಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದೆ.

'ಕೊಹ್ಲಿ ಬಗ್ಗೆ ಟೀಕಿಸುವ ನಿಮಗೆ ಮುಂದೊಂದು ದಿನ ಆತನ ಬೆಲೆ ತಿಳಿಯುತ್ತದೆ'; ಕಿಡಿಕಾರಿದ ಮಾಜಿ ಕ್ರಿಕೆಟಿಗ'ಕೊಹ್ಲಿ ಬಗ್ಗೆ ಟೀಕಿಸುವ ನಿಮಗೆ ಮುಂದೊಂದು ದಿನ ಆತನ ಬೆಲೆ ತಿಳಿಯುತ್ತದೆ'; ಕಿಡಿಕಾರಿದ ಮಾಜಿ ಕ್ರಿಕೆಟಿಗ

ಇನ್ನು ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾದಾಗ ಮೊದಲಾರ್ಧದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಹೇಳಿಕೊಳ್ಳುವಂತಹ ಉತ್ತಮ ಪ್ರದರ್ಶನವನ್ನೇನೂ ನೀಡಿರಲಿಲ್ಲ. ಈ ತಂಡ ಮುಂಬರುವ ದಿನಗಳಲ್ಲಿ ಪ್ಲೇ ಆಫ್ ಸುತ್ತಿಗೆ ಆರ್ಹತೆಯನ್ನು ಪಡೆದುಕೊಳ್ಳಲಿದೆ ಎಂದು ಸಹ ಯಾರೂ ಊಹಿಸಿರಲಿಲ್ಲ. ಆದರೆ ಯುಎಇಯಲ್ಲಿ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ದ್ವಿತೀಯಾರ್ಧ ಆರಂಭವಾದ ತಂಡದ ಆಟಗಾರರ ಅತ್ಯುತ್ತಮ ಪ್ರದರ್ಶನದಿಂದ ಪುಟಿದೆದ್ದ ಕೋಲ್ಕತಾ ನೈಟ್ ರೈಡರ್ಸ್ ತಂಡ ಉತ್ತಮ ನೆಟ್ ರನ್ ರೇಟ್ ಗಳಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡವನ್ನು ಸರಿಗಟ್ಟಿ ಪ್ಲೇ ಆಫ್ ಸುತ್ತಿಗೆ ಅರ್ಹತೆಯನ್ನು ಪಡೆದುಕೊಂಡಿತು. ಹಾಗೂ ಅಂಕಪಟ್ಟಿಯಲ್ಲಿ ತನಗಿಂತ ಅಗ್ರಸ್ಥಾನದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎಲಿಮಿನೇಟರ್ ಪಂದ್ಯದಲ್ಲಿ ಸೋಲಿಸಿ ಇದೀಗ ಕ್ವಾಲಿಫೈಯರ್ 2 ಪಂದ್ಯಕ್ಕೂ ಕೊಲ್ಕತಾ ನೈಟ್ ರೈಡರ್ಸ್ ಲಗ್ಗೆಯಿಟ್ಟಿದೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅಬ್ಬರಿಸಿದ ಧೋನಿ ಹೊಗಳಿ ಮಾಡಿದ್ದ ಟ್ವೀಟ್‌ನ್ನು ಡಿಲೀಟ್ ಮಾಡಿದ್ದೇಕೆ ಕೊಹ್ಲಿ?ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅಬ್ಬರಿಸಿದ ಧೋನಿ ಹೊಗಳಿ ಮಾಡಿದ್ದ ಟ್ವೀಟ್‌ನ್ನು ಡಿಲೀಟ್ ಮಾಡಿದ್ದೇಕೆ ಕೊಹ್ಲಿ?

ಹೀಗೆ ಉತ್ತಮ ಪ್ರದರ್ಶನ ನೀಡುವುದರ ಮೂಲಕ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವೇನೋ ಕ್ವಾಲಿಫೈಯರ್ 2 ಹಂತದವರೆಗೂ ಬಂದು ತಲುಪಿದೆ. ಆದರೆ ತಂಡದ ನಾಯಕ ಇಯಾನ್ ಮಾರ್ಗನ್ ಮಾತ್ರ ಕೋಲ್ಕತಾ ನೈಟ್ ರೈಡರ್ಸ್ ತಂಡದ ಈ ಯಶಸ್ಸಿನಲ್ಲಿ ಹೇಳಿಕೊಳ್ಳುವಂತಹ ದೊಡ್ಡ ಪಾತ್ರವನ್ನೇನೂ ನಿರ್ವಹಿಸಿಲ್ಲ ಎಂಬುದು ಪ್ರತಿಯೊಬ್ಬರಿಗೂ ತಿಳಿದಿರುವ ವಿಷಯವೇ. ಈ ಕುರಿತಾಗಿಯೇ ಇದೀಗ ಭಾರತದ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಪ್ರತಿಕ್ರಿಯಿಸಿದ್ದು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಇಯಾನ್ ಮಾರ್ಗನ್ ನಾಯಕತ್ವದ ವಿರುದ್ಧ ಬೇಸರ ವ್ಯಕ್ತಪಡಿಸಿ ಈ ಕೆಳಕಂಡಂತೆ ಕಾಲೆಳೆದಿದ್ದಾರೆ.

ಇಯಾನ್ ಮಾರ್ಗನ್ ಮಾತನಾಡುವುದನ್ನು ಬಿಟ್ಟು ಬೇರೇನೂ ಮಾಡಿಲ್ಲ

ಇಯಾನ್ ಮಾರ್ಗನ್ ಮಾತನಾಡುವುದನ್ನು ಬಿಟ್ಟು ಬೇರೇನೂ ಮಾಡಿಲ್ಲ

'ಇಯಾನ್ ಮಾರ್ಗನ್ ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಸಾಲುಸಾಲು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಆದರೆ ಆತ ಮಾತನಾಡುವುದನ್ನು ಬಿಟ್ಟು ತನ್ನ ತಂಡಕ್ಕೆ ರನ್ ಕೊಡುಗೆಯನ್ನು ನೀಡುವ ಯತ್ನವನ್ನೇ ಮಾಡಿಲ್ಲ' ಎಂದು ಇಯಾನ್ ಮಾರ್ಗನ್ ವಿರುದ್ಧ ವಿರೇಂದ್ರ ಸೆಹ್ವಾಗ್ ಬೇಸರ ವ್ಯಕ್ತಪಡಿಸಿದ್ದಾರೆ.

ನಾಯಕನಾದವನು ತನ್ನ ತಂಡದ ಪರ ರನ್ ಗಳಿಸಬೇಕು

ನಾಯಕನಾದವನು ತನ್ನ ತಂಡದ ಪರ ರನ್ ಗಳಿಸಬೇಕು

'ಇಯಾನ್ ಮಾರ್ಗನ್ ನಾಯಕನಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ 20-25 ರನ್‌ಗಳನ್ನು ಸತತವಾಗಿ ಬಾರಿಸುವಲ್ಲಿಯೂ ವಿಫಲರಾಗಿದ್ದಾರೆ. ತಂಡದ ನಾಯಕನಾದವನು ತನ್ನ ತಂಡದ ಪರ ರನ್ ಗಳಿಸಬೇಕಾಗಿರುವುದು ಆತನ ಕರ್ತವ್ಯ. ಆದರೆ ಇಯಾನ್ ಮಾರ್ಗನ್ ಕಡೆಯಿಂದ ಆ ರೀತಿಯ ಯಾವುದೇ ರನ್ ತಂಡಕ್ಕೆ ಸಿಕ್ಕಿಲ್ಲ. ಹೀಗಾಗಿ ಮುಂದಿನ ಐಪಿಎಲ್ ಮೆಗಾ ಹರಾಜಿನಲ್ಲಿ ಇಯಾನ್ ಮಾರ್ಗನ್ ಅವರನ್ನು ಕೋಲ್ಕತಾ ನೈಟ್ ರೈಡರ್ಸ್ ತಂಡ ಉಳಿಸಿಕೊಳ್ಳುವುದಿಲ್ಲ' ಎಂದು ವಿರೇಂದ್ರ ಸೆಹ್ವಾಗ್ ವ್ಯಂಗ್ಯವಾಡಿದ್ದಾರೆ.

ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಮಂಕಾದ ಇಯಾನ್ ಗಳಿಸಿರುವ ರನ್ ವಿವರ

ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಮಂಕಾದ ಇಯಾನ್ ಗಳಿಸಿರುವ ರನ್ ವಿವರ

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ನಾಯಕ ಇಯಾನ್ ಮಾರ್ಗನ್ ಒಟ್ಟು 15 ಪಂದ್ಯಗಳನ್ನಾಡಿದ್ದಾರೆ. ಈ ಪಂದ್ಯಗಳ ಪೈಕಿ ಇಯಾನ್ ಮಾರ್ಗನ್ ಗಳಿಸಿರುವುದು ಕೇವಲ 129 ರನ್ ಮಾತ್ರ. ಹಾಗೂ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಇಯಾನ್ ಮಾರ್ಗನ್ ಕಲೆಹಾಕಿರುವ ಗರಿಷ್ಠ ರನ್ ಎಂದರೆ 47*. ಇನ್ನು ಟೂರ್ನಿಯಲ್ಲಿ ಇಯಾನ್ ಮಾರ್ಗನ್ ಒಂದೇ ಒಂದು ಅರ್ಧಶತಕವನ್ನು ಬಾರಿಸುವಲ್ಲಿ ಕೂಡ ಯಶಸ್ವಿಯಾಗಿಲ್ಲ.

Story first published: Tuesday, October 12, 2021, 13:55 [IST]
Other articles published on Oct 12, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X