ಸಿಎಸ್‌ಕೆ ಸೇರಲು ದುಬೈಗೆ ಬಂದ ಡು ಪ್ಲೆಸಿಸ್, ಡ್ವೇನ್ ಬ್ರಾವೋ, ತಾಹಿರ್

ಅಬುಧಾಬಿ: ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟ್ಸ್‌ಮನ್ ಫಾಫ್ ಡು ಪ್ಲೆಸಿಸ್, ಆಲ್ ರೌಂಡರ್ ಡ್ವೇನ್ ಬ್ರಾವೋ, ಸ್ಪಿನ್ನರ್ ಇಮ್ರಾನ್ ತಾಹಿರ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ದ್ವಿತೀಯ ಹಂತದ ಟೂರ್ನಿಗಾಗಿ ಸೆಪ್ಟೆಂಬರ್ 16ರ ಗುರುವಾರ ದುಬೈಗೆ ಬಂದಿಳಿದಿದ್ದಾರೆ. ಮೂವರೂ ಶೀಘ್ರ ಸಿಎಸ್‌ಕೆ ಬಯೋ ಬಬಲ್ ಸೇರಿಕೊಳ್ಳಲಿದ್ದಾರೆ. ಸೆಪ್ಟೆಂಬರ್ 19ರಿಂದ ಅಕ್ಟೋಬರ್ 15ರ ವರೆಗೆ ಐಪಿಎಲ್ ದ್ವಿತೀಯ ಹಂತದ ಪಂದ್ಯಗಳು ನಡೆಯಲಿವೆ.
ಫಾಫ್ ಡು ಪ್ಲೆಸಿಸ್, ಡ್ವೇನ್ ಬ್ರಾವೋ ಮತ್ತು ಇಮ್ರಾನ್ ತಾಹಿರ್ ಮೂವರೂ ಇತ್ತೀಚೆಗಷ್ಟೇ ಮುಕ್ತಾಯಗೊಂಡ ಕೆರಿಬಿಯನ್ ಪ್ರೀಮಿಯರ್ ಲೀಗ್ (ಸಿಪಿಎಲ್)ನಲ್ಲಿ ಪಾಲ್ಗೊಂಡಿದ್ದರು. ಹೀಗಾಗಿ ಮೂವರೂ ಎರಡು ದಿನಗಳ ಐಸೊಲೇಶನ್ ಬಳಿಕ ಸಿಎಸ್‌ಕೆ ಬಯೋ ಬಬಲ್ ಸೇರಿಕೊಳ್ಳಲಿದ್ದಾರೆ. ಬಯೋಬಬಲ್‌ನಿಂದ ಬಯೋ ಬಬಲ್‌ಗೆ ವರ್ಗಾವಣೆ ಆಗುತ್ತಿರುವುದರಿಂದ ಈ ಆಟಗಾರರಿಗೆ ಕಡ್ಡಾಯ ಕ್ವಾರಂಟೈನ್ ಇರುವುದಿಲ್ಲ.
ಥ್ರೀX ಎಕ್ಸೈಟ್‌ಮೆಂಟ್, ಫಾಫುಲಸ್ ಚಾಂಪಿಯನ್ ಎಕ್ಸ್‌ಪ್ರೆಸ್
ಟ್ವೀಟ್ ಮಾಡಿರುವ ಸಿಎಸ್‌ಕೆ ಫ್ರಾಂಚೈಸಿ, 'ಥ್ರೀX ಎಕ್ಸೈಟ್‌ಮೆಂಟ್. ಫಾಫುಲಸ್ ಚಾಂಪಿಯನ್ ಎಕ್ಸ್‌ಪ್ರೆಸ್' ಎಂದು ಬರೆದುಕೊಂಡಿದೆ. ಟ್ವೀಟ್‌ನ ಜೊತೆಗೆ ಫಾಫ್ ಡು ಪ್ಲೆಸಿಸ್, ಡ್ವೇನ್ ಬ್ರಾವೋ ಮತ್ತು ಇಮ್ರಾನ್ ತಾಹಿರ್ ಮೂವರೂ ಆಟಗಾರರು ಹೋಟೆಲ್‌ಗೆ ಪ್ರವೇಶಿಸುತ್ತಿರುವ ಚಿತ್ರವನ್ನು ಹಾಕಿಕೊಂಡಿದೆ. ಭಾರತದಲ್ಲಿ ಕೋವಿಡ್-19 ಕಾರಣದಿಂದ ಅರ್ಧಕ್ಕೆ ನಿಲ್ಲಿಸಲ್ಪಟ್ಟ ಐಪಿಎಲ್ 2021ರ ಆವೃತ್ತಿಯ ಇನ್ನುಳಿದ ಪಂದ್ಯಗಳು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನಲ್ಲಿ ನಡೆಯಲಿದೆ. ಆರಂಭಿಕ ಹಂತದಲ್ಲಿ 29 ಪಂದ್ಯಗಳು ನಡೆದಿದ್ದವು. ದ್ವಿತೀಯ ಹಂತದಲ್ಲಿ 31 ಪಂದ್ಯಗಳು ನಡೆಯಲಿವೆ. ಸೆಪ್ಟೆಂಬರ್ 19ರಂದು ಮೊದಲನೇ ಪಂದ್ಯದಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಕಾದಾಡಲಿವೆ.
ಯಶಸ್ವಿ ತಂಡಗಳಲ್ಲಿ ಸಿಎಸ್‌ಕೆಗೆ ದ್ವಿತೀಯ ಸ್ಥಾನ
ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಐಪಿಎಲ್ ಇತಿಹಾಸದಲ್ಲೇ ಅತೀ ಯಶಸ್ವಿ ತಂಡವೆಂಬ ಹೆಗ್ಗಳಿಗೆ ಪಾತ್ರವಾಗಿದೆ. ಒಟ್ಟು ಐದು ಬಾರಿ ಮುಂಬೈ ಟ್ರೋಫಿ ಗೆದ್ದಿದೆ. ಮುಂಬೈ ಬಿಟ್ಟರೆ ಚೆನ್ನೈ ಸೂಪರ್ ಕಿಂಗ್ಸ್ ಮೂರು ಬಾರಿ ಚಾಂಪಿಯನ್ ಪಟ್ಟ ಗೆದ್ದಿದೆ. ಐಪಿಎಲ್ ದ್ವಿತೀಯ ಹಂತದಲ್ಲಿ ಆರಂಭಿಕ ಪಂದ್ಯದಲ್ಲೇ ಮುಂಬೈ ಮತ್ತು ಚೆನ್ನೈ ತಂಡಗಳು ಕಾದಾಡಲಿವೆ. ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಈಗ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ದ್ವಿತೀಯ ಸ್ಥಾನದಲ್ಲಿ ಸಿಎಸ್‌ಕೆ, ಮೂರನೇ ಸ್ಥಾನದಲ್ಲಿ ಆರ್‌ಸಿಬಿ ತಂಡಗಳಿವೆ.
27 ದಿನಗಳ ಕಾಲ ದ್ವಿತೀಯ ಹಂತದ ಐಪಿಎಲ್ ಪಂದ್ಯಗಳು
ಐಪಿಎಲ್ ಆರಂಭಿಕ ಹಂತದಲ್ಲಿ ಭಾರತದಲ್ಲಿ ಒಟ್ಟು 29 ಪಂದ್ಯಗಳು ನಡೆದಿದ್ದವು. ಇನ್ನು 31 ಪಂದ್ಯಗಳು ಯುಎಇಯಲ್ಲಿ ನಡೆಯಲಿದೆ. ಐಪಿಎಲ್ ಫ್ರಾಂಚೈಸಿಗಳಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದರಿಂದ ಅನಿವಾರ್ಯವಾಗಿ ಟೂರ್ನಿ ಅರ್ಧಕ್ಕೆ ನಿಲ್ಲಿಸಲ್ಪಟ್ಟು ಮುಂದೂಡಲಾಗಿತ್ತು. ನಡೆಯಲಿರುವ 31 ಪಂದ್ಯಗಳಲ್ಲಿ 13 ಪಂದ್ಯಗಳು ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿವೆ. ಮೊದಲ ಕ್ವಾಲಿಫೈಯರ್ ಮತ್ತು ಫೈನಲ್ ಪಂದ್ಯಗಳು ಇದೇ ಸ್ಟೇಡಿಯಂನಲ್ಲಿ ನಡೆಯಲಿವೆ. ಶಾರ್ಜಾ ಸ್ಟೇಡಿಯಂನಲ್ಲಿ 10 ಪಂದ್ಯಗಳು ನಡೆಯಲಿವೆ. ಇದರಲ್ಲಿ ದ್ವಿತೀಯ ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯ ಸೇರಿದೆ. ಐಪಿಎಲ್ ದ್ವಿತೀಯ ಹಂತದ ಐಪಿಎಲ್ ಪಂದ್ಯಗಳ ವೇಳೆ ಒಟ್ಟು 7 ಡಬಲ್ ಹೆಡ್ಡರ್ ಪಂದ್ಯಗಳು ನಡೆಯಲಿವೆ. ಸುಮಾರು 27 ದಿನಗಳ ಕಾಲ ದ್ವಿತೀಯ ಹಂತದ ಐಪಿಎಲ್ ನಡೆಯಲಿದೆ. ಅಂದ್ಹಾಗೆ ಐಪಿಎಲ್ ದ್ವಿತೀಯ ಹಂತದ ಉದ್ಘಾಟನಾ ಪಂದ್ಯದಲ್ಲಿ ಅಂದರೆ ಸೆಪ್ಟೆಂಬರ್ 19ಕ್ಕೆ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಮತ್ತು ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಸೆಣಸಾಡಲಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications