ಮಂಕಾದ ಹಾಲಿ ಚಾಂಪಿಯನ್ಸ್ ; ರನ್ ಗಳಿಸುವಲ್ಲಿ ಮುಂಬೈ ಪದೇ ಪದೇ ಫ್ಲಾಪ್ ಆಗ್ತಿರೋದೇಕೆ?

ಐದು ಬಾರಿ ಐಪಿಎಲ್ ಟ್ರೋಫಿಯನ್ನು ಗೆದ್ದು ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ತಂಡ ಎನಿಸಿಕೊಂಡಿರುವ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆರಂಭದಲ್ಲಿಯೇ ಮಂಕಾಗಿದ್ದಾರೆ. ಏಪ್ರಿಲ್ 9ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ನಡೆದ ಉದ್ಘಾಟನಾ ಪಂದ್ಯದಲ್ಲಿ ಸೋಲುವುದರ ಮೂಲಕ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಮುಂಬೈ ನೀರಸ ಆರಂಭ ಪಡೆದುಕೊಂಡಿತು.
ತದನಂತರ ಟೂರ್ನಿಯಲ್ಲಿ ಇದುವರೆಗೂ ಒಟ್ಟು 5 ಪಂದ್ಯಗಳನ್ನಾಡಿರುವ ಮುಂಬೈ ಇಂಡಿಯನ್ಸ್ 3 ಪಂದ್ಯಗಳಲ್ಲಿ ಸೋತಿದ್ದು ಗೆಲುವು ಸಾಧಿಸಿರುವುದು ಕೇವಲ 2 ಪಂದ್ಯಗಳಲ್ಲಿ. ಕಳೆದ 2 ಪಂದ್ಯಗಳನ್ನು ಸತತವಾಗಿ ಸೋತಿರುವ ಮುಂಬೈ ಇಂಡಿಯನ್ಸ್ ತಂಡದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಇದೀಗ ಚರ್ಚೆಗಳು ಆರಂಭವಾಗಿದ್ದು, ಮುಂಬೈ ಇಂಡಿಯನ್ಸ್ ಮಂಕಾಗಿದೆ ಎನ್ನಲಾಗುತ್ತಿದೆ. ಟೂರ್ನಿಯಲ್ಲಿ ಇದುವರೆಗೂ 5 ಪಂದ್ಯಗಳನ್ನು ಆಡಿ ಮುಗಿಸಿದ್ದರೂ ಸಹ ಮುಂಬೈ ಇಂಡಿಯನ್ಸ್ ತಂಡ ಮಾತ್ರ 160 ರನ್‌ಗಳ ಗಡಿ ದಾಟುವಷ್ಟು ಮೊತ್ತವನ್ನು ಯಾವುದೇ ಪಂದ್ಯದಲ್ಲಿ ಕಲೆ ಹಾಕಿಯೇ ಇಲ್ಲ.
ಮುಂಬೈ ಇಂಡಿಯನ್ಸ್ ತಂಡ ಈ ಬಾರಿ ಟೂರ್ನಿಯಲ್ಲಿ ಆಡಿರುವ 5 ಪಂದ್ಯಗಳಲ್ಲಿ ಗಳಿಸಿರುವ ಮೊತ್ತ ಹೀಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ 159, ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 152, ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 150, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 137 ಮತ್ತು ಪಂಜಾಬ್ ಕಿಂಗ್ಸ್ ವಿರುದ್ಧ 131. ಮುಂಬೈ ಇಂಡಿಯನ್ಸ್ ತಂಡ ಗಳಿಸಿರುವ ಈ ಮೊತ್ತಗಳ ಕುರಿತು ಈಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದ್ದು ಮುಂಬೈ ಇಂಡಿಯನ್ಸ್ ಸ್ಪರ್ಧಾತ್ಮಕ ಮೊತ್ತವನ್ನು ಕಲೆಹಾಕುವಲ್ಲಿ ವಿಫಲವಾಗುತ್ತಿರುವುದಕ್ಕೆ 2 ಕಾರಣಗಳು ಅಭಿಮಾನಿ ಬಳಗದಿಂದ ಕೇಳಿಬರುತ್ತಿವೆ.
ಮುಂಬೈ ಇಂಡಿಯನ್ಸ್ ತಂಡ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆಡಿರುವ ಎಲ್ಲ 5 ಪಂದ್ಯಗಳು ಸಹ ನಡೆದಿರುವುದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ. ಹೀಗಾಗಿ ಚೆನ್ನೈ ಪಿಚ್ ಬೌಲಿಂಗ್‌ಗೆ ಹೆಚ್ಚು ಸಹಕಾರಿಯಾಗಿರುವುದರಿಂದ ಅಲ್ಲಿ ಹೆಚ್ಚಿನ ಮೊತ್ತ ಗಳಿಸಲು ಮುಂಬೈ ಇಂಡಿಯನ್ಸ್ ತಂಡಕ್ಕೆ ಕಷ್ಟವಾಗುತ್ತಿದೆ ಹೊರತು ಮುಂಬೈ ಇಂಡಿಯನ್ಸ್ ತಂಡದ ಆಟಗಾರರ ತಪ್ಪಲ್ಲ ಎಂದು ಕೆಲವರು ಹೇಳುತ್ತಿದ್ದರೆ, ಇನ್ನೂ ಕೆಲವರು ಮುಂಬೈ ಇಂಡಿಯನ್ಸ್ ತಂಡದ ಮಧ್ಯಮ ಕ್ರಮಾಂಕದ ಆಟಗಾರರ ವೈಫಲ್ಯದಿಂದಲೇ ಮುಂಬೈ ಇಂಡಿಯನ್ಸ್ ತಂಡ ಸ್ಪರ್ಧಾತ್ಮಕ ಮೊತ್ತವನ್ನು ಕಲೆಹಾಕುವಲ್ಲಿ ಎಡವುತ್ತಿದೆ ಎನ್ನುತ್ತಿದ್ದಾರೆ.
ಸತತ 2 ಪಂದ್ಯಗಳನ್ನು ಸೋತಿರುವ ಮುಂಬೈ ಇಂಡಿಯನ್ಸ್ ತಂಡ ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 29ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಲಿದ್ದು, ಕ್ರೀಡಾಂಗಣವು ಸಹ ಬದಲಾಗುವುದರಿಂದ ಯಾವ ರೀತಿಯ ಪ್ರದರ್ಶನವನ್ನು ತಂಡ ನೀಡಲಿದೆ ಎಂಬುದನ್ನು ಕಾದು ನೋಡಬೇಕು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications