For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಕೆಕೆಆರ್ ಮಣಿಸಿ 4ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಚೆನ್ನೈ ಸೂಪರ್ ಕಿಂಗ್ಸ್

IPL 2021 Final: CSK vs KKR, Chennai super Kings Champion of 14th edition of IPL

ಐಪಿಎಲ್ 14ನೇ ಆವೃತ್ತಿಯ ಚಾಂಪಿಯನ್ ತಂಡವಾಗಿ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಹೊರಹೊಮ್ಮಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 27 ರನ್‌ಗಳ ಅಂತರದಿಂದ ಗೆದ್ದು ಬೀಗಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 4ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ.

ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ 192 ರನ್‌ಗಳನ್ನು ಗಳಿಸಿತ್ತು. ಇದನ್ನು ಬೆನ್ನಟ್ಟಿದ ಕೊಲ್ಕತ್ತಾ ನೈಟ್ ರೈಡರ್ಸ್ ಯಾವ ಹಂತದಲ್ಲಿಯೂ ಸಿಎಸ್‌ಕೆ ತಂಡಕ್ಕೆ ಪ್ರತಿರೋಧವನ್ನು ಒಡ್ಡಲು ವಿಫಲವಾಯಿತು. ಅಂತಿಮವಾಗಿ ಕೆಕೆಆರ್ 165 ರನ್‌ಗಳಿಗೆ ತನ್ನ ಹೋರಾಟವನ್ನು ಅಂತ್ಯಗೊಳಿಸಿತು.

ಚೆನ್ನೈ ಸೂಪರ್ ಕಿಂಗ್ಸ್ ಫೈನಲ್ ಪಂದ್ಯದಲ್ಲಿ ಎಲ್ಲಾ ವಿಭಾಗದಲ್ಲಿಯೂ ಅಮೋಘ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಯಿತು. ಮೊದಲಿಗೆ ಬ್ಯಾಟಿಂಗ್‌ನಲ್ಲಿ ಪಾರಮ್ಯ ಮೆರೆದ ಧೋನಿ ಪಡೆ ನಂತರ ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿಯೂ ಅಷ್ಟೇ ಅದ್ಭುತ ಪ್ರದರ್ಶನ ನೀಡುವ ಮೂಲಕ ಗೆದ್ದು ಬೀಗಿದೆ. ಬ್ಯಾಟಿಂಗ್‌ನಲ್ಲಿ ಫಾಫ್ ಡು ಪ್ಲೆಸಿಸ್ ಅದ್ಭುತ ಕೊಡುಗೆ ನೀಡಿದರೆ ಬೌಲಿಂಗ್‌ನಲ್ಲಿ ರವೀಂದ್ರ ಜಡೇಜಾ ಮಿಂಚಿದರು.

ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದ ಚೆನ್ನೈ ಸೂಪರ್ ಕಿಂಗ್ಸ್ ಕೇವಲ 3 ವಿಕೆಟ್ ಕಳೆದುಕೊಂಡು 192 ರನ್‌ಗಳನ್ನು ಗಳಿಸಿದೆ. ಈ ಪಂದ್ಯದಲ್ಲಿಯೂ ಸಿಎಸ್‌ಕೆ ಪರವಾಗಿ ಆರಂಭಿಕ ಜೋಡಿಯಿಂದ ಉತ್ತಮ ಕೊಡುಗೆ ದೊರೆಯಿತು. ಅದರಲ್ಲೂ ಅನುಭವಿ ಫಾಫ್ ಡು ಪ್ಲೆಸಿಸ್ 59 ಎಸೆತಗಳಲ್ಲಿ 86 ರನ್‌ಗಳನ್ನು ಗಳಿಸಿ ಕೊನೆಯ ಎಸೆತದಲ್ಲಿ ವಿಕೆಟ್ ಕಳೆದುಕೊಂಡರು.

ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ 32 ರನ್‌ಗಳಿಸಿದರೆ ರಾಬಿನ್ ಉತ್ತಪ್ಪ 15 ಎಸೆತಗಳಲ್ಲಿ 31 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಆಲ್‌ರೌಂಡರ್ ಮೊಯೀನ್ ಅಲಿ 20 ಎಸೆತಗಳಲ್ಲಿ 37 ರನ್‌ಗಳಿಸಿದ್ದಾರೆ. ಈ ಮೂಲಕ ತಂಡದ ಮೊದಲ ಇನ್ನೂರರ ಸನಿಹಕ್ಕೆ ಬರಲು ಕಾರಣರಾದರು.

ಚೆನ್ನೈ ಸೂಪರ್ ಕಿಂಗ್ಸ್ ತಂಡ ನೀಡಿದ ಈ ಗುರಿಯನ್ನು ಬೆನ್ನಟ್ಟಿದ ಕೆಕೆಆರ್ ಉತ್ತಮ ಆರಂಭವನ್ನು ಪಡೆಯಿತು. ಮೊದಲ ವಿಕೆಟ್‌ಗೆ ಕೆಕೆಆರ್‌ನ ಆರಂಭಿಕ ಜೋಡಿಯಾದ ಶುಬ್ಮನ್ ಗಿಲ್ ಹಾಗೂ ವೆಂಕಟೇಶ್ ಐಯ್ಯರ್ ಜೋಡಿ 91 ರನ್‌ಗಳ ಕೊಡುಗೆಯನ್ನು ನೀಡಿದರು. ಇಬ್ಬರು ಆಟಗಾರರು ಕೂಡ ಅರ್ಧ ಶತಕದ ಕೊಡುಗೆ ನೀಡಿದರು.

ಆದರೆ ಈ ಜೋಡಿಯನ್ನು ಹೊರತುಪಡಿಸಿದರೆ ಕೆಕೆಆರ್ ಪರವಾಗಿ ಯಾವ ಬ್ಯಾಟ್ಸ್‌ಮನ್‌ಗಳು ಕೂಡ ಉತ್ತಮ ಪ್ರದರ್ಶನ ನೀಡಲಿಲ್ಲ. ಪ್ರತಿಬ್ಬರು ಕೂಡ ಒಂದಂಕಿಗೆ ವಿಕೆಟ್ ಕಳೆದುಕೊಂಡು ಫೆವಿಲಿಯನ್ ಸೇರಿದರು. ಆದರೆ ಅಂತಿಮವಾಗಿ ಶಿವಂ ಮಾವಿ ಹಾಗೂ ಲೂಕಿ ಫರ್ಗ್ಯೂಸನ್ ಸ್ವಲ್ಪ ಪ್ರತಿರೋಧವನ್ನು ಒಡ್ಡಿದರು. ಆದರೆ ಇದು ಚೆನ್ನೈ ಪಾಲಿಗೆ ಯಾವುದೇ ಆತಂಕವನ್ನು ಮೂಡಿಸಲಿಲ್ಲ. ಅಂತಿಮವಾಗಿ ಸಿಎಸ್‌ಕೆ 27 ರನ್‌ಗಳ ಅಂತರದಿಂದ ಭರ್ಜರಿಯಾಗಿ ಗೆದ್ದು ಬೀಗಿದೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್‌ನ್ಲಲಿ ನಾಲ್ಕನೇ ಬಾರಿಗೆ ಟ್ರೋಫಿಯನ್ನು ಎತ್ತಿ ಹಿಡದಂತಾಗಿದೆ.

ಎರಡು ತಂಡಗಳ ಆಡುವ ಬಳಗ ಹೀಗಿದೆ
ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ಋತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ರಾಬಿನ್ ಉತ್ತಪ್ಪ, ಮೊಯೀನ್ ಅಲಿ, ಅಂಬಾಟಿ ರಾಯುಡು, ಎಂಎಸ್ ಧೋನಿ (ನಾಯಕ /ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಡ್ವೇನ್ ಬ್ರಾವೋ, ದೀಪಕ್ ಚಾಹರ್, ಜೋಶ್ ಹೇಜಲ್‌ವು

ಬೆಂಚ್: ಸುರೇಶ್ ರೈನಾ, ಚೇತೇಶ್ವರ ಪೂಜಾರ, ಕರ್ನ್ ಶರ್ಮಾ, ಇಮ್ರಾನ್ ತಾಹಿರ್, ಜೇಸನ್ ಬೆಹ್ರೆಂಡೋರ್ಫ್, ಕೃಷ್ಣಪ್ಪ ಗೌತಮ್, ಲುಂಗಿ ನ್ಗಿಡಿ, ಮಿಚೆಲ್ ಸ್ಯಾಂಟ್ನರ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಹರಿ ನಿಶಾಂತ್, ಎನ್ ಜಗದೀಶನ್, ಕೆಎಂ ಆಸಿಫ್, ಹರಿಶಂಕರ್ ರೆಡ್ಡಿ, ಡೊಮಿನಿಕ್ ಡ್ರೇಕ್ಸ್, ಭಗತ್ ವರ್ಮ

ಕೋಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ಶುಬ್ಮನ್ ಗಿಲ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಇಯೋನ್ ಮಾರ್ಗನ್ (ನಾಯಕ), ಶಕೀಬ್ ಅಲ್ ಹಸನ್, ಸುನಿಲ್ ನರೈನ್, ಲಾಕಿ ಫರ್ಗುಸನ್, ಶಿವಂ ಮಾವಿ, ವರುಣ್ ಚಕ್ರವರ್ತಿ

IPL ಟ್ರೋಫಿ ಗೆಲ್ಲೋದಕ್ಕೆ ಅರ್ಹವಾಗಿರೋರು ನಾವಲ್ಲ ಎಂದ ಧೋನಿ!ಮತ್ಯಾರು? | Oneindia Kannada

ಬೆಂಚ್: ಆಂಡ್ರೆ ರಸೆಲ್, ಹರ್ಭಜನ್ ಸಿಂಗ್, ಟಿಮ್ ಸೌಥಿ, ಬೆನ್ ಕಟಿಂಗ್, ಕರುಣ್ ನಾಯರ್, ಪವನ್ ನೇಗಿ, ಕುಲದೀಪ್ ಯಾದವ್, ಗುರ್ಕೀರತ್ ಸಿಂಗ್ ಮಾನ್, ಶೆಲ್ಡನ್ ಜಾಕ್ಸನ್, ಸಂದೀಪ್ ವಾರಿಯರ್, ಟಿಮ್ ಸೀಫರ್ಟ್, ಪ್ರಸಿದ್ ಕೃಷ್ಣ, ರಿಂಕು ಸಿಂಗ್, ಕಮಲೇಶ್ ನಾಗರಕೋಟಿ, ವೈಭವ್ ಅರೋರಾ

Story first published: Saturday, October 16, 2021, 11:26 [IST]
Other articles published on Oct 16, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+