CSK vs KKR ಫೈನಲ್: ಚೆನ್ನೈ ವಿರುದ್ಧ ಗೆಲ್ಲುತ್ತಾ ಕೋಲ್ಕತ್ತಾ? ಬಲಿಷ್ಠ ತಂಡದ ಮಾಹಿತಿ ಇಲ್ಲಿದೆ

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಅಂತಿಮ ಹಂತಕ್ಕೆ ಬಂದು ತಲುಪಿದ್ದು ಇಂದು ( ಅಕ್ಟೋಬರ್ 15 ) ನಡೆಯಲಿರುವ ಫೈನಲ್ ಪಂದ್ಯದ ಮೂಲಕ ಈ ಬಾರಿಯ ಐಪಿಎಲ್ ಟೂರ್ನಿಗೆ ತೆರೆಬೀಳಲಿದೆ.
ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಫೈನಲ್ ಪಂದ್ಯವನ್ನು ಪ್ರವೇಶಿಸಿದ್ದು, ಈ ಪ್ರತಿಷ್ಠಿತ ಪಂದ್ಯ ಅಕ್ಟೋಬರ್ 15, ಶುಕ್ರವಾರದಂದು ಭಾರತೀಯ ಕಾಲಮಾನದ ಪ್ರಕಾರ ಸಂಜೆ 7.30ಕ್ಕೆ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ.
ಟೂರ್ನಿಯ ಆರಂಭದಿಂದಲೂ ಉತ್ತಮ ಪ್ರದರ್ಶನ ತೋರುತ್ತಾ ಬಂದಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡು ಕ್ವಾಲಿಫೈಯರ್ 1 ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸದೆಬಡಿಯುವ ಮೂಲಕ ನೇರವಾಗಿ ಫೈನಲ್ ಪಂದ್ಯವನ್ನು ಪ್ರವೇಶಿಸಿತು. ಇತ್ತ ಟೂರ್ನಿಯ ಆರಂಭದಲ್ಲಿ ಕಳಪೆ ಪ್ರದರ್ಶನ ನೀಡಿ ಮಂಕಾಗಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ದ್ವಿತೀಯ ಭಾಗದಲ್ಲಿ ಸಾಲು ಸಾಲು ಪಂದ್ಯಗಳನ್ನು ಗೆಲ್ಲುವುದರ ಮೂಲಕ ಉತ್ತಮ ನೆಟ್ ರನ್ ರೇಟ್ ಪಡೆದುಕೊಂಡು ಪ್ಲೇ ಆಫ್ ಸುತ್ತಿಗೆ ಆರ್ಹತೆಯನ್ನು ಗಿಟ್ಟಿಸಿಕೊಂಡಿತು.
ಹೀಗೆ ಪ್ಲೇ ಆಫ್ ಸುತ್ತಿಗೆ ಅರ್ಹತೆ ಪಡೆದುಕೊಂಡ ಕೋಲ್ಕತಾ ನೈಟ್ ರೈಡರ್ಸ್ ತಂಡ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದ ಕಾರಣ ಎಲಿಮಿನೇಟರ್ ಪಂದ್ಯದಲ್ಲಿ ಸೆಣಸಾಟ ನಡೆಸಿತು. ಈ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗೆದ್ದ ಕೆಕೆಆರ್ ನಂತರ ನಡೆದ ಕ್ವಾಲಿಫೈಯರ್ 2 ಪಂದ್ಯದಲ್ಲಿ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸುವುದರ ಮೂಲಕ ಫೈನಲ್ ಪಂದ್ಯಕ್ಕೆ ಪ್ರವೇಶವನ್ನು ಪಡೆದುಕೊಂಡಿದೆ. ಹೀಗೆ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಇಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಸೆಣಸಾಟ ನಡೆಸಲಿದ್ದು, ಎರಡೂ ತಂಡಗಳ ಐಪಿಎಲ್ ಮುಖಾಮುಖಿಯಲ್ಲಿ ಹೆಚ್ಚು ಪಂದ್ಯಗಳನ್ನು ಗೆದ್ದಿರುವ ಬಲಿಷ್ಠ ತಂಡ ಯಾವುದು ಎಂಬುದರ ಮಾಹಿತಿ ಮುಂದೆ ಇದೆ ಓದಿ..
ಒಟ್ಟಾರೆ ಐಪಿಎಲ್ ಮುಖಾಮುಖಿಯಲ್ಲಿ ಯಾರು ಬಲಿಷ್ಠರು?
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 26 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡ 17 ಪಂದ್ಯಗಳಲ್ಲಿ ಜಯ ಗಳಿಸಿದೆ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡ 9 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವಿನ ಐಪಿಎಲ್ ಮುಖಾಮುಖಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸ್ಪಷ್ಟ ಮೇಲುಗೈ ಸಾಧಿಸಿದೆ.
ಕಳೆದ 5 ಪಂದ್ಯಗಳ ಮುಖಾಮುಖಿಯಲ್ಲಿ ಹೆಚ್ಚು ಗೆದ್ದವರಾರು?
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವೆ ನಡೆದಿರುವ ಕಳೆದ 5 ಪಂದ್ಯಗಳ ಮುಖಾಮುಖಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 4 ಪಂದ್ಯಗಳಲ್ಲಿ ಜಯ ಗಳಿಸಿದ್ದರೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಕೇವಲ ಒಂದು ಪಂದ್ಯದಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ನಡುವಿನ ಕಳೆದ 5 ಪಂದ್ಯಗಳ ಮುಖಾಮುಖಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೇಲುಗೈ ಸಾಧಿಸಿದೆ.
ದುಬೈ ಕ್ರೀಡಾಂಗಣದ ಮುಖಾಮುಖಿಯಲ್ಲಿ ಗೆದ್ದವರಾರು?
ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳೆರಡೂ ಪಂದ್ಯವೊಂದರಲ್ಲಿ ಮುಖಾಮುಖಿಯಾಗಿದ್ದು ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲುವನ್ನು ಸಾಧಿಸಿದೆ.
ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಪಂದ್ಯಗಳನ್ನು ಗೆದ್ದವರಾರು?
ಇನ್ನು ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಲೀಗ್ ಹಂತದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವೆ ನಡೆದ 2 ಪಂದ್ಯಗಳ ಪೈಕಿ ಎರಡರಲ್ಲಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲುವನ್ನು ಸಾಧಿಸಿ ಕೋಲ್ಕತಾ ನೈಟ್ ರೈಡರ್ಸ್ ಮೇಲೆ ಹಿಡಿತವನ್ನು ಸಾಧಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications