Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021, ಫೈನಲ್: ಕೆಕೆಆರ್ ಗೆಲುವಿಗೆ ಬೃಹತ್ ರನ್‌ಗಳ ಗುರಿ ನೀಡಿದ ಧೋನಿ ಪಡೆ

IPL 2021, Final, CSK vs KKR, Kolkata Knight Riders need 193 runs to won against CSK

ಐಪಿಎಲ್ 14ನೇ ಆವೃತ್ತಿಯ ಫೈನಲ್ ಪಂದ್ಯದ ಮೊದಲಾರ್ಧ ಮುಕ್ತಾಯವಾಗಿದೆ. ಈ ಹಂತದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೆಕೆಆರ್ ವಿರುದ್ಧ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದ್ದು ಕೆಕೆಆರ್ ಗೆಲುವಿಗೆ ಬೃಹತ್ ಮೊತ್ತದ ಗುರಿಯನ್ನು ನೀಡಿದೆ.

ಟಾಸ್ ಸೋಲು ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದ ಚೆನ್ನೈ ಸೂಪರ್ ಕಿಂಗ್ಸ್ ಕೇವಲ 3 ವಿಕೆಟ್ ಕಳೆದುಕೊಂಡು 192 ರನ್‌ಗಳನ್ನು ಗಳಿಸಿದೆ. ಈ ಪಂದ್ಯದಲ್ಲಿಯೂ ಸಿಎಸ್‌ಕೆ ಪರವಾಗಿ ಆರಂಭಿಕ ಜೋಡಿಯಿಂದ ಉತ್ತಮ ಕೊಡುಗೆ ದೊರೆಯಿತು. ಅದರಲ್ಲೂ ಅನುಭವಿ ಫಾಫ್ ಡು ಪ್ಲೆಸಿಸ್ 59 ಎಸೆತಗಳಲ್ಲಿ 86 ರನ್‌ಗಳನ್ನು ಗಳಿಸಿ ಕೊನೆಯ ಎಸೆತದಲ್ಲಿ ವಿಕೆಟ್ ಕಳೆದುಕೊಂಡರು.

ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ 32 ರನ್‌ಗಳಿಸಿದರೆ ರಾಬಿನ್ ಉತ್ತಪ್ಪ 15 ಎಸೆತಗಳಲ್ಲಿ 31 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಆಲ್‌ರೌಂಡರ್ ಮೊಯೀನ್ ಅಲಿ 20 ಎಸೆತಗಳಲ್ಲಿ 37 ರನ್‌ಗಳಿಸಿದ್ದಾರೆ. ಈ ಮೂಲಕ ತಂಡದ ಮೊದಲ ಇನ್ನೂರರ ಸನಿಹಕ್ಕೆ ಬರಲು ಕಾರಣರಾದರು.

ಎರಡು ತಂಡಗಳ ಆಡುವ ಬಳಗ ಹೀಗಿದೆ
ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ಋತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ರಾಬಿನ್ ಉತ್ತಪ್ಪ, ಮೊಯೀನ್ ಅಲಿ, ಅಂಬಾಟಿ ರಾಯುಡು, ಎಂಎಸ್ ಧೋನಿ (ನಾಯಕ /ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಡ್ವೇನ್ ಬ್ರಾವೋ, ದೀಪಕ್ ಚಾಹರ್, ಜೋಶ್ ಹೇಜಲ್‌ವುಡ್

ಬೆಂಚ್: ಸುರೇಶ್ ರೈನಾ, ಚೇತೇಶ್ವರ ಪೂಜಾರ, ಕರ್ನ್ ಶರ್ಮಾ, ಇಮ್ರಾನ್ ತಾಹಿರ್, ಜೇಸನ್ ಬೆಹ್ರೆಂಡೋರ್ಫ್, ಕೃಷ್ಣಪ್ಪ ಗೌತಮ್, ಲುಂಗಿ ನ್ಗಿಡಿ, ಮಿಚೆಲ್ ಸ್ಯಾಂಟ್ನರ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಹರಿ ನಿಶಾಂತ್, ಎನ್ ಜಗದೀಶನ್, ಕೆಎಂ ಆಸಿಫ್, ಹರಿಶಂಕರ್ ರೆಡ್ಡಿ, ಡೊಮಿನಿಕ್ ಡ್ರೇಕ್ಸ್, ಭಗತ್ ವರ್ಮ

IPL ಚಾಂಪಿಯನ್ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತವೆಷ್ಟು? RCBಗೆ ಎಷ್ಟು ಸಿಕ್ತು? | Oneindia Kannada

ಕೋಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ಶುಬ್ಮನ್ ಗಿಲ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಇಯೋನ್ ಮಾರ್ಗನ್ (ನಾಯಕ), ಶಕೀಬ್ ಅಲ್ ಹಸನ್, ಸುನಿಲ್ ನರೈನ್, ಲಾಕಿ ಫರ್ಗುಸನ್, ಶಿವಂ ಮಾವಿ, ವರುಣ್ ಚಕ್ರವರ್ತಿ

Story first published: Friday, October 15, 2021, 21:36 [IST]
Other articles published on Oct 15, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+