ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021 ಫೈನಲ್: ಸಿಎಸ್‌ಕೆ vs ಕೆಕೆಆರ್ ಮಧ್ಯೆ ವಿಜೇತ ತಂಡವನ್ನು ಊಹಿಸಿದ ಮೈಕಲ್ ವಾನ್

IPL 2021 Final: CSK vs KKR, Michael Vaughan predicts team who will win IPL final

ಐಪಿಎಲ್‌ನ ಕೊನೆಯ ಪಂದ್ಯದ ಆರಂಭಕ್ಕೂ ಮುನ್ನ ಈ ಬಾರಿಯ ಟೂರ್ನಿಯ ಚಾಂಪಿಯನ್ ಯಾರು ಎಂಬ ಕುತೂಹಲ ಎಲ್ಲರಲ್ಲಿದೆ. ಕ್ರಿಕೆಟ್ ವಿಶ್ಲೇಷಕರು ಕೂಡ ಈ ಫೈನಲ್ ಪಂದ್ಯದ ಫಲಿತಾಂಶದ ಬಗ್ಗೆ ಸಾಕಷ್ಟು ಕುತೂಹಲಕಾರಿ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ಮಧ್ಯೆ ಯಾರು ಗೆದ್ದು ಚಾಂಪಿಯನ್ ಪಟ್ಟಕ್ಕೇರಲಿದ್ದಾರೆ ಎಂದು ಊಹಿಸಿದ್ದಾರೆ. ಅಲ್ಲದೆ ಈ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆಯುವ ಆಟಗಾರ ಯಾರು ಎಂಬುದನ್ನು ಕೂಡ ವಾನ್ ಭವಿಷ್ಯ ನುಡಿದಿದ್ದಾರೆ.

2012ರ ಐಪಿಎಲ್‌ನ ಫಯನಲ್‌ನಲ್ಲಿಯೂ ಈ ಎರಡು ತಂಡಗಳೇ ಫೈನಲ್‌ಗೆ ಪ್ರವೇಶ ಪಡೆದುಕೊಂಡಿತ್ತು. ಇದೀಹ 9 ವರ್ಷಗಳ ನಂತರ ಈ ಎರಡು ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ನಾಲ್ಕನೇ ಟ್ರೋಫಿಯ ಮೇಲೆ ಕಣ್ಣಿಟ್ಟಿದ್ದರೆ ಕೊಲ್ಕತ್ತಾ ನೈಟ್ ರೈಡರ್ಸ್ ಈ ಪಂದ್ಯದಲ್ಲಿ ಗೆದ್ದರೆ ಮೂರನೇ ಬಾರಿಗೆ ಐಪಿಎಲ್‌ನ ಚಾಂಪಿಯನ್ ಪಟ್ಟಕ್ಕೇರಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಈ ಹಿಂದೆ 2010, 2011 ಹಾಗೂ 2018ರ ಐಪಿಎಲ್ ಆವೃತ್ತಿಯಲ್ಲಿ ಗೆದ್ದು ಚಾಂಪಿಯನ್ ಎನಿಸಿತ್ತು. ಮತ್ತೊಂದೆಡೆ ಗೌತಮ್ ಗಂಭೀರ್ ನೇತೃತ್ವದಲ್ಲಿ ಕೆಕೆಆರ್ 2012 ಹಾಗೂ 2014ರ ಐಪಿಎಲ್‌ನಲ್ಲಿ ಚಾಂಪಿಯನ್ ಪಟ್ಟಕ್ಕೇರಿತ್ತು.

T20 World Cup: ಭಾರತದ ಅಪಾಯಕಾರಿ ಆಟಗಾರನ ಹೆಸರಿಸಿದ ಹೌರಿಟ್ಜ್T20 World Cup: ಭಾರತದ ಅಪಾಯಕಾರಿ ಆಟಗಾರನ ಹೆಸರಿಸಿದ ಹೌರಿಟ್ಜ್

ಈ ಫೈನಲ್ ಪಂದ್ಯಕ್ಕೂ ಮುನ್ನ ವೈಕಲ್ ವಾಲ್ ತಮ್ಮ ಭವಿಷ್ಯವನ್ನು ನುಡಿದಿದ್ದಾರೆ. ಈ ಬಾರಿಯ ಐಪಿಎಲ್‌ನ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಒರ್ ಕಿಂಗ್ಸ್ ತಂಡ ಗೆದ್ದು ಚಾಂಪಿಯನ್ ಪಟ್ಟಕ್ಕೇರಲಿದೆ ಎಂದು ವಾನ್ ಊಹಿಸಿದ್ದಾರೆ. ಅಲ್ಲದೆ ಈ ಪಂದ್ಯದಲ್ಲಿ ರವೀಂದ್ರ ಜಡೇಜಾ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳಲಿದ್ದಾರೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಈ ಬಾರಿಯ ಐಪಿಎಲ್ ಸಾಕಷ್ಟು ಏರಿಳಿತಳನ್ನು ಕಂಡಿರುವುದು ಕುತೂಹಲ ಮೂಡಿಸಿದೆ. ಮೊದಲಾರ್ದದ ಪಂದ್ಯಗಳಲ್ಲಿ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಅಮೋಘ ಪ್ರದರ್ಶನ ನೀಡಿತ್ತು. ಆಡಿದ ಏಳು ಪಂದ್ಯಗಳ ಪೈಕಿ ಐದು ಪಂದ್ಯಗಳಲ್ಲಿ ಗೆದ್ದು ಬೀಗಿತ್ತು. ನಂತರ ಎರಡನೇ ಚರಣದ ಆರಂಭದಲ್ಲಿಯೂ ಇದೇ ಪ್ರದರ್ಶನ ಮುಂದುವರಿಸಿ ಟೂರ್ನಿಯಲ್ಲಿ ಪ್ಲೇಆಫ್ ಹಂತಕ್ಕೇರಿದ ಮೊದಲ ತಂಡವೆಂಬ ಹೆಗ್ಗಳಿಕೆ ಪಡೆದುಕೊಂಡಿತು. ಆದರೆ ಲೀಗ್ ಹಂತದ ಅಂತ್ಯಕ್ಕಾಗುವ ವೇಳೆ ಸತತ ಮೂರು ಸೋಲು ಕಂಡು ಆಘಾತ ಅನುಭವಿಸಿತು.

ಟಿ20 ವಿಶ್ವಕಪ್‌: ಭಾರತ ವಿರುದ್ಧದ ಅಭ್ಯಾಸ ಪಂದ್ಯಕ್ಕೆ ಆ್ಯರನ್ ಫಿಂಚ್ ಲಭ್ಯಟಿ20 ವಿಶ್ವಕಪ್‌: ಭಾರತ ವಿರುದ್ಧದ ಅಭ್ಯಾಸ ಪಂದ್ಯಕ್ಕೆ ಆ್ಯರನ್ ಫಿಂಚ್ ಲಭ್ಯ

ಮತ್ತೊಂದೆಡೆ ಕೆಕೆಆರ್ ತಂಡ ಆರಂಭದ ಚರಣದಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡುವ ಮೂಲಕ ಮತ್ತೊಂದು ಅತ್ಯಂತ ಕಳಪೆ ಆವೃತ್ತಿಯನ್ನು ಹೊಂದಲಿದೆ ಎಂದೇ ಅಭಿಮಾನಿಗಳು ಊಹಿಸಿದ್ದರು. ಆದರೆ ಎರಡನೇ ಚರನದಲ್ಲಿ ಕೆಕೆಆರ್ ಊಹಿಸಲಾರದ ರೀತಿಯಲ್ಲಿ ತಿರುಗಿಬೀಳಲು ಯಶಸ್ವಿಯಾಗುತ್ತು. ಈ ಮೂಲಕ ಪ್ಲೇಆಫ್‌ಗೆ ಪ್ರವೇಶ ಪಡೆದು ಈಗ ಫೈನಲ್ ಹಂತಕ್ಕೇರಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡ: ಎಂಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ಋತುರಾಜ್ ಗಾಯಕವಾಡ್, ಫಾಫ್ ಡು ಪ್ಲೆಸಿಸ್, ರಾಬಿನ್ ಉತ್ತಪ್ಪ, ಮೊಯೀನ್ ಅಲಿ, ಅಂಬಾಟಿ ರಾಯುಡು, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಡ್ವೇನ್ ಬ್ರಾವೋ, ದೀಪಕ್ ಚಹಾರ್, ಜೋಶ್ ಹಜಲ್ ವುಡ್, ಸುರೇಶ್ ರೈನಾ, ಚೇತೇಶ್ವರ ಪೂಜಾರ, ಕರ್ಣ್ ಶರ್ಮಾ, ಇಮ್ರಾನ್ ತಾಹಿರ್, ಜೇಸನ್ ಬೆಹ್ರೆಂಡೋರ್ಫ್, ಕೃಷ್ಣಪ್ಪ ಗೌತಮ್, ಲುಂಗಿ ಎನ್‌ಗಿಡಿ, ಮಿಚೆಲ್ ಸ್ಯಾಂಟ್ನರ್, ರವಿ ಶ್ರೀನಿವಾಸನ್ ಸಾಯಿ ಕಿಶೋರ್, ಹರಿ ನಿಶಾಂತ್, ಎನ್ ಜಗದೀಶನ್, ಕೆಎಂ ಆಸಿಫ್, ಹರಿಶಂಕರ್ ರೆಡ್ಡಿ, ಡೊಮಿನಿಕ್ ಡ್ರೇಕ್ಸ್, ಭಗತ್ ವರ್ಮ

IPL ಚಾಂಪಿಯನ್ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತವೆಷ್ಟು? RCBಗೆ ಎಷ್ಟು ಸಿಕ್ತು? | Oneindia Kannada

ಕೋಲ್ಕತ್ತಾ ನೈಟ್ ರೈಡರ್ಸ್ ತಂಡ: ದಿನೇಶ್ ಕಾರ್ತಿಕ್ (ವಿಕೆ), ಇಯೋನ್ ಮಾರ್ಗನ್ (ಸಿ), ಶುಭಮನ್ ಗಿಲ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ರಾಹುಲ್ ತ್ರಿಪಾಠಿ, ಶಕೀಬ್ ಅಲ್ ಹಸನ್, ಸುನಿಲ್ ನರೈನ್, ಲಾಕಿ ಫರ್ಗುಸನ್, ಶಿವಂ ಮಾವಿ, ವರುಣ್ ಚಕರವರ್ತಿ, ಆಂಡ್ರೆ ರಸೆಲ್, ಹರ್ಭಜನ್ ಸಿಂಗ್, ಟಿಮ್ ಸೌಥಿ, ಬೆನ್ ಕಟಿಂಗ್, ಕರುಣ್ ನಾಯರ್, ಪವನ್ ನೇಗಿ, ಕುಲದೀಪ್ ಯಾದವ್, ಗುರ್ಕೀರತ್ ಸಿಂಗ್ ಮಾನ್, ಶೆಲ್ಡನ್ ಜಾಕ್ಸನ್, ಸಂದೀಪ್ ವಾರಿಯರ್, ಟಿಮ್ ಸೀಫರ್ಟ್, ಪ್ರಸಿದ್ ಕೃಷ್ಣ, ರಿಂಕು ಸಿಂಗ್, ಕಮಲೇಶ್ ನಾಗರಕೋಟಿ, ವೈಭವ್ ಅರೋರಾ

Story first published: Friday, October 15, 2021, 18:56 [IST]
Other articles published on Oct 15, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X