For Quick Alerts
ALLOW NOTIFICATIONS  
For Daily Alerts
 

CSK vs KKR ಫೈನಲ್: ಸಂಭಾವ್ಯ ತಂಡಗಳು, ಪಿಚ್ ವರದಿ ಮತ್ತು ನೇರಪ್ರಸಾರದ ಮಾಹಿತಿ

 IPL 2021 Final- CSK vs KKR probable playing xi, pitch report and live streaming details

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಅಂತಿಮ ಹಂತಕ್ಕೆ ಬಂದು ತಲುಪಿದ್ದು ಇಂದು ( ಅಕ್ಟೋಬರ್ 15 ) ನಡೆಯಲಿರುವ ಫೈನಲ್ ಪಂದ್ಯದ ಮೂಲಕ ಈ ಬಾರಿಯ ಐಪಿಎಲ್ ಟೂರ್ನಿಗೆ ತೆರೆಬೀಳಲಿದೆ.

ಟೂರ್ನಿಯ ಆರಂಭದಿಂದಲೂ ಉತ್ತಮ ಪ್ರದರ್ಶನ ತೋರುತ್ತಾ ಬಂದಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡು ಕ್ವಾಲಿಫೈಯರ್ 1 ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸದೆಬಡಿಯುವ ಮೂಲಕ ನೇರವಾಗಿ ಫೈನಲ್ ಪಂದ್ಯವನ್ನು ಪ್ರವೇಶಿಸಿತು. ಇತ್ತ ಟೂರ್ನಿಯ ಆರಂಭದಲ್ಲಿ ಕಳಪೆ ಪ್ರದರ್ಶನ ನೀಡಿ ಮಂಕಾಗಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ದ್ವಿತೀಯ ಭಾಗದಲ್ಲಿ ಸಾಲು ಸಾಲು ಪಂದ್ಯಗಳನ್ನು ಗೆಲ್ಲುವುದರ ಮೂಲಕ ಉತ್ತಮ ನೆಟ್ ರನ್ ರೇಟ್ ಪಡೆದುಕೊಂಡು ಪ್ಲೇ ಆಫ್ ಸುತ್ತಿಗೆ ಆರ್ಹತೆಯನ್ನು ಗಿಟ್ಟಿಸಿಕೊಂಡಿತು.

ಹೀಗೆ ಪ್ಲೇ ಆಫ್ ಸುತ್ತಿಗೆ ಅರ್ಹತೆ ಪಡೆದುಕೊಂಡ ಕೋಲ್ಕತಾ ನೈಟ್ ರೈಡರ್ಸ್ ತಂಡ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದ ಕಾರಣ ಎಲಿಮಿನೇಟರ್ ಪಂದ್ಯದಲ್ಲಿ ಸೆಣಸಾಟ ನಡೆಸಿತು. ಈ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗೆದ್ದ ಕೆಕೆಆರ್ ನಂತರ ನಡೆದ ಕ್ವಾಲಿಫೈಯರ್ 2 ಪಂದ್ಯದಲ್ಲಿ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸುವುದರ ಮೂಲಕ ಫೈನಲ್ ಪಂದ್ಯಕ್ಕೆ ಪ್ರವೇಶವನ್ನು ಪಡೆದುಕೊಂಡಿದೆ. ಹೀಗೆ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಇಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಸೆಣಸಾಟ ನಡೆಸಲಿದೆ. ಈ ಪಂದ್ಯದ ಕುರಿತಾದ ಪಿಚ್ ವರದಿ, ಸಂಭಾವ್ಯ ಆಡುವ ಬಳಗ ಮತ್ತು ನೇರಪ್ರಸಾರದ ಮಾಹಿತಿ ಈ ಕೆಳಕಂಡಂತಿದೆ ಓದಿ..

ಪಂದ್ಯದ ವಿವರ:

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಫೈನಲ್ ಪಂದ್ಯವನ್ನು ಪ್ರವೇಶಿಸಿದ್ದು, ಈ ಪ್ರತಿಷ್ಠಿತ ಪಂದ್ಯ ಅಕ್ಟೋಬರ್ 15, ಶುಕ್ರವಾರದಂದು ಭಾರತೀಯ ಕಾಲಮಾನದ ಪ್ರಕಾರ ಸಂಜೆ 7.30ಕ್ಕೆ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ.

ಪಿಚ್‌ ವರದಿ:

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಫೈನಲ್‌ ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚು ಸಹಕಾರಿಯಾಗಿರಲಿದೆ. ಎರಡೂ ಇನ್ನಿಂಗ್ಸ್‌‌ನ ಬ್ಯಾಟಿಂಗ್‌ಗೂ ಈ ಪಿಚ್ ಸಹಕಾರಿಯಾಗಲಿದ್ದು ವೇಗಿಗಳಿಗೆ ಹೆಚ್ಚು ವಿಕೆಟ್ ಬೀಳುವ ಸಾಧ್ಯತೆಗಳು ಹೆಚ್ಚಿವೆ. ಹಾಗೂ ಈ ಪಿಚ್‌ನಲ್ಲಿ ಸ್ಪಿನ್ ಬೌಲರ್‌ಗಳ ಆಟ ಹೆಚ್ಚೇನೂ ನಡೆಯುವುದಿಲ್ಲ ಎಂಬ ವರದಿಯಿದ್ದು ಸ್ಪಿನ್ ಬೌಲರ್‌ಗಳು ವಿಕೆಟ್ ಪಡೆಯಲು ಹೆಚ್ಚಿನ ಶ್ರಮ ವಹಿಸಬೇಕಿದೆ.

ನೇರಪ್ರಸಾರದ ಮಾಹಿತಿ:

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಫೈನಲ್ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರ ಪ್ರಸಾರವಾಗಲಿದ್ದು, ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿಯೂ ಪಂದ್ಯದ ಲೈವ್ ವೀಕ್ಷಿಸಬಹುದಾಗಿದೆ. ಜೊತೆಗೆ ನಮ್ಮ ಮೈಖೇಲ್ ಕನ್ನಡ ವೆಬ್‌ಸೈಟ್‌ನಲ್ಲಿಯೂ ಪಂದ್ಯದ ಲೈವ್ ಸ್ಕೋರ್ ಅಪ್ ಡೇಟ್ ಇರಲಿದ್ದು ಲೈವ್ ಸ್ಕೋರ್ ತಿಳಿಯಲು ನೀವು ನಮ್ಮ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಸಂಭಾವ್ಯ ತಂಡಗಳು:

ಚೆನ್ನೈ ಸೂಪರ್ ಕಿಂಗ್ಸ್: ಫಾಫ್ ಡು ಪ್ಲೆಸಿಸ್, ರುತುರಾಜ್ ಗಾಯಕ್ವಾಡ್, ರಾಬಿನ್ ಉತ್ತಪ್ಪ, ಮೊಯೀನ್ ಅಲಿ, ಅಂಬಟಿ ರಾಯುಡು, ಎಂಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಹರ್ ಮತ್ತು ಜೋಶ್ ಹಜಲ್‌ವುಡ್.

ಕೋಲ್ಕತ್ತಾ ನೈಟ್ ರೈಡರ್ಸ್: ಶುಬ್ಮನ್ ಗಿಲ್, ವೆಂಕಟೇಶ್ ಐಯ್ಯರ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ಇಯಾನ್ ಮಾರ್ಗನ್ (ನಾಯಕ), ಆಂಡ್ರೆ ರಸೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್‌), ಸುನೀಲ್ ನರೈನ್, ಲಾಕಿ ಫರ್ಗುಸನ್, ವರುಣ್ ಚಕ್ರವರ್ತಿ ಮತ್ತು ಶಿವಂ ಮಾವಿ

Story first published: Friday, October 15, 2021, 13:13 [IST]
Other articles published on Oct 15, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+