ಐಪಿಎಲ್ 2021 ಫೈನಲ್: CSK vs KKR, ಟಾಸ್ ರಿಪೋರ್ಟ್, ಪ್ಲೇಯಿಂಗ್ XI ಮತ್ತು Live ಸ್ಕೋರ್

ಐಪಿಎಲ್ 14ನೇ ಆವೃತ್ತಿಯ ಫೈನಲ್ ಪಂದ್ಯ ಆರಂಭವಾಗಿದ್ದು ಚಾಂಪಿಯನ್ ಪಟ್ಟಕ್ಕೇರುವ ತಂಡ ಯಾವುದು ಎಂಬುದಕ್ಕೆ ಕಲವೇ ಗಂಟೆಗಳಲ್ಲಿ ಉತ್ತರ ದೊರೆಯಲಿದೆ. ಈ ಬಾರಿಯ ಐಪಿಎಲ್‌ನ ಚಾಂಪಿಯನ್ ತಂಡವನ್ನು ನಿರ್ಧರಿಸುವ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಈ ಪಂದ್ಯದಲ್ಲಿ ಎರಡು ತಂಡಗಳು ಕೂಡ ಈ ಹಿಂದಿನ ಪಂದ್ಯದಲ್ಲಿ ಆಡಿದ ತಂಡದೊಂದಿಗೆ ಕಣಕ್ಕಿಳಿದಿದೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಡುವ ಬಳಗದಲ್ಲಿ ಸುರೇಶ್ ರೈನಾ ಸ್ಥಾನವನ್ನು ಪಡೆದುಕೊಂಡಿಲ್ಲ. ಕ್ವಾಲಿಫೈಯರ್ ಪಂದ್ಯದಲ್ಲಿ ಮಿಂಚಿದ ಕನ್ನಡಿಗ ರಾಬಿನ್ ಉತ್ತಪ್ಪ ಈ ಪಂದ್ಯದಲ್ಲಿಯೂ ಆಡುವ ಬಳಗದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಇದು 10ನೇ ಐಪಿಎಲ್ ಪಂದ್ಯವಾಗಿದೆ. ಇದರಲ್ಲಿ ಧೋನಿ ಪಡೆ 3 ಬಾರಿ ಗೆದ್ದು ಚಾಂಪಿಯನ್ ಪಟ್ಟಕ್ಕೇರಿದೆ. ಚೆನ್ನೈ ಸೂಪರ್ ಕಿಂಗ್ಸ್ ಈ ಹಿಂದೆ 2010, 2011 ಹಾಗೂ 2018ರ ಐಪಿಎಲ್ ಆವೃತ್ತಿಯಲ್ಲಿ ಗೆದ್ದು ಚಾಂಪಿಯನ್ ಎನಿಸಿತ್ತು. ಮತ್ತೊಂದೆಡೆ ಗೌತಮ್ ಗಂಭೀರ್ ನೇತೃತ್ವದಲ್ಲಿ ಕೆಕೆಆರ್ 2012 ಹಾಗೂ 2014ರ ಐಪಿಎಲ್‌ನಲ್ಲಿ ಚಾಂಪಿಯನ್ ಪಟ್ಟಕ್ಕೇರಿತ್ತು.
2012ರ ಐಪಿಎಲ್‌ನ ಫೈನಲ್‌ನಲ್ಲಿಯೂ ಈ ಎರಡು ತಂಡಗಳೇ ಫೈನಲ್‌ಗೆ ಪ್ರವೇಶ ಪಡೆದುಕೊಂಡಿತ್ತು. ಇದೀಗ 9 ವರ್ಷಗಳ ನಂತರ ಈ ಎರಡು ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ನಾಲ್ಕನೇ ಟ್ರೋಫಿಯ ಮೇಲೆ ಕಣ್ಣಿಟ್ಟಿದ್ದರೆ ಕೊಲ್ಕತ್ತಾ ನೈಟ್ ರೈಡರ್ಸ್ ಈ ಪಂದ್ಯದಲ್ಲಿ ಗೆದ್ದರೆ ಮೂರನೇ ಬಾರಿಗೆ ಐಪಿಎಲ್‌ನ ಚಾಂಪಿಯನ್ ಪಟ್ಟಕ್ಕೇರಲಿದೆ.
Live ಸ್ಕೋರ್ ಪಟ್ಟಿ ಹೀಗಿದೆ:
ಎರಡು ತಂಡಗಳ ಆಡುವ ಬಳಗ ಹೀಗಿದೆ
ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ಋತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ರಾಬಿನ್ ಉತ್ತಪ್ಪ, ಮೊಯೀನ್ ಅಲಿ, ಅಂಬಾಟಿ ರಾಯುಡು, ಎಂಎಸ್ ಧೋನಿ (ನಾಯಕ /ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಡ್ವೇನ್ ಬ್ರಾವೋ, ದೀಪಕ್ ಚಾಹರ್, ಜೋಶ್ ಹೇಜಲ್‌ವುಡ್
ಬೆಂಚ್: ಆಂಡ್ರೆ ರಸೆಲ್, ಹರ್ಭಜನ್ ಸಿಂಗ್, ಟಿಮ್ ಸೌಥಿ, ಬೆನ್ ಕಟಿಂಗ್, ಕರುಣ್ ನಾಯರ್, ಪವನ್ ನೇಗಿ, ಕುಲದೀಪ್ ಯಾದವ್, ಗುರ್ಕೀರತ್ ಸಿಂಗ್ ಮಾನ್, ಶೆಲ್ಡನ್ ಜಾಕ್ಸನ್, ಸಂದೀಪ್ ವಾರಿಯರ್, ಟಿಮ್ ಸೀಫರ್ಟ್, ಪ್ರಸಿದ್ ಕೃಷ್ಣ, ರಿಂಕು ಸಿಂಗ್, ಕಮಲೇಶ್ ನಾಗರಕೋಟಿ, ವೈಭವ್ ಅರೋರಾ
ಕೋಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ಶುಬ್ಮನ್ ಗಿಲ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಇಯೋನ್ ಮಾರ್ಗನ್ (ನಾಯಕ), ಶಕೀಬ್ ಅಲ್ ಹಸನ್, ಸುನಿಲ್ ನರೈನ್, ಲಾಕಿ ಫರ್ಗುಸನ್, ಶಿವಂ ಮಾವಿ, ವರುಣ್ ಚಕ್ರವರ್ತಿ
ಬೆಂಚ್: ಆಂಡ್ರೆ ರಸೆಲ್, ಹರ್ಭಜನ್ ಸಿಂಗ್, ಟಿಮ್ ಸೌಥಿ, ಬೆನ್ ಕಟಿಂಗ್, ಕರುಣ್ ನಾಯರ್, ಪವನ್ ನೇಗಿ, ಕುಲದೀಪ್ ಯಾದವ್, ಗುರ್ಕೀರತ್ ಸಿಂಗ್ ಮಾನ್, ಶೆಲ್ಡನ್ ಜಾಕ್ಸನ್, ಸಂದೀಪ್ ವಾರಿಯರ್, ಟಿಮ್ ಸೀಫರ್ಟ್, ಪ್ರಸಿದ್ ಕೃಷ್ಣ, ರಿಂಕು ಸಿಂಗ್, ಕಮಲೇಶ್ ನಾಗರಕೋಟಿ, ವೈಭವ್ ಅರೋರಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications