ಆರ್‌ಸಿಬಿಯ ದುಬಾರಿ ಆಟಗಾರನ ಬಗ್ಗೆ ನಿರಾಶೆ ವ್ಯಕ್ತಪಡಿಸಿದ ಗಂಭೀರ್

ನವದೆಹಲಿ: ಟೀಮ್ ಇಂಡಿಯಾದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ಗೌತಮ್ ಗಂಭೀರ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದಾರೆ. ಐಪಿಎಲ್‌ನಲ್ಲಿ ಸಾಕಷ್ಟು ಅವಕಾಶಗಳು ಸಿಕ್ಕರೂ ಮ್ಯಾಕ್ಸ್‌ವೆಲ್ ಅದನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಗಂಭೀರ್ ಹೇಳಿದ್ದಾರೆ.

ಐಪಿಎಲ್ 2021ರಲ್ಲಿ ಸೆಣಸಲಿರುವ ಆರ್‌ಸಿಬಿ ತಂಡದ ಸಂಪೂರ್ಣ ಮಾಹಿತಿ

ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿಯ ಐಪಿಎಲ್ ಹರಾಜಿನ ವೇಳೆ 14.25 ಕೋಟಿ ರೂ.ಗೆ ಖರೀದಿಸಿತ್ತು. 2021ರ ಐಪಿಎಲ್ ಹರಾಜಿನ ವೇಳೆ ದುಬಾರಿ ಆಟಗಾರರಲ್ಲಿ ಒಬ್ಬರಾಗಿ ಮ್ಯಾಕ್ಸ್‌ವೆಲ್ ಕೂಡ ಗಮನ ಸೆಳೆದಿದ್ದರು.

'ಒಂದು ದುರದೃಷ್ಟಕರವಾದ ಸಂಗತಿಯಂದರೆ ಸಾಕಷ್ಟು ಅವಕಾಶಗಳು ಸಿಕ್ಕರೂ ಮ್ಯಾಕ್ಸ್‌ವೆಲ್ ಯಶಸ್ವಿಯಾಗಿಲ್ಲ. 2014ರ ಐಪಿಎಲ್ ಸೀಸನ್‌ನಲ್ಲಿ ಸಿಡಿದಿದ್ದು ಬಿಟ್ಟರೆ ಮತ್ತೆ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿಲ್ಲ. ಆತ ಬೇರೆ ಬೇರೆ ಹಲವಾರು ಫ್ರಾಂಚೈಸಿಗಳಿಗೆ ಆಡಿದ್ದಾರೆ ಯಾಕೆಂದರೆ ಅವರ ಆಟ ಸ್ಥಿರವಾದುದಲ್ಲ,' ಎಂದು ಇಎಸ್‌ಪಿಎನ್ ಕ್ರಿಕ್‌ ಇನ್ಫೋ ಜೊತೆ ಗಂಭೀರ್ ಹೇಳಿಕೊಂಡಿದ್ದಾರೆ.

2021ರ ಐಪಿಎಲ್‌ನಲ್ಲಿ ಎಂಎಸ್ ಧೋನಿ ನಿರ್ಮಿಸಲಿರುವ ದಾಖಲೆಗಳ ಸಂಪೂರ್ಣ ಪಟ್ಟಿ

14ನೇ ಆವೃತ್ತಿಯ ಅರಂಭಿಕ ಪಂದ್ಯದಲ್ಲೇ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸೆಣಸಾಡಲಿವೆ. ಏಪ್ರಿಲ್ 9ರಂದು ಚೆನ್ನೈನಲ್ಲಿ ಈ ಪಂದ್ಯ ನಡೆಯಲಿದೆ. ಆರ್‌ಸಿಬಿಯ ಅತ್ಯಂತ ಪ್ರಭಾವಿ ಆಟಗಾರನಾಗಿ ಮ್ಯಾಕ್ಸ್‌ವೆಲ್ ಕಾಣಿಸಿಕೊಂಡಿದ್ದಾರೆ. ಆದರೆ ಮ್ಯಾಕ್ಸ್‌ವೆಲ್ ಆರ್‌ಸಿಬಿಗೆ ಈ ಸಾರಿ ಬಲ ತುಂಬುತ್ತಾರಾ ಕಾದು ನೋಡಬೇಕಿದೆ.

For Quick Alerts
ALLOW NOTIFICATIONS
For Daily Alerts
Story first published: Wednesday, April 7, 2021, 14:55 [IST]
Other articles published on Apr 7, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X