ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಧೋನಿ, ಮಾರ್ಗನ್ ಮಧ್ಯೆ ಯಾರು ಬೆಸ್ಟ್? ಗಂಭೀರ್ ನೀಡಿದ ಕುತೂಹಲಕಾರಿ ಉತ್ತರ!

IPL 2021: Gautam Gambhir said MS Dhoni performing better than Eoin Morgam

ಈ ಬಾರಿಯ ಐಪಿಎಲ್ ಟೂರ್ನಿಯ ಚಾಂಪಿಯನ್ ಯಾರು ಎಂಬ ಪ್ರಶ್ನೆಗೆ ಇನ್ನು ಕೆಲವೇ ಗಂಟೆಗಳಲ್ಲಿ ಉತ್ತರ ದೊರೆಯಲಿದೆ. ಚೈನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಈ ಬಾರಿಯ ಐಪಿಎಲ್‌ನ ಫೈನಲ್ ಪಂದ್ಯದಲ್ಲಿ ಚಾಂಪಿಯನ್ ಪಟ್ಟಕ್ಕಾಗಿ ಹೋರಾಟವನ್ನು ನಡೆಸಲಿದೆ. ಈ ಪಂದ್ಯಕ್ಕೂ ಮುನ್ನ ಈ ಚಾಂಪಿಯನ್ ಪಟ್ಟಕ್ಕೇರಿರುವ ಎರಡು ತಂಡಗಳ ನಾಯಕರ ಫಾರ್ಮ್ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದೆ. ತಂಡದ ಆಟಗಾರರಾಗಿ ಎರಡು ತಂಡಗಳ ನಾಯಕರು ಅತ್ಯಂತ ಕಳಪೆ ಪ್ರದರ್ಶನ ನೀಡಿರುವುದು ಇದಕ್ಕೆ ಕಾರಣವಾಗಿದೆ.

ಈ ಚರ್ಚೆಯ ಬಗ್ಗೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಪ್ರತಿಕ್ರಿಯೆ ನೀಡಿದ್ದಾರೆ. ಅದರಲ್ಲೂ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬೇರೆ ಬೇರೆ ಹಂತಗಳಲ್ಲಿರುವ ಈ ಇಬ್ಬರು ಆಟಗಾರರ ಬ್ಯಾಟಿಂಗ್ ಪ್ರದರ್ಶನವನ್ನು ನಾವು ಹೋಲಿಕೆ ಮಾಡುವುದು ನ್ಯಾಯವಲ್ಲ ಎಂಬ ಅಭಿಪ್ರಾಯವನ್ನು ಗೌತಮ್ ಗಂಭೀರ್ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಗೌತಮ್ ಗಂಭೀರ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯನ್ನು ಪಡೆದಿರುವ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ ಈಗಲೂ ಕೂಡ ಕೆಕೆಆರ್ ನಾಯಕ ಇಯಾನ್ ಮಾರ್ಗನ್ ಅವರಿಗಿಂತ ಉತ್ತಮ ಪ್ರದರ್ಶನ ನೀಡುತ್ತಾರೆ ಎಂದಿದ್ದಾರೆ. ಇಯಾನ್ ಮಾರ್ಗನ್ ಇಂಗ್ಲೆಂಡ್ ತಂಡದ ಸೀಮಿತ ಓವರ್‌ಗಳ ಹಾಲಿ ನಾಯಕ ಎಂಬುದು ಗಮನಾರ್ಹ ಸಂಗತಿ.

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಫೈನಲ್ ಪಂದ್ಯದ ಹಿನ್ನೆಲೆಯಲ್ಲಿ ಗೌತಮ್ ಗಂಭೀರ್ ಇಎಸ್‌ಪಿಎನ್‌ಗೆ ಪ್ರತಿಕ್ರಿಯಿಸಿದ್ದಾರೆ. ಈ ಸಂದರ್ಭದಲ್ಲಿ ಗೌತಮ್ ಗಂಭೀರ್ ಬಳಿ ಈ ಎರಡು ತಂಡಗಳ ಒಟ್ಟಾರೆ ಪ್ರದರ್ಶನ ಹೊರತು ಪಡಿಸಿ ನಾಯಕರಿಬ್ಬರ ಫಾರ್ಮ್ ಬಗ್ಗೆ ಪ್ರಶ್ನೆಯನ್ನು ಕೇಳಲಾಯಿತು. ಇದಕ್ಕೆ ಗಂಭೀರ್ ಕುತೂಹಲಕಾರಿ ಉತ್ತರವನ್ನು ನೀಡಿದ್ದಾರೆ.

"ಎಂಎಸ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯನ್ನು ಪಡೆದುಕೊಂಡಿದ್ದಾರೆ. ಹಾಗಾಗಿ ಅವರ ಫಾರ್ಮ್‌ಅನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸಕ್ರಿಯ ಆಟಗಾರನೊಂದಿಗೆ ಹೋಲಿಕೆ ಮಾಡುವುದು ಸರಿಯಲ್ಲ. ಅದರಲ್ಲೂ ಇಯಾನ್ ಮಾರ್ಗನ್ ತಮ್ಮ ರಾಷ್ಟ್ರೀಯ ತಂಡವನ್ನು ಸೀಮಿತ ಓವರ್‌ಗಳ ಮಾದರಿಯಲ್ಲಿ ಮುನ್ನಡೆಸುತ್ತಿದ್ದಾರೆ. ಎಂಎಸ್ ಧೋನಿ ಬಹಳ ಕಾಲದಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿಲ್ಲ. ಹೀಗಿದ್ದರೂ ಅವರು ಫಾರ್ಮ್‌ನಲ್ಲಿಲ್ಲದಿದ್ದರೆ ಅಥವಾ ಕಡಿಮೆ ಕೊಡುಗೆ ನೀಡುತ್ತಿದ್ದರೆ ಅದನ್ನು ಒಪ್ಪಿಕೊಳ್ಳಬಹುದು. ಆದರೆ ಇಯಾನ್ ಮಾರ್ಗನ್ ಈಗಲೂ ಅಂತರಾಷ್ಟ್ರೀಯ ಕ್ರಿಕೆಟ್ ಆಡುತ್ತಿದ್ದಾರೆ. ಆದರೆ ನೀವು ಅವರ ಪ್ರದರ್ಶನವನ್ನು ನೋಡಿದರೆ ಎಂಎಸ್ ಧೋನಿ ಬ್ಯಾಟಿಂಗ್‌ನಲ್ಲಿಯೂ ಇಯಾನ್ ಮಾರ್ಗನ್‌ಗಿಂತ ಉತ್ತಮವಾಗಿ ಪ್ರದರ್ಶನ ನೀಡುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ" ಎಂದು ಎಂಎಸ್ ಧೋನಿ ಪ್ರದರ್ಶನಕ್ಕೆ ಗಂಭೀರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

IPL ಟ್ರೋಫಿ ಗೆಲ್ಲೋದಕ್ಕೆ ಅರ್ಹವಾಗಿರೋರು ನಾವಲ್ಲ ಎಂದ ಧೋನಿ!ಮತ್ಯಾರು? | Oneindia Kannada

ಇಷ್ಟು ಮಾತ್ರವಲ್ಲದೆ ಧೋನಿ ಇಯಾನ್ ಮಾರ್ಗನ್‌ಗಿಂತ ಉತ್ತಮ ಎನ್ನಲು ಗಂಭೀರ್ ಮತ್ತೊಂದು ಅಂಶವನ್ನು ಕೂಡ ಉಲ್ಲೇಖಿಸಿದ್ದಾರೆ. ಎಂಎಸ್ ಧೋನಿ ನಾಯಕತ್ವದ ಜೊತೆಗೆ ವಿಕೆಟ್ ಕೀಪಿಂಗ್ ಕೂಡ ಮಾಡುತ್ತಾರೆ. ಅಂದರೆ ಅವರು ಬ್ಯಾಟಿಂಗ್ ನಾಯಕತ್ವ ಹಾಗೂ ವಿಕೆಟ್ ಕೀಪಿಂಗ್‌ನಲ್ಲಿ ಮೂರು ವಿಭಾಗಗಳನ್ನು ನಿಭಾಯಿಸುತ್ತಾರೆ. ಆದರೆ ಮಾರ್ಗನ್ ನಿರ್ವಹಿಸುತ್ತಿರುವುದು ಎರಡು ವಿಭಾಗಗಳನ್ನು ಮಾತ್ರ, ಅದರಲ್ಲೂ ಒಂದು ವಿಭಾಗದಲ್ಲಿ ಸಂಪೂರ್ಣವಾಗಿ ಅವರು ವೈಫಲ್ಯತೆಯನ್ನು ಅನುಭವಿಸಿದ್ದಾರೆ. ಹೀಗಾಗಿ ಎಂಎಸ್ ಧೋನಿ ಹಾಗೂ ಇಯಾನ್ ಮಾರ್ಗನ್ ಫಾರ್ಮ್ ಬಗ್ಗೆ ನಾವು ಹೋಲಿಕೆ ಮಾಡುವುದು ಸಂಪೂರ್ಣ ತಪ್ಪಾಗುತ್ತದೆ" ಎಂದಿದ್ದಾರೆ ಗಂಭೀರ್.

Story first published: Friday, October 15, 2021, 15:06 [IST]
Other articles published on Oct 15, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X