ಐಪಿಎಲ್ 2021 ದ್ವಿತೀಯ ಹಂತದ ಪಂದ್ಯಗಳಿಗೆ ಅಭಿಮಾನಿಗಳಿಗೆ ಸ್ಟೇಡಿಯಂಗೆ ಪ್ರವೇಶ?!

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) ದ್ವಿತೀಯ ಹಂತದ ಪಂದ್ಯಗಳ ವೇಳೆ ಯುನೈಟೆಡ್ ಅರಬ್ ಎಮಿರೇಟ್ಸ್‌ನ ಸ್ಟೇಡಿಯಂಗಳಿಗೆ ಪ್ರೇಕ್ಷಕರಿಗೆ ಅನುಮತಿ ನೀಡಲು ಐಪಿಎಲ್ ಆಡಳಿತ ಮಂಡಳಿ ಯೋಚಿಸುತ್ತಿದೆ. ಪ್ರೇಕ್ಷಕರಿಗೆ ಅವಕಾಶ ನೀಡುವಂತೆ ಕೋರಿ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಎಮಿರೇಟ್ಸ್ ಕ್ರಿಕೆಟ್ ಬೋರ್ಡ್ (ಇಸಿಬಿ) ಮೊರೆ ಹೋಗಿದೆ ಎನ್ನಲಾಗಿದೆ.

ಐಪಿಎಲ್‌ನಲ್ಲಿ ತನ್ನ ಆಟಗಾರರು ಆಡುವ ಬಗ್ಗೆ ಕ್ರಿಕೆಟ್ ಆಸ್ಟ್ರೇಲಿಯಾ ಹಾಗೂ ಇಸಿಬಿ ಅಧಿಕೃತ ಘೋಷಣೆಐಪಿಎಲ್‌ನಲ್ಲಿ ತನ್ನ ಆಟಗಾರರು ಆಡುವ ಬಗ್ಗೆ ಕ್ರಿಕೆಟ್ ಆಸ್ಟ್ರೇಲಿಯಾ ಹಾಗೂ ಇಸಿಬಿ ಅಧಿಕೃತ ಘೋಷಣೆ

ಸೆಪ್ಟೆಂಬರ್‌ 19ರಿಂದ ಅಕ್ಟೋಬರ್‌ 13ರ ವರೆಗೆ ಐಪಿಎಲ್ ದ್ವಿತೀಯ ಹಂತ ಪಂದ್ಯಗಳು ನಡೆಯಲಿವೆ. ಅಸಲಿಗೆ ಐಪಿಎಲ್ 2021ರ ಆವೃತ್ತಿ ಭಾರತದಲ್ಲಿ ನಡೆದಿತ್ತು. ಆದರೆ ಕೋವಿಡ್-19 ಭೀತಿಯಿಂದಾಗಿ ಟೂರ್ನಿ ಅರ್ಧಕ್ಕೆ ನಿಲ್ಲಿಸಲ್ಪಟ್ಟಿತ್ತು. ಅಂದು ನಿಲ್ಲಿಸಲಾದ ಟೂರ್ನಿಯ ಇನ್ನುಳಿದ ಪಂದ್ಯಗಳು ಯುಎಇಯಲ್ಲಿ ನಡೆಯಲಿದೆ.

ಅನಿವಾರ್ಯವಾಗಿ ನಿಲ್ಲಿಸಲ್ಪಟ್ಟಿದ್ದ ಐಪಿಎಲ್
ಭಾರತದಲ್ಲಿ ಒಟ್ಟು 29 ಪಂದ್ಯಗಳು ನಡೆದಿದ್ದವು. ಇನ್ನು 31 ಪಂದ್ಯಗಳು ಯುಎಇಯಲ್ಲಿ ನಡೆಯಲಿದೆ. ಐಪಿಎಲ್ ಫ್ರಾಂಚೈಸಿಗಳಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದರಿಂದ ಅನಿವಾರ್ಯವಾಗಿ ಟೂರ್ನಿ ಅರ್ಧಕ್ಕೆ ನಿಲ್ಲಿಸಲ್ಪಟ್ಟು ಮುಂದೂಡಲಾಗಿತ್ತು. ನಡೆಯಲಿರುವ 31 ಪಂದ್ಯಗಳಲ್ಲಿ 13 ಪಂದ್ಯಗಳು ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿವೆ. ಮೊದಲ ಕ್ವಾಲಿಫೈಯರ್ ಮತ್ತು ಫೈನಲ್ ಪಂದ್ಯಗಳು ಇದೇ ಸ್ಟೇಡಿಯಂನಲ್ಲಿ ನಡೆಯಲಿವೆ. ಶಾರ್ಜಾ ಸ್ಟೇಡಿಯಂನಲ್ಲಿ 10 ಪಂದ್ಯಗಳು ನಡೆಯಲಿವೆ. ಇದರಲ್ಲಿ ದ್ವಿತೀಯ ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯ ಸೇರಿದೆ. ಐಪಿಎಲ್ ದ್ವಿತೀಯ ಹಂತದ ಐಪಿಎಲ್ ಪಂದ್ಯಗಳ ವೇಳೆ ಒಟ್ಟು 7 ಡಬಲ್ ಹೆಡ್ಡರ್ ಪಂದ್ಯಗಳು ನಡೆಯಲಿವೆ. ಅಂದ್ಹಾಗೆ, ಭಾರತದಲ್ಲಿ ನಡೆದಿದ್ದ ಐಪಿಎಲ್ ವೇಳೆ ಮೈದಾನಗಳಿಗೆ ಪ್ರೇಕ್ಷಕರ ಪ್ರವೇಶಕ್ಕೆ ಅವಕಾಶ ನೀಡಿರಲಿಲ್ಲ. ಪಂದ್ಯಗಳ ವೇಳೆ ಕೃತಕ ಧ್ವನಿಯ ಮೂಲಕ ಮೈದಾನದಲ್ಲಿ ಪ್ರೇಕ್ಷಕರು ಇರುವಂತೆ ಮಾಡಲಾಗಿತ್ತು.

ವಿಡಿಯೋ: ಧೋನಿ, ಸುರೇಶ್ ರೈನಾ ಮತ್ತು ವಿರಾಟ್ ಕೊಹ್ಲಿ ಜೊತೆ ನಟಿಸಿದ್ದ ಉನ್ಮುಕ್ತ್ ಚಂದ್ವಿಡಿಯೋ: ಧೋನಿ, ಸುರೇಶ್ ರೈನಾ ಮತ್ತು ವಿರಾಟ್ ಕೊಹ್ಲಿ ಜೊತೆ ನಟಿಸಿದ್ದ ಉನ್ಮುಕ್ತ್ ಚಂದ್

ಯುಎಇ ತಲುಪಿದ ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್ ತಂಡ
ಐಪಿಎಲ್‌ನ ಹಾಲಿ ಮತ್ತು ಮಾಜಿ ಚಾಂಪಿಯನ್ಸ್ ತಂಡಗಳಾದ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಈಗಾಗಲೇ ಯುಎಇ ತಲುಪಿವೆ. ಐಪಿಎಲ್ ದ್ವಿತೀಯ ಹಂತದಲ್ಲಿ ಮೊದಲ ಪಂದ್ಯದಲ್ಲಿ ಇತ್ತಂಡಗಳು ಕಾದಾಡಲಿರುವುದರಿಂದ ಮುಂಬೈ, ಚೆನ್ನೈ ಶೀಘ್ರ ಅಭ್ಯಾಸ ಶುರು ಮಾಡಲಿವೆ. ಮುಂಬೈ ಇಂಡಿಯನ್ಸ್ ಟ್ವಿಟರ್ ಖಾತೆ ಮತ್ತು ಇನ್‌ಸ್ಟಾಗ್ರಾಮ್ ಖಾತೆಗಳಲ್ಲೂ ತಂಡ ಯುಎಇಗೆ ತಲುಪಿರುವ ಬಗ್ಗೆ ಫೋಟೋಗಳನ್ನು ಹಾಕಿಕೊಳ್ಳಲಾಗಿದೆ. ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಾಕಿಕೊಳ್ಳಲಾಗಿದ್ದು, ಇದರಲ್ಲಿ, 'ಮುಂಬೈ ತಂಡ ಯುಎಇಗೆ ತಲುಪಿದೆ' ಎಂದು ಬರೆದುಕೊಳ್ಳಾಗಿದೆ. ಐಪಿಎಲ್ 2ನೇ ಹಂತದ ಪಂದ್ಯಗಳ ವೇಳೆ ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಮತ್ತು ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕಾದಾಡಲಿರುವುದರಿಂದ ಸದ್ಯ ಎರಡೂ ತಂಡಗಳು ಯುಎಇಗೆ ತಲುಪಿದೆ. ಸಿಎಸ್‌ಕೆ ಕೂಡ ತಂಡ ಯುಎಇ ತಲುಪಿರುವುದಕ್ಕೆ ಪೋಸ್ಟ್‌ಗಳನ್ನು ಹಾಕಿಕೊಂಡಿದೆ. ತಂಡದ ಪ್ರಮುಖ ಆಲ್ ರೌಂಡರ್ ಸುರೇಶ್ ರೈನಾ ದುಬೈಯಲ್ಲಿರುವ ಫೋಟೋವನ್ನು ಟ್ವಿಟರ್‌ನಲ್ಲಿ ಹಾಕಿಕೊಂಡಿದ್ದಾರೆ.

ದ್ವಿತೀಯ ಹಂತದ ಐಪಿಎಲ್ ವೇಳೆ ಬಯೋಬಬಲ್ ನಿರ್ಬಂಧ ಸಡಿಲಿಕೆ
ದ್ವಿತೀಯ ಹಂತದ ಐಪಿಎಲ್ ವೇಳೆ ಬಯೋಬಬಲ್ ನಿರ್ಬಂಧ ಸಡಿಲಿಕೆ ಮಾಡಲಾಗಿದೆ. ಐಪಿಎಲ್ ದ್ವಿತೀಯ ಹಂತದ ಪಂದ್ಯಗಳು ಆರಂಭವಾಗುವಾಗ ಇಂಗ್ಲೆಂಡ್, ವೆಸ್ಟ್ ಇಂಡೀಸ್ ಮತ್ತು ಶ್ರೀಲಂಕಾ ಆಟಗಾರರು, ಸಿಬ್ಬಂದಿಗಳು ಪ್ರವಾಸ ಸರಣಿಯಲ್ಲಿರುತ್ತಾರೆ. ಅವರೆಲ್ಲಾ ಬಯೋಬಬಲ್ ಒಳಗೇ ಇರುವುದರಿಂದ ಅಲ್ಲಿನ ಬಯೋಬಬಲ್‌ನಿಂದ ನೇರವಾಗಿ ಯುಎಇಯಲ್ಲಿರುವ ಐಪಿಎಲ್ ಬಯೋಬಬಲ್‌ಗೆ ಪ್ರವೇಶಿಸಬಹುದು ಎಂದು ಬಿಸಿಸಿಐ ಹೇಳಿದೆ. ಹೀಗಾಗಿ ಐಪಿಎಲ್‌ನಲ್ಲಿ ಪಾಲ್ಗೊಳ್ಳುವ ಇಂಗ್ಲೆಂಡ್, ವೆಸ್ಟ್ ಇಂಡೀಸ್ ಮತ್ತು ಶ್ರೀಲಂಕಾ ಆಟಗಾರರು ಐಪಿಎಲ್ ಆರಂಭಕ್ಕೂ ಮುನ್ನ ಬೇರೆ ಬಯೋಬಬಲ್ ಒಳಗಿದ್ದರೆ ಅವರು ನೇರವಾಗಿ ಐಪಿಎಲ್ ಬಯೋಬಬಲ್ ಒಳಗೆ ಪ್ರವೇಶಿಸಬಹುದು ಎಂದು ಬಿಸಿಸಿಐ ಹೇಳಿದೆ. ಅಂದ್ಹಾಗೆ ಐಪಿಎಲ್ ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆಗಸ್ಟ್ 13ರಂದು ಐಪಿಎಲ್‌ಗಾಗಿ ಯುಎಇಗೆ ತೆರಳಲಿದೆ. ಯುಎಇಗೆ ತೆರಳುವುದಕ್ಕೂ ಮುನ್ನ ಎಲ್ಲಾ 8 ತಂಡಗಳ ಆಟಗಾರರು ಕೋವಿಡ್-19 ವ್ಯಾಕ್ಸಿನೇಶನ್ ಮುಗಿಸಿರಬೇಕು ಎಂದು ಬಿಸಿಸಿಐ ತಿಳಿಸಿದೆ. ಆದರೆ ಕೆಲ ವಿದೇಶಿ ಆಟಗಾರರು ದ್ವಿತೀಯ ಹಂತದಲ್ಲಿ ಭಾಗವಹಿಸೋದು ಅನುಮಾನವೆನಿಸಿದೆ.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 22 - October 28 2021, 07:30 PM
ಆಸ್ಟ್ರೇಲಿಯಾ
ಶ್ರೀಲಂಕಾ
Predict Now

For Quick Alerts
ALLOW NOTIFICATIONS
For Daily Alerts
Story first published: Saturday, August 14, 2021, 20:38 [IST]
Other articles published on Aug 14, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X