ಒಂದು ಬಾಲ್ ಕೂಡ ಬೌಲಿಂಗ್ ಮಾಡಿಲ್ಲ; ಟೂರ್ನಿಯಿಂದ ಹೊರಬಿದ್ದ ನಂತರ ಹಾರ್ದಿಕ್ ಸಮಸ್ಯೆ ಬಿಚ್ಚಿಟ್ಟ ರೋಹಿತ್

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಅಕ್ಟೋಬರ್ 8ರ ಶುಕ್ರವಾರಕ್ಕೆ ಸಂಪೂರ್ಣವಾಗಿ ಮುಕ್ತಾಯಗೊಂಡಿವೆ. ಈ ಮೂಲಕ ಪ್ಲೇ ಆಫ್ ಪ್ರವೇಶಿಸಿರುವ ನಾಲ್ಕನೇ ತಂಡ ಯಾವುದು ಎಂಬ ಸ್ಪಷ್ಟ ಚಿತ್ರಣವೂ ಕೂಡ ಸಿಕ್ಕಿದೆ. ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಜತೆಗೆ ಕೋಲ್ಕತ್ತಾ ನೈಟ್ ರೈಡರ್ಸ್ ಕೂಡ ಪ್ಲೇ ಆಫ್ ಸುತ್ತಿಗೆ ಪ್ರವೇಶ ಪಡೆದುಕೊಂಡಿದೆ.

ಐಪಿಎಲ್ 2021 ಪ್ಲೇಆಫ್: ಎಲ್ಲಾ ಪಂದ್ಯಗಳ ವಿವರ, ಸ್ಥಳ, ದಿನಾಂಕ ಮತ್ತು ಸಮಯದ ಸಂಪೂರ್ಣ ಮಾಹಿತಿಐಪಿಎಲ್ 2021 ಪ್ಲೇಆಫ್: ಎಲ್ಲಾ ಪಂದ್ಯಗಳ ವಿವರ, ಸ್ಥಳ, ದಿನಾಂಕ ಮತ್ತು ಸಮಯದ ಸಂಪೂರ್ಣ ಮಾಹಿತಿ

ಮೊದಲಿಗೆ ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಅಧಿಕೃತವಾಗಿ ಪ್ಲೇ ಆಫ್ ಪ್ರವೇಶವನ್ನು ಪಡೆದುಕೊಂಡವು. ನಂತರ ನಾಲ್ಕನೇ ತಂಡವಾಗಿ ಯಾವ ತಂಡ ಪ್ಲೇ ಆಫ್ ಪ್ರವೇಶಿಸಲು ಅರ್ಹತೆಯನ್ನು ಪಡೆದುಕೊಳ್ಳಲಿದೆ ಎಂಬ ಕುತೂಹಲ ಹೆಚ್ಚಾಗಿತ್ತು. ಅಂತಿಮ ಹಂತದಲ್ಲಿ ರೋಹಿತ್ ಶರ್ಮ ನೇತೃತ್ವದ ಮುಂಬೈ ಇಂಡಿಯನ್ಸ್ ಮತ್ತು ಇಯಾನ್ ಮಾರ್ಗನ್ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ಪ್ಲೇ ಆಫ್ ಸುತ್ತಿಗೆ ಪ್ರವೇಶಿಸಲಿರುವ ನಾಲ್ಕನೇ ತಂಡದ ಸ್ಥಾನಕ್ಕಾಗಿ ದೊಡ್ಡ ಮಟ್ಟದ ಪೈಪೋಟಿ ಏರ್ಪಟ್ಟಿತ್ತು.

ದೀಪಕ್ ಚಹರ್ ಪ್ರಪೋಸ್ ಮಾಡಿದ ಆ ಹುಡುಗಿ ಯಾರು? ಬಹಿರಂಗವಾಯ್ತು ಇದರ ಹಿಂದೆ ಇದ್ದ ಧೋನಿ ಪ್ಲಾನ್!ದೀಪಕ್ ಚಹರ್ ಪ್ರಪೋಸ್ ಮಾಡಿದ ಆ ಹುಡುಗಿ ಯಾರು? ಬಹಿರಂಗವಾಯ್ತು ಇದರ ಹಿಂದೆ ಇದ್ದ ಧೋನಿ ಪ್ಲಾನ್!

ಆದರೆ ಟೂರ್ನಿ ಮುಗಿದ ನಂತರ ಕೋಲ್ಕತಾ ನೈಟ್ ರೈಡರ್ಸ್ ತಂಡದಷ್ಟೇ ಮುಂಬೈ ಇಂಡಿಯನ್ಸ್ ತಂಡವು ಪಂದ್ಯಗಳನ್ನು ಗೆದ್ದಿದ್ದರೂ ಸಹ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನೆಟ್ ರನ್ ರೇಟ್ ಅಧಿಕವಾಗಿದ್ದ ಕಾರಣದಿಂದಾಗಿ ಮುಂಬೈ ಇಂಡಿಯನ್ಸ್ ತಂಡ ಪ್ಲೇ ಆಫ್ ಪ್ರವೇಶಿಸುವಲ್ಲಿ ವಿಫಲವಾಯಿತು. ಅಂತಿಮವಾಗಿ ಮುಂಬೈ ಇಂಡಿಯನ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ 42 ರನ್‌ಗಳ ಜಯದೊಂದಿಗೆ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಗೆ ವಿದಾಯ ಹೇಳಿದೆ. ಈ ಪಂದ್ಯ ಮುಗಿದ ಬಳಿಕ ಮಾತನಾಡಿರುವ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ತಮ್ಮ ತಂಡದ ಆಟಗಾರನಾದ ಹಾರ್ದಿಕ್ ಪಾಂಡ್ಯ ಸಮಸ್ಯೆ ಕುರಿತು ಮಾತನಾಡಿದ್ದು ಈ ಕೆಳಕಂಡಂತೆ ಹಂಚಿಕೊಂಡಿದ್ದಾರೆ.

ಟೂರ್ನಿಯಲ್ಲಿ ಆತ ಒಂದೇ ಒಂದು ಬಾಲ್ ಕೂಡ ಬೌಲಿಂಗ್ ಮಾಡಲಿಲ್ಲ

ಟೂರ್ನಿಯಲ್ಲಿ ಆತ ಒಂದೇ ಒಂದು ಬಾಲ್ ಕೂಡ ಬೌಲಿಂಗ್ ಮಾಡಲಿಲ್ಲ

ಹಾರ್ದಿಕ್ ಪಾಂಡ್ಯ ಪ್ರಸಕ್ತ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 12 ಪಂದ್ಯಗಳನ್ನಾಡಿದ್ದು ಯಾವುದೇ ಪಂದ್ಯದಲ್ಲಿಯೂ ಸಹ ಬೌಲಿಂಗ್ ಮಾಡುವ ಪ್ರಯತ್ನ ಮಾಡಿಲ್ಲ. ಈ ವಿಷಯದ ಕುರಿತಾಗಿ ಕ್ರಿಕೆಟ್ ಅಭಿಮಾನಿಗಳಲ್ಲಿ ಈ ಹಿಂದಿನಿಂದಲೂ ಸಹ ಗೊಂದಲ ಉಂಟಾಗಿತ್ತು. ಆದರೆ ರೋಹಿತ್ ಶರ್ಮ ಮಾತ್ರ ಈ ಕುರಿತಾಗಿ ಯಾವುದೇ ರೀತಿಯ ಮಾಹಿತಿ ನೀಡಿರಲಿಲ್ಲ. ಇದೀಗ ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡದೇ ಇರುವುದರ ಕುರಿತು ಮಾತನಾಡಿರುವ ರೋಹಿತ್ ಶರ್ಮಾ ಅದರ ಹಿಂದಿನ ಕಾರಣವನ್ನು ಬಿಚ್ಚಿಟ್ಟಿದ್ದಾರೆ. 'ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ಒಂದೇ ಒಂದು ಬಾಲ್ ಕೂಡ ಬೌಲಿಂಗ್ ಮಾಡಿಲ್ಲ. ಸದ್ಯ ಹಾರ್ದಿಕ್ ಪಾಂಡ್ಯರ ವೈದ್ಯರು ಆತ ಬೌಲಿಂಗ್ ಮಾಡುವುದರ ಕುರಿತು ಚಿಕಿತ್ಸೆ ನೀಡುತ್ತಿದ್ದಾರೆ. ಆತ ಮುಂಬರುವ ಪಂದ್ಯವೊಂದರಲ್ಲಿ ಬೌಲಿಂಗ್ ಮಾಡಲು ಮುಂದಾದರೆ ಬೌಲಿಂಗ್ ಮಾಡುವಷ್ಟು ಚೇತರಿಸಿಕೊಂಡಿದ್ದಾರೋ ಅಥವಾ ಇಲ್ಲವೋ ಎಂಬ ವಿಷಯ ತಿಳಿಯಲಿದೆ ' ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

ಆತ ಬೌಲಿಂಗ್ ಮಾಡಲು ಸಮರ್ಥನಾಗಿದ್ದಾನ ಎಂಬುದನ್ನು ಆತನ ವೈದ್ಯರೇ ತಿಳಿಸಬೇಕು

ಆತ ಬೌಲಿಂಗ್ ಮಾಡಲು ಸಮರ್ಥನಾಗಿದ್ದಾನ ಎಂಬುದನ್ನು ಆತನ ವೈದ್ಯರೇ ತಿಳಿಸಬೇಕು

ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡುವಷ್ಟು ಚೇತರಿಸಿಕೊಂಡಿದ್ದಾರಾ ಅಥವಾ ಇಲ್ಲವಾ ಎಂಬುದರ ಕುರಿತು ತಮ್ಮ ಅಭಿಪ್ರಾಯವನ್ನು ತಿಳಿಸಲು ನಿರಾಕರಿಸಿರುವ ರೋಹಿತ್ ಶರ್ಮಾ ಈ ಕುರಿತಾಗಿ ಆತನಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯಕೀಯ ತಂಡವೇ ಮಾಹಿತಿಗಳನ್ನು ನೀಡಬೇಕಾಗಿದೆ ಎಂದಿದ್ದಾರೆ. ಇನ್ನು ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿರುವ ಹಾರ್ದಿಕ್ ಪಾಂಡ್ಯ ಸುಧಾರಿಸಿಕೊಂಡು ಬೌಲಿಂಗ್ ಮಾಡುವಷ್ಟು ಸಿದ್ಧರಾಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಬ್ಯಾಟಿಂಗ್ ಕುರಿತು ಸ್ವತಃ ಹಾರ್ದಿಕ್ ಪಾಂಡ್ಯ ಬೇಸರಕ್ಕೊಳಗಾಗಿದ್ದಾರೆ

ಬ್ಯಾಟಿಂಗ್ ಕುರಿತು ಸ್ವತಃ ಹಾರ್ದಿಕ್ ಪಾಂಡ್ಯ ಬೇಸರಕ್ಕೊಳಗಾಗಿದ್ದಾರೆ

ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ 12 ಪಂದ್ಯಗಳನ್ನಾಡಿರುವ ಹಾರ್ದಿಕ್ ಪಾಂಡ್ಯ 127 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಕುರಿತಾಗಿ ಸ್ವತಃ ಹಾರ್ದಿಕ್ ಪಾಂಡ್ಯ ಅವರಿಗೇ ಬೇಸರವಿದೆ ಎಂಬ ಸಂಗತಿಯನ್ನು ರೋಹಿತ್ ಶರ್ಮಾ ಬಿಚ್ಚಿಟ್ಟಿದ್ದಾರೆ. ಆತ ಓರ್ವ ಪ್ರತಿಭಾವಂತ ಆಟಗಾರನಾಗಿದ್ದು ಕಷ್ಟದ ಸಮಯದಲ್ಲೂ ಉತ್ತಮ ಇನಿಂಗ್ಸ್ ಆಡಿದ್ದಾರೆ ಎಂದು ರೋಹಿತ್ ಶರ್ಮಾ ಹಾರ್ದಿಕ್ ಪಾಂಡ್ಯ ಪರ ಮಾತನಾಡಿದ್ದಾರೆ.

For Quick Alerts
ALLOW NOTIFICATIONS
For Daily Alerts
Story first published: Saturday, October 9, 2021, 13:10 [IST]
Other articles published on Oct 9, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X