ದುಬಾರಿ ಓವರ್ ಎಸೆದು ಬೇಡದ ದಾಖಲೆ ಬರೆದ ಹರ್ಷಲ್ ಪಟೇಲ್

ಅಹ್ಮದಾಬಾದ್: ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಇದರಲ್ಲಿ ಆರ್‌ಸಿಬಿ ವೇಗಿ ಹರ್ಷಲ್ ಪಟೇಲ್ ಬೇಡದ ದಾಖಲೆಗೆ ಕಾರಣರಾಗಿದ್ದಾರೆ.
ಐಪಿಎಲ್‌ನಲ್ಲಿ ಅತ್ಯಧಿಕ ರನ್ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಹರ್ಷಲ್ ಪಟೇಲ್ ಮೊದಲ ಸ್ಥಾನದಲ್ಲಿದ್ದಾರೆ. ಒಟ್ಟು 7 ಪಂದ್ಯಗಳನ್ನಾಡಿರುವ ಹರ್ಷಲ್ 17 ವಿಕೆಟ್‌ಗಳನ್ನು ಪಡೆದುಕೊಂಡಿದ್ದಾರೆ. ಆದರೆ ಕೊನೇ ಓವರ್‌ನಲ್ಲಿ ಅತೀ ಹೆಚ್ಚು ರನ್ ನೀಡಿದ ದಾಖಲೆ ಪಟ್ಟಿಯಲ್ಲೂ ಹರ್ಷಲ್ ಗುರುತಿಸಿಕೊಂಡಿದ್ದಾರೆ.
ಶುಕ್ರವಾರ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಪಟೇಲ್ ಕೊನೇ ಓವರ್‌ನಲ್ಲಿ 22 ರನ್ ನೀಡಿದ್ದರು. 4 ಓವರ್ ಎಸೆದಿದ್ದ ಪಟೇಲ್ 53 ರನ್ ನೀಡಿ ಒಂದೂ ವಿಕೆಟ್ ಪಡೆದಿರಲಿಲ್ಲ. ಪಟೇಲ್ ದುಬಾರಿಯಾಗಿದ್ದರಿಂದಲೇ ಪಂಜಾಬ್ ಮೊದಲ ಇನ್ನಿಂಗ್ಸ್‌ನಲ್ಲಿ 179 ರನ್ ಬಾರಿಸಲು ಸಾಧ್ಯವಾಗಿತ್ತು.
ಇದಕ್ಕೂ ಹಿಂದಿನ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲೂ ಹರ್ಷಲ್ ದುಬಾರಿ ಬೌಲರ್ ಎನಿಸಿದ್ದರು. ಆವತ್ತು ಕೂಡ ಹರ್ಷಲ್ ಕೊನೇ ಓವರ್‌ನಲ್ಲಿ 37 ರನ್ ನೀಡಿದ್ದರು. ಅಂದಿನ ಪಂದ್ಯದಲ್ಲೂ ಚೆನ್ನೈ ತಂಡ 69 ರನ್‌ನಿಂದ ಸೋತಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications