ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಆರ್‌ಸಿಬಿ ಪರ ಹೊಸ ದಾಖಲೆ ಬರೆದ ಹರ್ಷಲ್ ಪಟೇಲ್

IPL 2021: Harshal Patel creates record as most wickets taker in a single IPL edition

ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ವೇಗಿ ಹರ್ಷಲ್ ಪಟೇಲ್ ಇಂಡಿಯನ್ ಪ್ರೀಮಿಯರ್ ಲೀಗ್‌ ಇತಿಹಾಸದಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಅನ್‌ ಕ್ಯಾಪ್ಡ್‌ ಆಟಗಾರನಾಗಿ ಐಪಿಎಲ್ ಸೀಸನ್ ಒಂದರಲ್ಲಿ ಅತ್ಯಧಿಕ ವಿಕೆಟ್ ಪಡೆದ ಆಟಗಾರನಾಗಿ ಪಟೇಲ್ ದಾಖಲೆ ನಿರ್ಮಿಸಿದ್ದಾರೆ. ಬುಧವಾರ (ಸೆಪ್ಟೆಂಬರ್ 29) ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಪಟೇಲ್ ಈ ಸಾಧನೆ ಮಾಡಿದ್ದಾರೆ.

ಐಪಿಎಲ್ 2021: ಟೂರ್ನಿ ಮಧ್ಯದಲ್ಲಿಯೇ ಮುಂಬೈ ಇಂಡಿಯನ್ಸ್‌ನಿಂದ ಅರ್ಜುನ್ ತೆಂಡೂಲ್ಕರ್ ಔಟ್!ಐಪಿಎಲ್ 2021: ಟೂರ್ನಿ ಮಧ್ಯದಲ್ಲಿಯೇ ಮುಂಬೈ ಇಂಡಿಯನ್ಸ್‌ನಿಂದ ಅರ್ಜುನ್ ತೆಂಡೂಲ್ಕರ್ ಔಟ್!

ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಐಪಿಎಲ್ 43ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ವೇಳೆ ಆರ್‌ಸಿಬಿ ಮಧ್ಯಮ ವೇಗಿ ಮೂರು ವಿಕೆಟ್ ಪಡೆಯುವ ಮೂಲಕ ಐಪಿಎಲ್ ಸೀಸನ್ ಒಂದರಲ್ಲಿ ಅತ್ಯಧಿಕ ವಿಕೆಟ್‌ ದಾಖಲೆ ನಿರ್ಮಿಸಿದ್ದಾರೆ.

ಪಂದ್ಯಕ್ಕೂ ಮುನ್ನ ಹರ್ಷಲ್ ಪಟೇಲ್ 23 ವಿಕೆಟ್ ಪಡೆದಿದ್ದರು. ಪಂದ್ಯದಲ್ಲಿ ಪಟೇಲ್ ರಿಯಾನ್ ಪರಾಗ್, ಕ್ರಿಸ್ ಮೋರಿಸ್ ಮತ್ತು ಚೇತನ್ ಸಕಾರಿಯಾ ವಿಕೆಟ್ ಪಡೆದರು. ಈಗ 26 ವಿಕೆಟ್‌ಗಳೊಂದಿಗೆ ಹರ್ಷಲ್ ಐಪಿಎಲ್ ನಲ್ಲಿ ಆರ್‌ಸಿಬಿ ಪರ ಅತ್ಯಧಿಕ ವಿಕೆಟ್‌ ಪಡೆದ ದಾಖಲೆ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದಾರಲ್ಲದೆ, ಅನ್‌ಕ್ಯಾಪ್ಡ್ ಆಟಗಾರರಲ್ಲಿ ಐಪಿಎಲ್‌ನಲ್ಲಿ ಹೆಚ್ಚು ವಿಕೆಟ್ ಪಡೆದ ಮೊದಲ ಆಟಗಾರನಾಗಿ ಆಗಿ ಗಮನ ಸೆಳೆದಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಕೊಹ್ಲಿ, ಶಾಸ್ತ್ರಿಗೆ ಎಲ್ಲರಿಗಿಂತ ಸಿಎಸ್‌ಕೆಯ ಈ ಆಟಗಾರನೇ ಫೇವರಿಟ್ ಎಂದ ನೆಹ್ರಾಟಿ20 ವಿಶ್ವಕಪ್‌ನಲ್ಲಿ ಕೊಹ್ಲಿ, ಶಾಸ್ತ್ರಿಗೆ ಎಲ್ಲರಿಗಿಂತ ಸಿಎಸ್‌ಕೆಯ ಈ ಆಟಗಾರನೇ ಫೇವರಿಟ್ ಎಂದ ನೆಹ್ರಾ

ಅನ್‌ಕ್ಯಾಪ್ಡ್ ಆಟಗಾರರಲ್ಲಿ ಐಪಿಎಲ್‌ನಲ್ಲಿ ಸೀಸನ್ ಒಂದರಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ದಾಖಲೆ ಪಟ್ಟಿಯಲ್ಲಿ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಮೊದಲ ಸ್ಥಾನ ಪಡೆದಿದ್ದರು. 2015ರಲ್ಲಿ ಚಾಹಲ್ 15 ಪಂದ್ಯಗಳಲ್ಲಿ 23 ವಿಕೆಟ್ ಪಡೆದಿದ್ದರು. ಹರ್ಷಲ್ ಕೇವಲ 11 ಇನ್ನಿಂಗ್ಸ್‌ಗಳಲ್ಲಿ 26 ವಿಕೆಟ್ ಪಡೆದು ಈ ದಾಖಲೆ ನಿರ್ಮಿಸಿದ್ದಾರೆ. ಅಷ್ಟೇ ಅಲ್ಲ, ಈ ಐಪಿಎಲ್ ಸೀಸನ್‌ನಲ್ಲಿ ಅತ್ಯಧಿಕ ವಿಕೆಟ್‌ಗಾಗಿ ನೀಡಲಾಗುವ ಪರ್ಪಲ್ ಕ್ಯಾಪ್ ಗೌರವ ಕೂಡ ಹರ್ಷಲ್ ಅವರದ್ದಾಗಿದೆ.

'ಮತ್ತೊಮ್ಮೆ ಕಪ್ ಗೆದ್ದು ಇತಿಹಾಸ ಸೃಷ್ಟಿಸೋಣ' ಎಂದು ರೋಹಿತ್ ಶರ್ಮಾಗೆ ಹೇಳಿದ ಸೂರ್ಯಕುಮಾರ್ ಯಾದವ್'ಮತ್ತೊಮ್ಮೆ ಕಪ್ ಗೆದ್ದು ಇತಿಹಾಸ ಸೃಷ್ಟಿಸೋಣ' ಎಂದು ರೋಹಿತ್ ಶರ್ಮಾಗೆ ಹೇಳಿದ ಸೂರ್ಯಕುಮಾರ್ ಯಾದವ್

ಐಪಿಎಲ್‌ ಸೀಸನ್ ಒಂದರಲ್ಲಿ ಅನ್‌ಕ್ಯಾಪ್ಡ್ ಆಟಗಾರರಲ್ಲಿ ಅತೀ ಹೆಚ್ಚು ವಿಕೆಟ್ ಪಡೆದವರ ಪಟ್ಟಿ
* ಯುಜುವೇಂದ್ರ ಚಾಹಲ್, ಆರ್‌ಸಿಬಿ, 26* ವಿಕೆಟ್‌ಗಳು, 2021
* ಶ್ರೀನಾಥ್ ಅರವಿಂದ್, ಆರ್‌ಸಿಬಿ, 23 ವಿಕೆಟ್‌ಗಳು, 2015
* ಸಿದ್ಧಾರ್ಥ್ ಕೌಲ್, ಎಸ್‌ಆರ್‌ಎಚ್, 21 ವಿಕೆಟ್‌ಗಳು, 2018

ಟಿ20 ಕ್ರಿಕೆಟ್‌ನಲ್ಲಿ 7000 ರನ್ ಬಾರಿಸಿದ ಆಸ್ಟ್ರೇಲಿಯಾ ಬ್ಯಾಟ್ಸ್‌ಮನ್‌ಗಳ ಪಟ್ಟಿಟಿ20 ಕ್ರಿಕೆಟ್‌ನಲ್ಲಿ 7000 ರನ್ ಬಾರಿಸಿದ ಆಸ್ಟ್ರೇಲಿಯಾ ಬ್ಯಾಟ್ಸ್‌ಮನ್‌ಗಳ ಪಟ್ಟಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI
ವಿರಾಟ್ ಕೊಹ್ಲಿ (ಸಿ), ದೇವದತ್ ಪಡಿಕ್ಕಲ್, ಶ್ರೀಕರ್ ಭಾರತ್ (ವಿಕೆ), ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿವಿಲಿಯರ್ಸ್, ಡೇನಿಯಲ್ ಕ್ರಿಶ್ಚಿಯನ್, ಜಾರ್ಜ್ ಗಾರ್ಟನ್, ಶಹಬಾಜ್ ಅಹ್ಮದ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್.
ಬೆಂಚ್: ಕೈಲ್ ಜೇಮೀಸನ್, ದುಷ್ಮಂತ ಚಮೀರಾ, ಸಚಿನ್ ಬೇಬಿ, ನವದೀಪ್ ಸೈನಿ, ಪವನ್ ದೇಶಪಾಂಡೆ, ರಜತ್ ಪಾಟಿದಾರ್, ಮೊಹಮ್ಮದ್ ಅಜರುದ್ದೀನ್, ವಾನಿಂದು ಹಸರಂಗ, ಸುಯಾಶ್ ಪ್ರಭುದೇಸಾಯಿ, ಟಿಮ್ ಡೇವಿಡ್, ಆಕಾಶ್ ದೀಪ್.

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI
ಎವಿನ್ ಲೂಯಿಸ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (c & wk), ಲಿಯಾಮ್ ಲಿವಿಂಗ್ಸ್ಟೋನ್, ಮಹಿಪಾಲ್ ಲೊಮ್ರರ್, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಕ್ರಿಸ್ ಮೋರಿಸ್, ಕಾರ್ತಿಕ್ ತ್ಯಾಗಿ, ಚೇತನ್ ಸಕಾರಿಯಾ, ಮುಸ್ತಫಿಜುರ್ ರಹಮಾನ್.
ಬೆಂಚ್: ತಬ್ರೇಜ್ ಶಮ್ಸಿ, ಶ್ರೇಯಸ್ ಗೋಪಾಲ್, ಡೇವಿಡ್ ಮಿಲ್ಲರ್, ಮನನ್ ವೊಹ್ರಾ, ಕೆಸಿ ಕಾರಿಯಪ್ಪ, ಗ್ಲೆನ್ ಫಿಲಿಪ್ಸ್, ಶಿವಂ ದೂಬೆ, ಓಶಾನೆ ಥಾಮಸ್, ಮಯಾಂಕ್ ಮಾರ್ಕಂಡೆ, ಅನುಜ್ ರಾವತ್, ಜೆರಾಲ್ಡ್ ಕೋಟ್ಜಿ, ಕುಲ್‌ದೀಪ್ ಯಾದವ್, ಆಕಾಶ್ ಸಿಂಗ್, ಜಯದೇವ್ ಉನಾದ್ಕತ್.

Story first published: Thursday, September 30, 2021, 10:02 [IST]
Other articles published on Sep 30, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X